More

    ಬಂದರು ಅಭಿವೃದ್ಧಿಗೆ ಬಜೆಟ್​ನಲ್ಲಿ ಆದ್ಯತೆ; 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನ ನೀಡಲು 5 ಕೋಟಿ ರೂ.ಅನುದಾನ

    ಬೆಂಗಳೂರು: ಆಧುನಿಕ ಮೀನುಗಾರಿಕೆಯಲ್ಲಿ ತಾಂತ್ರಿಕತೆ ಅಳವಡಿಕೆಯನ್ನು ಉತ್ತೇಜಿಸುವ ಸಲುವಾಗಿ 1.5 ಕೋಟಿ ರೂಪಾಯಿ ವೆಚ್ಚದಲ್ಲಿ ಕರ್ನಾಟಕ ಮತ್ಸ್ಯ ವಿಕಾಸ ಯೋಜನೆ ಜಾರಿ ಮಾಡುವುದಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಬಜೆಟ್​ನಲ್ಲಿ ಘೋಷಿಸಿದರು.

    ಮಹಿಳಾ ಮೀನುಗಾರರ ಸಬಲೀಕರಣ ಯೋಜನೆಯಡಿ 1000 ಮೀನುಗಾರ ಮಹಿಳೆಯರಿಗೆ ದ್ವಿಚಕ್ರ ವಾಹನಗಳನ್ನು ನೀಡಲು 5 ಕೋಟಿ ರೂ.ಅನುದಾನ ಮೀಸಲಿಡಲಾಗುವುದು. ಮುಲ್ಕಿಯಲ್ಲಿ ಎರಡು ಕೋಟಿ ರೂಪಾಯಿ ವೆಚ್ಚದಲ್ಲಿ ಹಿನ್ನೀರು ಮೀನು ಮರಿ ಉತ್ಪಾದನಾ ಕೇಂದ್ರ ಸ್ಥಾಪಿಸಲಾಗುವುದು. ಮಂಗಳೂರಿನ ಕುಳಾಯಿಯಲ್ಲಿ ನಿರ್ಮಿಸಲಾಗುತ್ತಿರುವ ಹೊಸ ಮೀನುಗಾರಿಕಾ ಬಂದರಿನಲ್ಲಿ 12.5 ಕೋಟಿ ರೂ.ವೆಚ್ಚದಲ್ಲಿ ಆಧುನಿಕ ಕರಾವಳಿ ಮೀನು ರಪ್ತು ಸ್ಥಾವರ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

    ಉಡುಪಿ ಜಿಲ್ಲೆಯ ಹೆಜಮಾಡಿಕೋಡಿಯಲ್ಲಿ 181 ಕೋಟಿ ರೂ.ಪರಿಷ್ಕೃತ ಅಂದಾಜು ವೆಚ್ಚದಲ್ಲಿ ಮೀನುಗಾರಿಕೆ ಬಂದರು ನಿರ್ಮಾಣ ಮಾಡಲಾಗುವುದು, ಹಂಗಾರಕಟ್ಟೆ ಬಂದರು ಅಭಿವೃದ್ಧಿಗೆ 130 ಕೋಟಿ ರೂಪಾಯಿ ಅನುದಾನ ಹಾಗೂ ಉತ್ತರ ಕನ್ನಡ ಜಿಲ್ಲೆಯ ಕಾರವಾರ ಮೀನುಗಾರಿಕಾ ಬಂದರು ಅಭಿವೃದ್ಧಿ ಮತ್ತು ಮೂಲ ಸೌಕರ್ಯಕ್ಕಾಗಿ 4 ಕೋಟಿ ರೂ.ಅನುದಾನ ನೀಡಲಾಗುವುದು ಎಂದು ತಿಳಿಸಿದರು.

    ಉತ್ತರ ಕನ್ನಡದ ತೆಂಗಿನಗುಂಡಿ ಬಂದರಿನ ಅಳೆವೆ ಹೂಳೆತ್ತುವ ಕಾಮಗಾರಿಗೆ ಐದು ಕೋಟಿ ರೂಪಾಯಿ, ಉಡುಪಿ ಜಿಲ್ಲೆ ಬೈಂದೂರಿನ ಮರವಂತೆ ಹೊರಬಂದರಿನ 2ನೇ ಹಂತದ ಕಾಮಗಾರಿ ಪೂರ್ಣಕ್ಕೆ 85 ಕೋಟಿ ರೂ. ಹಾಗೂ ಕೊಡೇರಿ ಮೀನುಗಾರಿಕಾ ಬಂದರಿನ ಅಭಿವೃದ್ಧಿ ಕಾಮಗಾರಿಗೆ 2 ಕೋಟಿ ರೂ. ಅನುದಾನ ನೀಡುವುದಾಗಿ ಘೋಷಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts