ಚಳ್ಳಕೆರೆ: ಖಾಸಗಿ ಶಾಲೆಗಳ ಬಹು ವರ್ಷಗಳ ಬೇಡಿಕೆಯಂತೆ ರಾಜ್ಯಮಟ್ಟದ ಪ್ರಶಸ್ತಿಗೆ ಖಾಸಗಿ ಶಾಲಾ ಶಿಕ್ಷಕರನ್ನು ಪರಿಗಣಿಸಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.
ತಾಲೂಕು ಖಾಸಗಿ ಅನುದಾನ ರಹಿತ ಶಾಲಾ ಆಡಳಿತ ಮಂಡಳಿ ಟ್ರಸ್ಟ್ ಚಿತ್ರದುರ್ಗ ಜಿಲ್ಲೆ, ಚಳ್ಳಕೆರೆ ನಗರದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯಮಟ್ಟದ ಶೈಕ್ಷಣಿಕ ಸಮಾವೇಶ, ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ಶಿಕ್ಷಕರಿಗೆ ಆರೋಗ್ಯ ವಿಮೆ ನೀಡಲಾಗುವುದು. ಶಾಲಾ ನವೀಕರಣ 10 ವರ್ಷಗಳ ಅವಧಿಗೆ ಅವಕಾಶ ಮಾಡಲಾಗುವುದು. ಆದರೆ, ಕಟ್ಟಡ ಸುರಕ್ಷತಾ ಪರವಾನಗಿ ನೀಡುವಲ್ಲಿ ಸರಳೀಕರಣ ಮಾಡುವುದಿಲ್ಲ. ಖಾಸಗಿ ಶಾಲೆಗಳಲ್ಲಿ ಬಿಸಿಯೂಟ ಯೋಜನೆ ಜಾರಿ ಮಾಡಲು ಆರ್ಥಿಕ ಇಲಾಖೆ ಅನುಮತಿ ಪಡೆದು ಕ್ರಮ ಕೈಗೊಳ್ಳಲಾಗುವುದು. ಸಿರಿಗೆರೆ ಮಠದ ಶ್ರೀಗಳ ಶಿಕ್ಷಣ ಸಂಸ್ಥೆಗಳ ನಿರ್ವಹಣೆಯ ಅನುಭವದ ಮಾರ್ಗದರ್ಶನ ಪಡೆದುಕೊಂಡು ಶಿಕ್ಷಣ ಇಲಾಖೆಯಲ್ಲಿ ಉತ್ತಮ ಸೇವೆ ಮಾಡಲು ಅವಕಾಶ ಮಾಡಿಕೊಳ್ಳುತ್ತೇನೆ ಎಂದು ಹೇಳಿದರು.