More

    11ರಂದು ಖಾಸಗಿ ಆಸ್ಪತ್ರೆ ಒಪಿಡಿ ಬಂದ್; ಆಯುರ್ವೆದ ವೈದ್ಯರಿಗೆ ಶಸ್ತ್ರಚಿಕಿತ್ಸೆ ಅನುಮತಿಗೆ ವಿರೋಧ

    ಬೆಂಗಳೂರು: ಆಯುರ್ವೆದ ವೈದ್ಯರಿಗೆ ಕೆಲ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಅವಕಾಶ ನೀಡಿರುವ ಕೇಂದ್ರ ಸರ್ಕಾರದ ಕ್ರಮ ಖಂಡಿಸಿ, ಭಾರತೀಯ ವೈದ್ಯಕೀಯ ಸಂಘದ (ಐಎಂಎ) ನೇತೃತ್ವದಲ್ಲಿ ಅಲೋಪತಿ ವೈದ್ಯರು ಡಿ.11ರಂದು ಬೆಳಿಗ್ಗೆ 6ರಿಂದ ಸಂಜೆ 6ರವರೆಗೆ ಹೊರರೋಗಿ ವಿಭಾಗ (ಒಪಿಡಿ)ದಲ್ಲಿ ಸೇವೆ ಸ್ಥಗಿತಗೊಳಿಸಿ ಮುಷ್ಕರ ನಡೆಸಲು ನಿರ್ಧರಿಸಿದ್ದಾರೆ. ಆದರೆ ತುರ್ತು ಚಿಕಿತ್ಸೆಗಳು ಹಾಗೂ ಕೋವಿಡ್ ಸೇವೆ ಲಭ್ಯ ಇರಲಿದೆ.

    ಕೇಂದ್ರ ಸರ್ಕಾರ ಕಳೆದ ತಿಂಗಳು ಅಪೆಂಡಿಕ್ಸ್, ಪಿತ್ತಕೋಶ, ಹಾನಿಕಾರಕವಲ್ಲದ ಗೆಡ್ಡೆ ತೆಗೆಯುವುದು, ಹಲ್ಲಿನ ರೂಟ್​ಕ್ಯಾನಲ್ ಮುಂತಾದ ಸಾಮಾನ್ಯ ಶಸ್ತ್ರಚಿಕಿತ್ಸೆಗಳನ್ನು ನಡೆಸಲು ಆಯುರ್ವೆದ ವೈದ್ಯರಿಗೆ ಅನುಮತಿ ನೀಡಿದೆ. ಪ್ರಾಯೋಗಿಕವಾಗಿ ತರಬೇತಿ ಪಡೆದ ಸ್ನಾತಕೋತ್ತರ ಪದವೀಧರ ಆಯುರ್ವೆದ ವೈದ್ಯರು ಶಸ್ತ್ರಚಿಕಿತ್ಸೆ ನಡೆಸಬಹುದಾಗಿದ್ದು, ಇದರಿಂದ ರೋಗಿಗಳಿಗೆ ತೊಂದರೆ ಆಗಲಿದೆ ಎಂದು ಅಲೋಪತಿ ವೈದ್ಯರು ದೂರಿದ್ದಾರೆ. ಕೇಂದ್ರ ಸರ್ಕಾರ ತನ್ನ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಒತ್ತಾಯಿಸಿ ಐಎಎಂ ನೇತೃತ್ವದಲ್ಲಿ ಡಿ.8ರಂದು ವೈದ್ಯರು ಕಪ್ಪು ಪಟ್ಟಿ ಧರಿಸಿ ಸೇವೆ ಸಲ್ಲಿಸುವ ಮೂಲಕ ಪ್ರತಿಭಟನೆ ನಡೆಸಲಿದ್ದಾರೆ ಎಂದು ಐಎಂಎ ಕರ್ನಾಟಕ ಶಾಖೆಯ ಕಾರ್ಯದರ್ಶಿ ಡಾ.ಎಸ್.ಎಂ.ಪ್ರಸಾದ್ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts