More

    ವಿದ್ಯುತ್‌ಗೆ ಪರ್ಯಾಯ ಇಂಧನ ಬಳಕೆಗೆ ಆದ್ಯತೆ ನೀಡಿ

    ಬಾಳೆಹೊನ್ನೂರು: ರಾಜ್ಯದಲ್ಲಿ ಸೋಲಾರ್ ಬಳಕೆಗೆ ಹೆಚ್ಚು ಒತ್ತು ನೀಡಿ ಪ್ರೋತ್ಸಾಹಿಸಲು ವಿಶೇಷ ಕಾರ್ಯಕ್ರಮಗಳನ್ನು ಜಾರಿಗೆ ತರುವ ಯೋಜನೆ ಹಮ್ಮಿಕೊಳ್ಳಲಾಗಿದೆ ಎಂದು ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದ (ಕೆಆರ್‌ಇಡಿಎಲ್) ನೂತನ ಅಧ್ಯಕ್ಷ ಟಿ.ಡಿ.ರಾಜೇಗೌಡ ಹೇಳಿದರು.
    ಕೆಆರ್‌ಇಡಿಎಲ್ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಪಟ್ಟಣಕ್ಕೆ ಗುರುವಾರ ಆಗಮಿಸಿದ ಅಭಿನಂದನೆ ಸ್ವೀಕರಿಸಿ ಸುದ್ದಿಗಾರರೊಂದಿಗೆ ಮಾತನಾಡಿ, ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಗಮದಲ್ಲಿ ಹಲವಾರು ರೀತಿಯಲ್ಲಿ ಇಂಧನ ಶಕ್ತಿ ಉತ್ಪಾದನೆ ಮಾಡುವ ಅವಕಾಶಗಳಿವೆ. ವಿಶೇಷವಾಗಿ ಸೋಲಾರ್, ವಿಂಡ್‌ಮಿಲ್, ಬಯೋ ಮೂಲಕ ಗ್ಯಾಸ್ ಉತ್ಪಾದನೆ ಮಾಡಬಹುದಾಗಿದೆ. ನವೀಕರಿಸಬಹುದಾದ ಇಂಧನವನ್ನು ಶೇ. 50ಕ್ಕೂ ಹೆಚ್ಚು ಪ್ರಮಾಣದಲ್ಲಿ ರಾಜ್ಯದಲ್ಲಿ ಬಳಕೆ ಮಾಡಲು ನೀಡಲಾಗುತ್ತಿದೆ.
    ನೀರಿನಿಂದ ಉತ್ಪಾದನೆ ಮಾಡುವ ವಿದ್ಯುತ್‌ಗಿಂತ ಹೆಚ್ಚು ವಿದ್ಯುತ್ ಅನ್ನು ನವೀಕರಿಸಬಹುದಾದ ಇಂಧನ ನಿಗಮ ರಾಜ್ಯಕ್ಕೆ ನೀಡುತ್ತಿದೆ. ಇಂದು ರಾಜ್ಯಾದ್ಯಂತ ಯಾವುದೇ ಕೆರೆ ಕಟ್ಟೆ, ಡ್ಯಾಮ್‌ಗಳು ಭರ್ತಿಯಾಗದೆ ಬರಗಾಲದ ಛಾಯೆ ಮೂಡುತ್ತಿದೆ. ಹಾಗಾಗಿ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗುವ ಸಾಧ್ಯತೆಯಿದೆ. ಎಷ್ಟು ವಿದ್ಯುತ್ ರಾಜ್ಯದಲ್ಲಿ ಉತ್ಪಾದನೆ ಆಗುತ್ತಿದೆಯೋ ಅಷ್ಟೇ ಖರ್ಚಾಗುತ್ತಿದೆ. ಇದೂವರೆಗೆ ಯಾವುದೇ ಸಮಸ್ಯೆ ಉದ್ಭವಿಸಿಲ್ಲ. ಈ ಹಿನ್ನೆಲೆಯಲ್ಲಿ ಪರ್ಯಾಯ ಯೋಚನೆಗಳನ್ನು ಮಾಡಬೇಕಿದೆ ಎಂದು ತಿಳಿದರು.
    ಪಾವಗಡದ 13ಸಾವಿರ ಎಕರೆಯಲ್ಲಿ 2,050 ಮೆಗಾವ್ಯಾಟ್ ವಿದ್ಯುತ್ ಉತ್ಪಾದನೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾರ್ಜ್ ಯೋಜನೆ ಹಮ್ಮಿಕೊಂಡಿದ್ದು, ಇದು ಶೀಘ್ರ ಅನುಷ್ಠಾನಕ್ಕೆ ಬಂದಲ್ಲಿ ರಾಜ್ಯದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಯಾವುದೇ ಸಮಸ್ಯೆಯಾಗುವುದಿಲ್ಲ. ರಾಜ್ಯಸರ್ಕಾರ ಇಚ್ಛಾಶಕ್ತಿಯಿಂದ ಕಾರ್ಯನಿರ್ವಹಿಸುತ್ತಿದ್ದು, ಹಿರಿಯರ ಮಾರ್ಗದರ್ಶನ ಪಡೆದು ನಾನು ಸಹ ಇಂಧನ ಅಭಿವೃದ್ಧಿ ನಿಗಮದಲ್ಲಿ ಕಾರ್ಯನಿರ್ವಹಿಸಲಾಗುವುದು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts