ಬಂಟ್ವಾಳ: ತುಂಬೆ ಕಡೆಗೋಳಿಯಲ್ಲಿ ಖಾಸಗಿ ಬಸ್ ಬೈಕ್‌ಗೆ ಡಿಕ್ಕಿಯಾದ ಪರಿಣಾಮ ಸವಾರ ಸ್ಥಳದಲ್ಲಿಯೇ ಸಾವನ್ನಪ್ಪಿದ್ದು, ಇನ್ನೋರ್ವ ಗಂಭೀರವಾಗಿ ಗಾಯಗೊಂಡ ಘಟನೆ ನಡೆದಿದೆ. ಗಾಯಾಳುವನ್ನು ಮಂಗಳೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಡೆಗೋಳಿ ನಿವಾಸಿ ಪ್ರವೀಣ (30) ಸ್ಥಳದಲ್ಲಿಯೇ ಮೃತಪಟ್ಟಿದ್ದು, ಅವರ ಸ್ನೇಹಿತ ಸಂದೀಪ್ ಗಂಭೀರವಾಗಿ ಗಾಯಗೊಂಡ ಯುವಕ.
ಇಬ್ಬರು ಸೇಲ್ಸ್‌ಮ್ಯಾನ್ ಕೆಲಸಗಾರರಾಗಿದ್ದು, ಕೆಲಸ ಮುಗಿಸಿ ಮನೆಗೆ ಜತೆಯಾಗಿ ಬೈಕ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ಮಂಗಳೂರಿನಿಂದ ಬಿ.ಸಿ.ರೋಡು ಕಡೆಗೆ ಬಂದ ಬಸ್ ಡಿಕ್ಕಿಯಾಗಿದೆ. ಸ್ಥಳಕ್ಕೆ ಟ್ರಾಫಿಕ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.
ಮೆಸ್ಕಾಂನಲ್ಲಿ ಸ್ಥಳೀಯರಿಗೆ ಉದ್ಯೋಗ – ಶಾಸಕ ಅಶೋಕ್ ರೈ ಪ್ರತಿಪಾದನೆ – ಕಂಬ ಹತ್ತುವ ತರಬೇತಿ