More

    ಖಾಸಗಿ ವೈದ್ಯರು ರೋಗಿಗಳನ್ನು ಪರೀಕ್ಷೆಗೆ ಶಿಫಾರಸು ಮಾಡಬೇಕು- ಕೃಷಿ ಸಚಿವ ಬಿ.ಸಿ.ಪಾಟೀಲ್ ಸೂಚನೆ

    ಕೊಪ್ಪಳ: ಖಾಸಗಿ ವೈದ್ಯರು ಕರೊನಾ ಲಕ್ಷಣ ಇರುವ ರೋಗಿಗಳನ್ನು ಕಡ್ಡಾಯವಾಗಿ ಕೋವಿಡ್ ಪರೀಕ್ಷೆಗೆ ಶಿಫಾರಸು ಮಾಡಬೇಕೆಂದು ಕೃಷಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ್ ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಜಿಲ್ಲೆಯ ಕೋವಿಡ್ ಸ್ಥಿತಿಗತಿ ಕುರಿತು ಬುಧವಾರ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. ಗ್ರಾಮೀಣ ಪ್ರದೇಶದಲ್ಲಿ ಖಾಸಗಿ ವೈದ್ಯರು ಕೋವಿಡ್ ಲಕ್ಷಣ ಇರುವವರಿಗೆ ತಾತ್ಕಾಲಿಕ ಚಿಕಿತ್ಸೆ ನೀಡುತ್ತಾರೆ. ಇದರಿಂದಾಗಿ ರೋಗಿಗಳು ಕಾಯಿಲೆ ಗಂಭೀರವಾದಾಗ ಜಿಲ್ಲಾಸ್ಪತ್ರೆಗೆ ಬರುತ್ತಾರೆ. ಹೀಗಾಗಿ ಸಾವಿನ ಪ್ರಮಾಣ ಹೆಚ್ಚಲಿದೆ. ರೋಗಿಗಳಿಗೆ ಕೋವಿಡ್ ಇದ್ದರೆ ಕುಟುಂಬದವರಿಗೂ ಹರಡುವ ಸಾಧ್ಯತೆ ಇರುತ್ತದೆ. ಡಿಎಚ್‌ಒ ಹಾಗೂ ಜಿಲ್ಲೆಯ ಎಲ್ಲ ಸರ್ಕಾರಿ ಮತ್ತು ಖಾಸಗಿ ವೈದ್ಯರು ಇರುವ ವಾಟ್ಸಾೃಪ್ ಗ್ರೂಪ್ ರಚಿಸಿ ರೋಗಿಯ ಕುರಿತು ಮಾಹಿತಿ ಹಂಚಿಕೊಳ್ಳಬೇಕು. ಔಷಧ ಅಂಗಡಿಯವರು ರೋಗಿಗಳಿಗೆ ನೇರವಾಗಿ ಔಷಧ ನೀಡಬಾರದು. ವೈದ್ಯರು ಶಿಫಾರಸು ಮಾಡಿದರೆ ಮಾತ್ರವೇ ಔಷಧ ನೀಡುವಂತೆ ಔಷಧ ನಿಯಂತ್ರಕರು ಸೂಚಿಸಬೇಕೆಂದರು.

    ಜಿಲ್ಲೆಯಲ್ಲಿ ಇದುವರೆಗೆ 6 ಬ್ಲಾೃಕ್ ಫಂಗಸ್ ಪ್ರಕರಣಗಳು ಕಂಡುಬಂದಿದ್ದು, ಇಬ್ಬರು ಮೃತ ಪಟ್ಟಿದ್ದಾರೆ. ಜಿಲ್ಲೆಯ ಎಲ್ಲ ಬ್ಯಾಂಕ್‌ಗಳು ಸೋಮವಾರದಿಂದ ಗುರುವಾರದವರೆಗೆ ಬೆಳಗ್ಗೆ 8ರಿಂದ 12 ರವರೆಗೆ ಕಾರ್ಯನಿರ್ವಹಿಸಲಿವೆ. ಜನರು ಕೋವಿಡ್ ನಿಯಮಗಳನ್ನು ಪಾಲಿಸಿ ವ್ಯವಹಾರ ನಡೆಸಬೇಕು ಎಂದು ಸಚಿವರು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts