More

    ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರ

    ಸಿಂಧನೂರು: ನಗರವು ಧಾರವಾಡದಂತೆ ಶೈಕ್ಷಣಿಕ ಕ್ಷೇತ್ರದಲ್ಲಿ ವಿದ್ಯಾಕಾಶಿಯಾಗಿ ಪರಿವರ್ತನೆಯಾಗುತ್ತಿರುವುದು ಸ್ವಾಗತಾರ್ಹ ಬೆಳವಣಿಗೆ ಎಂದು ಮಾಜಿ ಸಂಸದ ಕೆ.ವಿರೂಪಾಕ್ಷಪ್ಪ ಹೇಳಿದರು.

    ನಗರದ ಸತ್ಯಗಾರ್ಡನ್‌ನಲ್ಲಿ ಖಾಸಗಿ ಶಾಲಾ-ಕಾಲೇಜು ಆಡಳಿತ ಮಂಡಳಿ ಒಕ್ಕೂಟದಿಂದ ಸೋಮವಾರ ಸಂಜೆ ಆಯೋಜಿಸಿದ್ದ ಗುರುವಂದನಾ ಹಾಗೂ ಶಿಕ್ಷಕರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಗುರುವಂದನಾ

    70ರ ದಶಕದಲ್ಲಿ ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಯಾವುದೇ ಶಿಕ್ಷಣ ಸಂಸ್ಥೆಗಳಿರಲಿಲ್ಲ. ಉನ್ನತ ಶಿಕ್ಷಣಕ್ಕಾಗಿ ಧಾರವಾಡ ಸೇರಿದಂತೆ ದೊಡ್ಡ ನಗರಗಳಿಗೆ ಹೋಗುವ ಅನಿವಾರ್ಯತೆ ಇತ್ತು. ಇತ್ತೀಚೆಗೆ ಅದೆಲ್ಲ ಬದಲಾಗಿ, ಬೇರೆ ಜಿಲ್ಲೆಗಳಿಂದ ಸಿಂಧನೂರಿಗೆ ಶಿಕ್ಷಣ ಪಡೆಯಲು ಬರುತ್ತಿರುವುದು ಆಶಾದಾಯಕ ಬೆಳವಣಿಗೆ. ಇದಕ್ಕೆ ಖಾಸಗಿ ಶಿಕ್ಷಣ ಸಂಸ್ಥೆಗಳ ಕೊಡುಗೆ ಅಪಾರವಾಗಿದೆ. ಗುಣಮಟ್ಟದ ಶಿಕ್ಷಣ ನೀಡುವ ಉಪನ್ಯಾಸಕ, ಶಿಕ್ಷಕ ವರ್ಗ ಇಲ್ಲಿದೆ ಎನ್ನುವುದು ಹೆಮ್ಮೆಯ ಸಂಗತಿ ಎಂದರು.

    ಇದನ್ನೂ ಓದಿ:ಮಕ್ಕಳಿಗೆ ಶಿಕ್ಷಣ ಜತೆಗೆ ಸಂಸ್ಕೃತಿ ಕಲಿಸಿ

    ಶಾಸಕ ಹಾಗೂ ಖಾಸಗಿ ಶಿಕ್ಷಣ ಸಂಸ್ಥೆಗಳ ಒಕ್ಕೂಟದ ಜಿಲ್ಲಾ ಅಧ್ಯಕ್ಷ ಹಂಪನಗೌಡ ಬಾದರ್ಲಿ ಮಾತನಾಡಿ, ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ತನ್ನದೇ ಛಾಪು ಮೂಡಿಸಿರುವ ಖಾಸಗಿ ಶಿಕ್ಷಣ ಸಂಸ್ಥೆಗಳು ಆರ್ಥಿಕ ಮುಗ್ಗಟ್ಟು ಎದುರಿಸುತ್ತಿರುವುದು ಮನಗಂಡು ಈಗಾಗಲೇ ಈ ಬಗ್ಗೆ ಸಂಬಂಧಿಸಿದ ಶಿಕ್ಷಣ ಸಚಿವರೊಂದಿಗೆ ಆಡಳಿತ ಮಂಡಳಿ ಸದಸ್ಯರು ಚರ್ಚಿಸಿದ್ದು ಸ್ಪಂದನೆ ಸಿಕ್ಕಿದೆ. ಶಿಕ್ಷಕ ವೃತ್ತಿ ಪವಿತ್ರವಾಗಿದ್ದು ಅವರ ಮೇಲೆ ದೊಡ್ಡ ಜವಬ್ದಾರಿ ಇದೆ ಎಂದರು. ಮಾಜಿ ಸಚಿವ ವೆಂಕಟರಾವ ನಾಡಗೌಡ ಮಾತನಾಡಿ, ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಯ ಬದಲಾವಣೆಯಾಗುತ್ತಿದ್ದು ಈ ಭಾಗವು ಶೈಕ್ಷಣಿಕವಾಗಿ ಅಭಿವೃದ್ಧಿಯತ್ತ ಸಾಧಿಸುತ್ತಿದೆ ಎಂದರು.

    ಕ್ಷೇತ್ರ ಶಿಕ್ಷಣಾಧಿಕಾರಿ ಸೋಮಶೇಖರಗೌಡ ಮಾತನಾಡಿ, ಎಲ್ಲ ಖಾಸಗಿ ಶಿಕ್ಷಣ ಸಂಸ್ಥೆಗಳು ಒಂದೇ ವೇದಿಕೆಯಲ್ಲಿ ಉಪನ್ಯಾಸಕರನ್ನು ಗೌರವಿಸುತ್ತಿರುವುದು ಶ್ಲಾಘನೀಯ ಎಂದರು.

    ಅಧ್ಯಕ್ಷತೆಯನ್ನು ಆಡಳಿತ ಮಂಡಳಿ ಒಕ್ಕೂಟದ ಅಧ್ಯಕ್ಷ ವೈ.ನರೇಂದ್ರನಾಥ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ವೀರೇಶ ಅಗ್ನಿ, ಮಾಜಿ ಅಧ್ಯಕ್ಷ ಮಲ್ಲನಗೌಡ ಕಾನಿಹಾಳ, ಎಚ್.ಶರ್ಫುದ್ದೀನ್, ಮಂಜುನಾಥಸ್ವಾಮಿ, ಮಲ್ಲಿಕಾರ್ಜುನ ನಾಯನೇಗಲಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts