ಕುಂದಾಪುರ: ಜನರ ಹಲವು ವರ್ಷಗಳ ಬೇಡಿಕೆಯಾದ ರಿಂಗ್‌ರೋಡ್ ಕಾಮಗಾರಿ ಬರದಿಂದ ಸಾಗುತ್ತಿದ್ದು, ಜನರ ಸಂಪರ್ಕ ಕೊಂಡಿ ರಸ್ತೆಗಳನ್ನು ಆದ್ಯತೆ ಮೇರೆಗೆ ಮಾಡಲಾಗುತ್ತಿದೆ. ಈ ಪ್ರದೇಶಗಳಲ್ಲಿ ಹೆಚ್ಚಿನ ಮನೆ ಇರುವಂತಹ ಕಡೆಗಳಲ್ಲಿ ಮೂಲಸೌಕರ್ಯ ಒದಗಿಸುವ ನಿಟ್ಟಿನಲ್ಲಿ ರಿಂಗ್‌ರೋಡ್ ಅವಶ್ಯಕವಾಗಿದ್ದು, ಇದರ ನಿರ್ಮಾಣ ಕಾರ್ಯ ನಡೆಯುತ್ತಿದೆ ಎಂದು ಶಾಸಕ ಎ.ಕಿರಣ್ ಕುಮಾರ್ ಕೊಡ್ಗಿ ಹೇಳಿದರು.
ಕುಂದಾಪುರ ಪುರಸಭಾ ವ್ಯಾಪ್ತಿಯ ಖಾರ್ವಿಕೇರಿ ರಿಂಗ್ ರೋಡ್ ಕಾಮಗಾರಿ ನಡೆಯುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮಾತನಾಡಿದರು.
ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಆನಂದ ಜಿ., ಪುರಸಭಾ ಅಧ್ಯಕ್ಷ ಮೋಹನದಾಸ್ ಶೆಣೈ, ಉಪಾಧ್ಯಕ್ಷೆ ವನಿತಾ ಬಿಲ್ಲವ, ಸದಸ್ಯರಾದ ಸಂದೀಪ್ ಖಾರ್ವಿ, ಶೇಖರ್ ಖಾರ್ವಿ, ಸಂತೋಷ್ ಶೆಟ್ಟಿ, ಮಾಜಿ ಸದಸ್ಯ ಪ್ರಕಾಶ್ ಖಾರ್ವಿ, ರವಿರಾಜ್ ಖಾರ್ವಿ, ಸ್ಥಳೀಯರಾದ ಚೇತನ್ ಖಾರ್ವಿ, ಸುನೀಲ್ ಖಾರ್ವಿ ಹಾಗೂ ಖಾರ್ವಿ ಸಮಾಜದ ಮುಖಂಡರು, ಗುತ್ತಿಗೆದಾರರು, ಅಧಿಕಾರಿಗಳು ಉಪಸ್ಥಿತರಿದ್ದರು.