More

    ಕಾನೂನು ಸುವ್ಯವಸ್ಥೆಗೆ ಆದ್ಯತೆ ನೀಡಿ: ಚುನಾವಣಾ ವೀಕ್ಷಕರ ಸೂಚನೆ

    ಬೆಂಗಳೂರು: ಚುನಾವಣೆ ಹಿನ್ನೆಲೆಯಲ್ಲಿ ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಯಾವುದೇ ರೀತಿಯ ಉಲ್ಲಂಘನೆ ಆಗದಂತೆ ಎಚ್ಚರಿಕೆ ವಹಿಸಬೇಕು ಎಂದು ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರದ ಸಾಮಾನ್ಯ ವೀಕ್ಷಕಿ ವಾಣಿ ಮೋಹನ್ ಸೂಚಿಸಿದರು.

    ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಸಂಬಂಧಿಸಿದಂತೆ ನಗರ ಜಿಲ್ಲಾಧಿಕಾರಿಯವರ ಕಚೇರಿಯ ಸಭಾಂಗಣದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಚುನಾವಣೆ ಕಾರ್ಯಕ್ಕೆ ನಿಯೋಜನೆ ಆಗಿರುವ ಅಧಿಕಾರಿಗಳನ್ನು ಉದ್ದೇಶಿಸಿ ಮಾತನಾಡಿದರು.

    ಉತ್ತರ ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿನ 8 ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾ ಅಧಿಕಾರಿಗಳು ಸಮರ್ಪಕವಾಗಿ ಕಾರ್ಯನಿರ್ವಹಿಸಬೇಕು. ಕಾನೂನು ಮತ್ತು ಸುವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ಕರ್ತವ್ಯ ನಿರ್ವಹಿಸಬೇಕು ಎಂದು ಕಿವಿಮಾತು ಹೇಳಿದರು.

    ಬೆಂಗಳೂರು ನಗರ ಜಿಲ್ಲಾಧಿಕಾರಿ ಕೆ.ಎ ದಯಾನಂದ ಮಾತನಾಡಿ, ಉತ್ತರ ಲೋಕಸಭಾ ಕ್ಷೇತ್ರದಲ್ಲಿ 8 ವಿಧಾನಸಭಾ ಕ್ಷೇತ್ರಗಳು ಬರಲಿದ್ದು, ದಾಖಲೆಗಳಿಲ್ಲದ ಹಣ, ಮದ್ಯ, ಮಾದಕ ದ್ರವ್ಯಗಳು ಹಾಗೂ ಇನ್ನಿತರ ವಸ್ತುಗಳ ಮೇಲೆ ಹೆಚ್ಚು ನಿಗಾ ವಹಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.

    ಸಭೆಯಲ್ಲಿ ಜಿಲ್ಲಾ ಎಂಸಿಸಿ ನೋಡಲ್ ಅಧಿಕಾರಿ ಬಾಲಚಂದ್ರ, ಪೊಲೀಸ್ ನೋಡಲ್ ಅಧಿಕಾರಿ ಹಾಗೂ ಬೆಂಗಳೂರು ಉತ್ತರ ವಿಭಾಗದ ಉಪ ಪೊಲೀಸ್ ಆಯುಕ್ತ ಸೈದುಲ್ ಅದಾವತ್, ಚುನಾವಣಾ ವೆಚ್ಚ ನೋಡಲ್ ಅಧಿಕಾರಿ ಕೆ. ಲಲಿತ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts