More

    ಮೇಲಿಂದ ಮೇಲೆ ಸಂಭವಿಸುತ್ತಲೇ ಇದೆ ಹೃದಯಾಘಾತ; ಇಂದು ಮತ್ತೊಂದು ಪ್ರಕರಣ, ವಿಚಾರಣಾಧೀನ ಕೈದಿ ಸಾವು

    ಶಿವಮೊಗ್ಗ: ದೇಶಾದ್ಯಂತ ಹೃದಯಾಘಾತದಿಂದ ಜನರು ಸಾವಿಗೀಡಾಗುತ್ತಿರುವ ಪ್ರಕರಣ ಹೆಚ್ಚಾಗಿದ್ದು, ಜನರು ಕುಸಿದು ಬಿದ್ದು ಮೃತಪಟ್ಟಿರುವ ಪ್ರಕರಣಗಳು ಸಾಕಷ್ಟು ಸಂಭವಿಸಿವೆ. ಈ ಮಧ್ಯೆ ಇವತ್ತೊಂದೇ ದಿನ ರಾಜ್ಯದಲ್ಲಿ ಇನ್ನೊಬ್ಬರು ಹೃದಯಾಘಾತಕ್ಕೆ ಬಲಿಯಾಗಿದ್ದಾರೆ.

    ನಿನ್ನೆಯಷ್ಟೇ ರಾಜ್ಯಪಾಲ ಥಾವರ್​ಚಂದ್ ಗೆಹ್ಲೋಟ್​ ಅವರ ಕಾರು ಚಾಲಕ ರವಿಕುಮಾರ್ ಎಸ್. ಕಾಳೆ ರಾಜ್ಯಪಾಲರನ್ನು ಏರ್​ಪೋರ್ಟ್​ನಿಂದ ಕರೆದುಕೊಂಡು ಬರಲು ತೆರಳಿದ್ದ ವೇಳೆ ಹೃದಯಾಘಾತಕ್ಕೀಡಾಗಿ ಮೃತಪಟ್ಟಿದ್ದರು.

    ಉಜಿರೆ ಎಸ್‌ಡಿಎಂ ಇಂಜಿನಿಯರಿಂಗ್ ಕಾಲೇಜಿನಲ್ಲಿ ವೇಯ್ಟ್ ಲಿಫ್ಟಿಂಗ್ ಮುಖ್ಯ ತರಬೇತುದಾರರಾಗಿದ್ದ, ಪುತ್ತೂರಿನ ಸಂತ ಫಿಲೋಮಿನಾ ಕಾಲೇಜಿನಲ್ಲಿಯೂ ಕೆಲವು ವರ್ಷಗಳ ಕಾಲ ಕ್ರೀಡಾಪಟುಗಳಿಗೆ ತರಬೇತಿ ನೀಡಿದ್ದ ಹಾಗೂ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿದ್ದ ವೇಯ್ಟ್​ ಲಿಫ್ಟಿಂಗ್ ರಾಜೇಂದ್ರ ಪ್ರಸಾದ್ ಅವರು ಇಂದು ಬೆಳಗ್ಗೆ ಹೃದಯಾಘಾತದಿಂದ ಸಾವಿಗೀಡಾಗಿದ್ದರು. ಮೂಡುಬಿದಿರೆ ಆಳ್ವಾಸ್ ಕಾಲೇಜಿನಲ್ಲಿ ವೇಯ್ಟ್ ಲಿಫ್ಟಿಂಗ್ ಕೋಚ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದ ಇವರು ದಕ್ಷಿಣಕನ್ನಡ ಜಿಲ್ಲೆಯ ಪಡೀಲು ನಿವಾಸಿ.

    ಇದರ ಬೆನ್ನಿಗೆ ಇನ್ನೊಂದು ಹೃದಯಾಘಾತದ ಪ್ರಕರಣ ಬೆಳಕಿಗೆ ಬಂದಿದ್ದು, ವಿಚಾರಣಾಧೀನ ಕೈದಿ ಮೃತಪಟ್ಟಿದ್ದಾನೆ. ಶಿವಮೊಗ್ಗ ಜಿಲ್ಲೆಯ ಓತಿಘಟ್ಟದ ಕೇಂದ್ರ ಕಾರಾಗೃಹದಲ್ಲಿನ ವಿಚಾರಣಾಧೀನ ಕೈದಿ ಸೋಮಿನಕೊಪ್ಪದ ಸೈಯದ್ ಅಬು ಸಲೆಹಾ (35) ಸೋಮವಾರ ಬೆಳಗ್ಗೆ ಹೃದಯಾಘಾತದಿಂದ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾನೆ.

    ಇದನ್ನೂ ಓದಿ: ಹಠಾತ್ ಸಾವು ವಿಚಾರವಾಗಿ ಕೇಂದ್ರಕ್ಕೆ ನೋಟಿಸ್; ಸ್ವಪ್ರೇರಿತವಾಗಿ ಪ್ರಕರಣ ಕೈಗೆತ್ತಿಕೊಂಡ ಮಹಿಳಾ ಆಯೋಗ

    ಕೊಲೆ ಯತ್ನ ಪ್ರಕರಣದಡಿ ಕೋಟೆ ಠಾಣೆ ಪೊಲೀಸರು ಈತನನ್ನು ಬಂಧಿಸಿದ್ದು 2020ರಿಂದ ಕೇಂದ್ರ ಕಾರಾಗೃಹದಲ್ಲಿ ಶಿಕ್ಷೆಗೆ ಒಳಗಾಗಿದ್ದ. ಸೋಮವಾರ ಬೆಳಗ್ಗೆ ಕೇಂದ್ರ ಕಾರಾಗೃಹದಲ್ಲೇ ಎದೆ ನೋವು ಕಾಣಿಸಿಕೊಂಡ ಹಿನ್ನಲೆಯಲ್ಲಿ ಇಸಿಜಿ ಮಾಡಿಸಲಾಗಿತ್ತು. ಹೆಚ್ಚಿನ ಚಿಕಿತ್ಸೆಗೆ ಮೆಗ್ಗಾನ್ ಆಸ್ಪತ್ರೆಗೆ ಕರೆ ತರಲಾಗಿತ್ತು. ಆದರೆ ಆಸ್ಪತ್ರೆಗೆ ಕರೆತಂದ ಸ್ವಲ್ಪ ಹೊತ್ತನಲ್ಲೇ ಚಿಕಿತ್ಸೆ ಫಲಿಸದೇ ಮೃತಪಟ್ಟಿದ್ದಾನೆ. ತುಂಗಾನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

    ಕಾರು ಚಲಾಯಿಸಿಕೊಂಡು ಆಸ್ಪತ್ರೆಗೆ ತೆರಳಿದವರು ಮರಳಿದ್ದು ಶವವಾಗಿ: ವೇಯ್ಟ್ ಲಿಫ್ಟಿಂಗ್ ಕೋಚ್ ಹೃದಯಾಘಾತಕ್ಕೆ ಬಲಿ

    ರಾಜ್ಯಪಾಲ ಗೆಹ್ಲೋಟ್ ಕಾರು ಚಾಲಕ ಹೃದಯಾಘಾತದಿಂದ ಸಾವು: ಸ್ವಲ್ಪದರಲ್ಲೇ ತಪ್ಪಿತು ಅನಾಹುತ

    ‘ಸತ್ತವಳು’ 6 ವರ್ಷಗಳ ಬಳಿಕ 2ನೇ ಗಂಡನೊಂದಿಗೆ ಪತ್ತೆ!; ಈಕೆಯ ಕೊಲೆ ಪ್ರಕರಣ ಭೇದಿಸಿದ್ದ ಪೊಲೀಸರಿಗೆ ಸಿಕ್ಕಿತ್ತು ಬಹುಮಾನ!

    ‘ನನ್ನನ್ನು ಪೊಲೀಸರೇ ಸಾಯಿಸ್ತಾರೆ, ನ್ಯಾಯ ಕೊಡಿಸಿ’ ಎಂದು ಅಲವತ್ತುಕೊಂಡ ಯುವಕ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts