More

    ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಆದ್ಯತೆ: ಶಾಸಕ

    ಕಡೂರು: ನಿರಂತರ ಬರಗಾಲಕ್ಕೆ ತುತ್ತಾಗುವ ತಾಲೂಕಿನ ಜನತೆಗೆ ಶಿಕ್ಷಣವೇ ಆಧಾರವಾಗಿದೆ. ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಪ್ರಾಮುಖ್ಯತೆ ನೀಡಿ ಸುಧಾರಣೆಗೆ ಕ್ರಮವಹಿಸಲಾಗುತ್ತಿದೆ ಎಂದು ಶಾಸಕ ಕೆ.ಎಸ್.ಆನಂದ್ ತಿಳಿಸಿದರು.

    ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಬಾರ್ಡ್ ಅನುದಾನದಡಿ 1.58 ಕೋಟಿ ರೂ. ವೆಚ್ಚದ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದರು.
    ತಾಲೂಕಿನಲ್ಲಿ ಕೃಷಿ ಚಟುವಟಿಕೆಗಳಿಗೆ ಪೂರಕವಾದ ವಾತಾವರಣವಿಲ್ಲದ ಕಾರಣ ತಾಲೂಕಿನ ಜನತೆ ಶಿಕ್ಷಣದ ಮೂಲಕ ತಮ್ಮ ಜೀವನದ ಮಟ್ಟವನ್ನು ಸುಧಾರಿಸಿಕೊಳ್ಳುತ್ತಿದ್ದಾರೆ. ಈ ನಿಟ್ಟಿನಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಸಾಕಷ್ಟು ಅಭಿವೃದ್ಧಿ ಆಗಬೇಕು ಎನ್ನುವುದು ತಾಲೂಕಿನ ಜನತೆಯ ಆಶಯವಾಗಿದೆ. ಜನರ ಆಶಯದಂತೆ ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಮೊದಲ ಆದ್ಯತೆ ನೀಡಲಾಗುವುದು ಎಂದರು.
    ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜು ಜಿಲ್ಲೆಯಲ್ಲಿಯೇ ಅತಿ ಹೆಚ್ಚು ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಈ ಮೊದಲು ಫಲಿತಾಂಶದಲ್ಲಿ ರಾಜ್ಯದಲ್ಲಿಯೇ ಎರಡನೇ ಸ್ಥಾನ ಪಡೆದುಕೊಳ್ಳುತ್ತಿತ್ತು. ಕೆಲವು ಕಾರಣಗಳಿಂದ ಇತ್ತೀಚೆಗೆ ಫಲಿತಾಂಶದಲ್ಲಿ ಕೆಲವೊಂದಿಷ್ಟು ಹಿನ್ನಡೆಯಾಗಿದೆ. ಫಲಿತಾಂಶವನ್ನು ಸುಧಾರಿಸುವ ನಿಟ್ಟಿನಲ್ಲಿ ಕೈಗೊಳ್ಳಬೇಕಾದ ಕ್ರಮದ ಬಗ್ಗೆ ಕಾಲೇಜಿನ ಪ್ರಾಚಾರ್ಯರು ಮತ್ತು ಉಪನ್ಯಾಸಕರ ಜತೆ ಚರ್ಚೆ ನಡೆಸಲಾಗುವುದು. ಈ ಮೂಲಕ ಕಾಲೇಜಿನ ವೈಭವವನ್ನು ಮರುಕಳಿಸುವಂತೆ ಮಾಡಲು ಪ್ರಯತ್ನಿಸಲಾಗುವುದು ಎಂದು ತಿಳಿಸಿದರು.
    ಪುರಸಭೆ ಸದಸ್ಯರಾದ ಭಂಡಾರಿ ಶ್ರೀನಿವಾಸ್, ಹಾಲಮ್ಮ ಸಿದ್ರಾಮಪ್ಪ ಕಾಲೇಜಿನ ಪ್ರಾಚಾರ್ಯ ಡಾ. ತವರಾಜ್, ಬಿಇಒ ಆರ್.ಸಿದ್ದರಾಜನಾಯ್ಕ, ಪಿಡ್ಲ್ಯೂಡಿ ಎಇಇ ವೈ.ಆರ್.ಬಸವರಾಜ್, ಉಪ ಪ್ರಾಚಾರ್ಯೆ ಎಚ್.ಆರ್.ರೇಖಾ, ಮುಖಂಡರಾದ ಸಪ್ತಕೋಟಿ ಧನಂಜಯ, ಬೆಂಕಿ ಶೇಖರಪ್ಪ, ಇಮ್ರಾನ್‌ಖಾನ್, ಜೋಡಿ ತಿಮ್ಮಾಪುರ ಕೆ.ಟಿ.ನರಸಿಂಹ, ಗುತ್ತಿಗೆದಾರ ಸಿ.ಗಿರೀಶ್, ಶಿವು, ಅವಿನಾಶ್ ಮತ್ತಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts