

ಮುಂಬೈ: ಬಾಲಿವುಡ್ ನಟ ಶಾರುಖ್ ಖಾನ್ ಅಭಿನಯದ ಬಹುನಿರೀಕ್ಷಿತ 'ಜವಾನ್' ಸಿನಿಮಾ ಸೆಪ್ಟಂಬರ್ 07 ರಂದು ಜಾಗತಿಕ ಬಹುತೇಕ ಚಿತ್ರಮಂದಿರಗಳಲ್ಲಿ ಬಿಡುಗಡೆಗೊಂಡು ಬ್ಲಾಕ್ಬಸ್ಟರ್ ಚಿತ್ರವಾಗಿ ಹೊರಹೊಮ್ಮಿದೆ. ಈ ಸಿನಿಮಾದಲ್ಲಿ ಪ್ರಮುಖ ಪಾತ್ರವೊಂದನ್ನು ನಿರ್ವಹಿಸಿದ್ದ ನಟಿ ಪ್ರಿಯಾಮಣಿ ಇದೀಗ ಮತ್ತೊಬ್ಬ ಸ್ಟಾರ್ ನಟನ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎಂಬ ಮಾಹಿತಿ ಹೊರಬಿದ್ದಿದೆ.
ದಕ್ಷಿಣ ಭಾರತದ ನಟಿಯರ ಪೈಕಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿರುವ ನಟಿ ಪ್ರಿಯಾಮಣಿ, 'ಜವಾನ್' ಹಿಟ್ ಆದ ಬೆನ್ನಲ್ಲೇ ತಮ್ಮ ಮುಂದಿನ ಕೆಲಸವನ್ನು ಎಂದಿನಂತೆ ಪ್ರಾರಂಭಿಸಿದ್ದಾರೆ. ಸದ್ಯ ನಟಿ ಮಲಯಾಳಂ ಚಿತ್ರರಂಗದ ಸ್ಟಾರ್, ಹಿರಿಯ ನಟ ಮೋಹನ್‌ಲಾಲ್ ನಟನೆಯ 'ನೆರೂ' ಚಿತ್ರತಂಡವನ್ನು ಸೇರುವ ಮುಖೇನ ಮಾಲಿವುಡ್ ಸಿನಿಪ್ರೇಕ್ಷಕರ ಮುಂದೆ ಹಾಜರಾಗಲು ಸಜ್ಜಾಗಿದ್ದಾರೆ.
'ನೆರೂ' ಚಿತ್ರದಲ್ಲಿ ಪ್ರಿಯಾಮಣಿ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದ್ದು, ರೋಚಕ ಸುದ್ದಿಯನ್ನು ಹಂಚಿಕೊಳ್ಳಲು ಸೆಟ್‌ನಿಂದ ಹೊಸ ಫೋಟೋವೊಂದನ್ನು ಹಂಚಿಕೊಂಡಿದ್ದಾರೆ. 'ದೃಶ್ಯಂ' ಖ್ಯಾತಿಯ ಜೀತು ಜೋಸೆಫ್ ನಿರ್ದೇಶನದ ಈ ಚಿತ್ರದಲ್ಲಿ ಮೋಹನ್ ಲಾಲ್ ಜತೆಗೆ ನಟಿ ತೆರೆ ಹಂಚಿಕೊಳ್ಳಲಿದ್ದಾರೆ. ಚಿತ್ರಕ್ಕೆ ವಿಷ್ಣು ಶ್ಯಾಮ್ ಸಂಗೀತ ಸಂಯೋಜಿಸಿದ್ದು, ಸತೀಶ್ ಕುರುಪ್ ಛಾಯಾಗ್ರಾಹಣ ಮಾಡಲಿದ್ದಾರೆ,(ಏಜೆನ್ಸೀಸ್).