ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

blank

ತ್ಯಾಗರ್ತಿ: ಗ್ರಾಮೀಣ ಪ್ರದೇಶದಲ್ಲಿ ಈ ಹಿಂದಿನ ಅವಧಿಯಲ್ಲಿ ಅಭಿವೃದ್ಧಿ ಕಾಣದ ರಸ್ತೆಗಳ ನಿರ್ಮಾಣಕ್ಕೆ ಈ ಬಾರಿ ಆದ್ಯತೆ ನೀಡಲಾಗುತ್ತಿದೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.
ಹಿರೇಬಿಲಗುಂಜಿ, ಹೊಸೂರು, ತ್ಯಾಗರ್ತಿ ಗ್ರಾಪಂ ವ್ಯಾಪ್ತಿಯಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಅನೇಕ ಹಳ್ಳಿಗಳು ಮೂಲ ಸೌಕರ್ಯದಿಂದ ವಂಚಿತವಾಗಿವೆ. ಹಾಗಾಗಿ ಹಿಂದುಳಿದ ಗ್ರಾಮಗಳ ರಸ್ತೆ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗಿದೆ ಎಂದರು.
ಗ್ಯಾರಂಟಿ ಯೋಜನೆಗಳಿಂದ ಅಭಿವೃದ್ಧಿಗೆ ಹಿನ್ನಡೆಯಾಗಿಲ್ಲ. ಬಿಜೆಪಿಯವರು ಸುಳ್ಳು ಆರೋಪ ಮಾಡುತ್ತಿದ್ದಾರೆ. ಈ ಬಾರಿ ನಾಲ್ಕು ಲಕ್ಷ ಕೋಟಿ ರೂ. ಗಾತ್ರದ ಬಜೆಟ್ ಮಂಡಿಸಲಾಗಿದೆ. ಎಲ್ಲ ವರ್ಗದ ಜನರಿಗೆ ಅನುಕೂಲ ಆಗುವಂತೆ ಯೋಜನೆ ರೂಪಿಸಲಾಗಿದೆ. ರೈತರಿಗೆ, ಗ್ರಾಮೀಣ ರಸ್ತೆ, ಕೆರೆ, ಶಾಲೆ, ಆಸ್ಪತ್ರೆ ಸೇರಿ ಅನೇಕ ಮೂಲ ಸೌಕರ್ಯಗಳ ಅಭಿವೃದ್ಧಿಗೆ ಒತ್ತು ನೀಡಲಾಗಿದೆ ಎಂದರು.
ಬರೂರು ಗ್ರಾಪಂ ವ್ಯಾಪ್ತಿಯಲ್ಲಿ 2 ಕೋಟಿ ರೂ. ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಸಲಾಗುತ್ತಿದೆ. ಪ್ರಗತಿ ಪಥ ಯೋಜನೆಯಡಿ ತಾಲೂಕಿನ ಗ್ರಾಮಾಂತರ ಪ್ರದೇಶಗಳಲ್ಲಿ 60 ಕಿ.ಮೀ ಸುಸಜ್ಜಿತ ರಸ್ತೆ ಅಭಿವೃದ್ಧಿ ಮಾಡಲಾಗುತ್ತದೆ ಎಂದು ಹೇಳಿದರು.
ಪ್ರಮುಖರಾದ ಕಲ್ಸೆ ಚಂದ್ರಪ್ಪ , ಸೋಮಶೇಖರ್ ಲಾವಿಗ್ಗೆರೆ, ಗಣಪತಿ ಮಂಡಗಳಲೆ, ಮರಾಠಿ ಪರಶುರಾಮ, ಹಿರೇಬಿಲಗುಂಜಿ ಗ್ರಾಪಂ ಅಧ್ಯಕ್ಷ ಪ್ರಶಾಂತ್ ಖಂಡೋಜಿ, ಯೋಗೇಶ್, ಹೊಸೂರು ಗ್ರಾಪಂ ಅಧ್ಯಕ್ಷೆ ರೇವತಿ, ಸದಸ್ಯ ಶರತ್ ನಾಗಪ್ಪ , ಪಿಡಿಒ ಶೇಖರಪ್ಪ ಇತರರಿದ್ದರು.

Share This Article

ಕನಸಿನಲ್ಲಿ ಈ ಮೂರು ಪಕ್ಷಿಗಳು ಕಂಡ್ರೆ ಲಾಟರಿ ಹೊಡೆದಂತೆ! Lucky Birds ನೀಡುವ ಸುಳಿವೇನು..?

Lucky Birds : ಸಾಮಾನ್ಯವಾಗಿ ನಿದ್ದೆಯಲ್ಲಿ ಕನಸು ಕಾಣೋದು ಸಹಜ. ಈ ಕನಸುಗಳ ಮೂಲಕ ಪ್ರಕೃತಿ…

ಯಾವ ಕಾರಣಕ್ಕೂ ಮಾವಿನ ವಾಟೆ ಎಸೆಯಬೇಡಿ…ಅದರ ಪ್ರಯೋಜನಗಳ ಬಗ್ಗೆ ತಿಳಿದ್ರೆ ನೀವು ಖಂಡಿತ ಅಚ್ಚರಿಪಡ್ತೀರಾ! Mango Kernels

Mango Kernels : ಮಾವಿನ ಹಣ್ಣನ್ನು ಹಣ್ಣುಗಳ ರಾಜ ಎಂದು ಕರೆಯುತ್ತಾರೆ. ರುಚಿಗೆ ಮಾತ್ರವಲ್ಲ, ಮಾವಿನ…

ಪ್ಲಾಸ್ಟಿಕ್ ಬಾಕ್ಸ್​​ನಲ್ಲಿ ಬಿಸಿ ಅನ್ನ ಇಡುವ ಅಭ್ಯಾಸವಿದೆಯೇ? ಆರೋಗ್ಯದ ಬಗ್ಗೆ ಇರಲಿ ಎಚ್ಚರ.. hot rice in plastic boxes

hot rice in plastic boxes: ಪ್ಲಾಸ್ಟಿಕ್ ಬಳಕೆಯನ್ನು ತಡೆಯಲಾಗುತ್ತಿಲ್ಲ. ಪ್ಲಾಸ್ಟಿಕ್ ಪಾತ್ರೆಗಳನ್ನು ಬಳಸುವುದು ಹಾನಿಕಾರಕ,…