More

    ಸರ್ಕಾರಿ ಆಸ್ಪತೆಯಲ್ಲಿ ಹೆಚ್ಚಿದ ಹೊರ ರೋಗಿಗಳ ಸಂಖ್ಯೆ

    ಚಿಕ್ಕಮಗಳೂರು: ಕೇಂದ್ರ ಸರ್ಕಾರ ಆಯುರ್ವೆದ ವೈದ್ಯರಿಗೆ ಹಲವು ರೀತಿಯ ಶಸ್ತ್ರಚಿಕಿತ್ಸೆ ನಡೆಸಲು ಅವಕಾಶ ಕಲ್ಪಿಸಿರುವುದನ್ನು ವಿರೋಧಿಸಿ ಐಎಂಎ ಕರೆಯ ಮೇರೆಗೆ ಜಿಲ್ಲಾದ್ಯಂತ ಖಾಸಗಿ ಆಸ್ಪತ್ರೆಗಳು ಹಾಗೂ ಕ್ಲಿನಿಕ್​ಗಳು ಒಪಿಡಿ ಬಂದ್ ಮಾಡಿ ಪ್ರತಿಭಟನೆ ವ್ಯಕ್ತಪಡಿಸಿವೆ.

    ಬೆಳಗ್ಗೆ 6 ಗಂಟೆಯಿಂದ ಖಾಸಗಿ ಚಿಕಿತ್ಸಾಲಯಗಳು ಬಂದ್ ಆಗಿದ್ದವು. ಇದರಿಂದ ಹೊರ ರೋಗಿಗಳಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ದೊರೆಯಲಿಲ್ಲ. ನಗರದ ಎಲ್ಲ 12 ಖಾಸಗಿ ಆಸ್ಪತ್ರೆಗಳು ಹಾಗೂ 24 ಕ್ಲಿನಿಕ್​ಗಳು ಒಪಿಡಿ ಸೇವೆ ಸ್ಥಗಿತಗೊಳಿಸಿದ್ದವು.

    ಖಾಸಗಿ ಆಸ್ಪತ್ರೆ ಒಪಿಡಿ ಬಂದ್ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆ, 6 ತಾಲೂಕು ಆಸ್ಪತ್ರೆ, 5 ಸಮುದಾಯ ಆರೋಗ್ಯ ಕೇಂದ್ರ, 89 ಪ್ರಾಥಮಿಕ ಆರೋಗ್ಯ ಕೇಂದ್ರಗಳು ಹಾಗೂ 2 ನಗರ ಆಸ್ಪತ್ರೆಗಳಲ್ಲಿ ಎಲ್ಲ ವೈದ್ಯಾಧಿಕಾರಿಗಳು ಹಾಗೂ ಆರೋಗ್ಯ ಸಿಬ್ಬಂದಿ ಕಾರ್ಯ ನಿರ್ವಹಿಸಿದರು. ಜಿಲ್ಲಾದ್ಯಂತ ಸರ್ಕಾರಿ ಆಸ್ಪತ್ರೆ ವೈದ್ಯರು, ವೈದ್ಯಕೀಯ ಸಿಬ್ಬಂದಿ ರಜೆ ಪಡೆಯಬಾರದು ಎಂದು ಸೂಚನೆ ನೀಡಲಾಗಿತ್ತು ಎಂದು ಡಿಎಚ್​ಒ ಡಾ. ಎಸ್.ಎನ್.ಉಮೇಶ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts