More

    ಶಾಲೆಗಳಲ್ಲಿ ಸ್ವಚ್ಛತೆಗೂ ಆದ್ಯತೆ ನೀಡಿ

    ಚಿಕ್ಕಮಗಳೂರು: ದೇಶಕ್ಕೆ ಸ್ವಾತಂತ್ರೃ ತಂದುಕೊಟ್ಟ ಮಹಾತ್ಮ ಗಾಂಧಿ ಅವರು ಸ್ವಚ್ಛತೆಗೆ ಮೊದಲ ಆದ್ಯತೆ ಕೊಡಬೇಕೆಂದು ಹೇಳಿದ್ದಾರೆ. ಅದರಂತೆ ಶೌಚಗೃಹಗಳು ಸ್ವಚ್ಛವಾಗಿದ್ದರೆ ಕುಟುಂಬದ ಆರೋಗ್ಯವೂ ಸ್ವಸ್ಥವಾಗಿರುತ್ತದೆ ಎಂದು ಶಾಸಕ ಎಚ್.ಡಿ.ತಮ್ಮಯ್ಯ ತಿಳಿಸಿದರು.

    ನಗರದ ಬಸವನಹಳ್ಳಿ ಶಾಸಕರ ಸರ್ಕಾರಿ ಮಾದರಿ ಹೆಣ್ಣು ಮಕ್ಕಳ ಶಾಲೆಯಲ್ಲಿ 13 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಶೌಚಗೃಹ ಮತ್ತು ಗುರುಭವನದಲ್ಲಿ ನಿರ್ಮಿಸಿರುವ ಶೌಚಗೃಹ ಉದ್ಘಾಟಿಸಿ ಮಾತನಾಡಿದರು.
    ಶೌಚಗೃಹ ನಿರ್ಮಾಣ ಎಷ್ಟು ಮುಖ್ಯವೋ ಅದನ್ನು ಸ್ವಚ್ಛವಾಗಿಡುವುದು ಅಷ್ಟೇ ಪ್ರಮುಖ. ನಗರಸಭೆಯಿಂದ ಸ್ವಚ್ಛತೆ ಬಗ್ಗೆ ಅರಿವು ಮೂಡಿಸುವ ಕೆಲಸ ಮಾಡಿದ ಪರಿಣಾಮ ನಾಗರಿಕರಲ್ಲಿ ಸ್ವಚ್ಛತೆ ಬಗ್ಗೆ ಅರಿವು ಮೂಡಿದೆ. ಮನೆಯಲ್ಲಿಯೇ ಕಸ ವಿಂಗಡಣೆ ಮಾಡಿ ಸಂಗ್ರಹ ಗಾಡಿಗೆ ಹಾಕಬೇಕು. ಈ ಸಂಬಂಧ ಶಿಕ್ಷಕರು ಸಭೆ ಕರೆದು ಪಾಲಕರು ಹಾಗೂ ಮಕ್ಕಳಿಗೆ ಅರಿವು ಮೂಡಿಸಬೇಕು. ಮುಂದಿನ ದಿನಗಳಲ್ಲಿ ಪ್ಲಾಸ್ಟಿಕ್‌ಮುಕ್ತ ನಗರವನ್ನಾಗಿಸಲು ಪ್ರತಿಯೊಬ್ಬರೂ ಪಣ ತೊಡಬೇಕು ಎಂದು ಹೇಳಿದರು.
    ನಗರಸಭೆ ಅಧ್ಯಕ್ಷ ವರಸಿದ್ಧಿ ವೇಣುಗೋಪಾಲ್ ಮಾತನಾಡಿ, ಈ ಶಾಲೆಯ ಶೌಚಗೃಹ ಹಳೆಯದಾಗಿತ್ತು. ಹೀಗಾಗಿ ಅದನ್ನು ತೆರವುಗೊಳಿಸಿ ಹೊಸದಾಗಿ ನಿರ್ಮಾಣ ಮಾಡಿದ್ದೇವೆ. ಸ್ವಚ್ಛತೆ ಕಾಪಾಡಲು ಮನವಿ ಮಾಡಿದರು.
    ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಕಿರಣ್, ಪೌರಾಯುಕ್ತ ಬಿ.ಸಿ.ಬಸವರಾಜ್, ಮುಖ್ಯ ಶಿಕ್ಷಕ ಅಶೋಕ್‌ಕುಮಾರ್, ಉಪ ಪ್ರಾಚಾರ್ಯೆ ಚಂದ್ರಮ್ಮ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts