Wednesday, 12th December 2018  

Vijayavani

ಟ್ರಿನಿಟಿ ಸರ್ಕಲ್​​​ ಬಳಿ ಬಿರುಕು ಬಿಟ್ಟ ಪಿಲ್ಲರ್ - 10 ಕಿಮೀ ವೇಗದಲ್ಲಿ ಮೆಟ್ರೋ ಓಡಾಟ - ಸಮಸ್ಯೆ ಬಗೆಹರಿಸೋದಾಗಿ ಹೇಳಿದ ಸಿಎಂ        ಸದನದ ಹೊರಗೆ NPS ಆದೇಶ ಹಿನ್ನೆಲೆ - ಸಿಎಂ ವಿರುದ್ಧ ಹಕ್ಕುಚ್ಯುತಿ ಮಂಡನೆಗೆ ಬಿಜೆಪಿ ಸಿದ್ದತೆ -  ಸಂಕಷ್ಟ ತಂದ ಪೆನ್ಶನ್‌ ಸ್ಕೀಂ        ಮಧ್ಯಪ್ರದೇಶದಲ್ಲಿ ಸರ್ಕಾರ ರಚನೆ ಕಸರತ್ತು -  ರಾಜ್ಯಪಾಲರನ್ನು ಭೇಟಿಯಾಗಿ ಕಾಂಗ್ರೆಸ್ ಹಕ್ಕು ಮಂಡನೆ        ನಾಳೆ ಕೆಸಿಆರ್ ಪಟ್ಟಾಭಿಷೇಕ- ಪ್ರಮಾಣವಚನಕ್ಕೆ ಚಂದ್ರಶೇಖರ್ ರಾವ್ ಸಿದ್ಧತೆ - ರಾಜ್ಯಪಾಲರನ್ನು ಭೇಟಿಯಾದ ನಾಯಕ        ಶ್ರೀರಂಗಪಟ್ಟಣದಲ್ಲಿ ಶೂಟಿಂಗ್ ವೇಳೆ ಅವಾಂತರ - ಭರತ ಬಾಹುಬಲಿ ತಂಡದ ಮೇಲೆ ಹೆಜ್ಜೇನು ದಾಳಿ -ಏಳು ಮಂದಿ ಆಸ್ಪತ್ರೆಗೆ       
Breaking News

ರಂಗಮಂದಿರ ನಿರ್ಮಾಣಕ್ಕೆ ತಡೆ, ನೋವು ತೋಡಿಕೊಂಡ ನಟಿ ಭಾವನಾ

Friday, 10.08.2018, 9:49 AM       No Comments

ಬೆಂಗಳೂರು: ಜನರನ್ನು ರಂಗಭೂಮಿಯತ್ತ ಕರೆತರುವ ಪ್ರಯತ್ನಕ್ಕೆ ಮುಂದಾಗಿರುವ ನಟಿ ಭಾವನಾ ಅವರ ಕನಸಿಗೆ ಆರಂಭದಲ್ಲೇ ವಿಘ್ನ ಎದುರಾಗಿದೆ.

ಈ ಹಿಂದೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಇದ್ದಾಗ ಅನುಮತಿ ದೊರೆತಿತ್ತು. ಸರ್ಕಾರಿ ಆರ್ಟ್ಸ್​​ ಕಾಲೇಜು ಆವರಣದಲ್ಲಿ ಬಯಲು ರಂಗಮಂದಿರ ನಿರ್ಮಿಸಲು ಮುಂದಾಗಿದ್ದ ಅವರಿಗೆ ಇದೀಗ ಅಡ್ಡಿ ಎದುರಾಗಿದೆ.

ಆದರೆ ಕಾಲೇಜಿನ ವ್ಯವಸ್ಥಾಪಕರಿಂದಲೇ ರಂಗಮಂದಿರ ನಿರ್ಮಾಣಕ್ಕೆ ವಿರೋಧ ವ್ಯಕ್ತವಾಗಿದ್ದು, ನಟಿ ಭಾವನಾ ಮೇಲೆ ಇಲ್ಲ ಸಲ್ಲದ ಆರೋಪ ಮಾಡುತ್ತಿದ್ದಾರೆ ಎನ್ನಲಾಗಿದೆ.

ಈ ಕುರಿತು ದಿಗ್ವಿಜಯ ನ್ಯೂಸ್‌ನೊಂದಿಗೆ ದಾಖಲೆ ಸಮೇತ ಪ್ರತಿಕ್ರಿಯೆ ನೀಡಿದ್ದು, ಈ ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ರಂಗಮಂದಿರ ನಿರ್ಮಾಣಕ್ಕೆ ಅನುಮತಿ ನೀಡಿತ್ತು. ಆದ್ದರಿಂದಲೇ ಈಗಾಗಲೇ ಅಲ್ಲಿ ಕಾಮಗಾರಿಯನ್ನು ಶುರುಮಾಡಲಾಗಿತ್ತು. ಆದರೆ ಇದೀಗ ಕಾಲೇಜುನವರು ತಗಾದೆ ತೆಗೆದಿದ್ದಾರೆ. ಈಗ ಶುರುವಾಗಿರುವ ಕಾಮಗಾರಿಯನ್ನು ಮುಂದುವರಿಸುತ್ತೇನೆ. ಈ ಕುರಿತು ನ್ಯಾಯಾಲಯಕ್ಕೆ ತೆರಳುತ್ತೇನೆ ಎಂದು ತಿಳಿಸಿದ್ದಾರೆ. (ದಿಗ್ವಿಜಯ ನ್ಯೂಸ್)

Leave a Reply

Your email address will not be published. Required fields are marked *

Back To Top