More

    ಬಿಜೆಪಿಗೆ ಕರ್ನಾಟಕದ ಅಸ್ಮಿತೆಯ ಬಗ್ಗೆ ಯಾವ ಕಾಳಜಿಯೂ ಇಲ್ಲ: ಪ್ರಿಯಾಂಕ್​​ ಖರ್ಗೆ

    ಬೆಂಗಳೂರು: ಕರ್ನಾಟಕದ ಗಡಿ ಭಅಗದಲ್ಲಿ ಮಹಾರಾಷ್ಟ್ರ ಉದ್ಧಟ್ಟತನ, ಸಿಚವರು ಪ್ರತ್ಯೇಕ ರಾಜ್ಯದ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಪ್ರಿಯಾಂಕ್​ ಖರ್ಗೆ ಬಿಜೆಪಿಗೆ ಕರ್ನಾಟಕದ ಅಸ್ಮಿತೆಯ ಬಗ್ಗೆ ಯಾವ ಕಾಳಜಿಯೂ ಇಲ್ಲ ಎಂದು ಆರೋಪಿಸಿದ್ದಾರೆ.

    ಈ ಕುರಿತು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಪ್ರಿಯಾಂಕ್​ ಬಿಜೆಪಿ ಕರ್ನಾಟಕವನ್ನು ಒಡೆಯುತ್ತಿದೆ. ಅವರಿಗೆ ಕರ್ನಾಟಕದ ಅಸ್ಮಿತೆಯ ಬಗ್ಗೆ ಯಾವ ಕಾಳಜಿಯೂ ಇಲ್ಲ. ರಾಜ್ಯದ ಇತಿಹಾಸ ಹಾಗೂ ಕರ್ನಾಟಕದ ಏಕೀಕರಣಕ್ಕೆ ಅವರ ಕೊಡುಗೆಯೇ ಇಲ್ಲ. ಹೀಗಿರುವಾಗ ಅವರಿಗೆ ಕರ್ನಾಟಕ, ಕನ್ನಡದ ವಿಚಾರವಾಗಿ ಪ್ರೀತಿ ಹುಟ್ಟಲು ಹೇಗೆ ಸಾಧ್ಯ ಎಂದು ಹೇಳಿದ್ದಾರೆ.

    ಪ್ರತ್ಯೇಕ ರಾಜ್ಯದ ಬೇಡಿಕೆ ಬಗ್ಗೆ ಒಂದು ಮಾತು ಆಡುವುದಿಲ್ಲ

    ಶಾಸಕ ಶಿವರಾಜ್ ಪಾಟೀಲ್ ಜಿಲ್ಲಾ ಉಸ್ತುವಾರಿ ಸಚಿವರನ್ನು ಪಕ್ಕದಲ್ಲಿ ಕೂರಿಸಿಕೊಂಡೇ ರಾಯಚೂರನ್ನು ಆಂಧ್ರ ಪ್ರದೇಶಕ್ಕೆ ಸೇರಿಸಿ ಎನ್ನುತ್ತಾರೆ. ಸಚಿವ ಆನಂದ್ ಸಿಂಗ್ ಅವರು ಉತ್ತರ ಕರ್ನಾಟಕ ಹಾಗೂ ದಕ್ಷಿಣ ಕರ್ನಾಟಕ ಪ್ರತ್ಯೇಕ ರಾಜ್ಯ ಮಾಡಬೇಕು ಎಂದು ಹೇಳುತ್ತಾರೆ. ಆದರೆ, ಈ ಬಗ್ಗೆ ಬಿಜೆಪಿ ಒಂದು ಮಾತನ್ನೂ ಆಡುವುದಿಲ್ಲ ಎಂದು ಕಿಡಿಕಾರಿದ್ದಾರೆ.

    ಇದನ್ನೂ ಓದಿ: ಮುಂಬೈನಲ್ಲಿ ಅಕ್ರಮ ಫಿಲಂ ಸ್ಟುಡಿಯೋಗಳ ನೆಲಸಮ; ತನಿಖೆಗೆ ಆಗ್ರಹಿಸಿದ ಬಿಜೆಪಿ

    ಮಹಾ ತಗಾದೆ ಬಗ್ಗೆ ಯಾಕೆ ಮೌನ

    ಮೋದಿ ಹಾಗೂ ಅಮಿತ್ ಶಾ ಅವರು ರಾಜ್ಯಕ್ಕೆ ಬಂದಾಗ ಅನೇಕ ವಿಚಾರಗಳ ಬಗ್ಗೆ ಮಾತನಾಡುತ್ತಾರೆ. ಪ್ರಧಾನಿಗಳು ನನ್ನ ಸಮಾಧಿ ತೊಡಲು ಪ್ರಯತ್ನಿಸುತ್ತಿದ್ದಾರೆ ಎಂದು ಹೇಳುತ್ತಾರೆ. ಆದರೆ, ಅವರು ರಾಜ್ಯಕ್ಕೆ ಬಂದಾಗ ಮಹಾರಾಷ್ಟ್ರ ತಗಾದೆ ಬಗ್ಗೆ ಯಾಕೆ ಮಾತನಾಡುತ್ತಿಲ್ಲ ಕರ್ನಾಟಕದ ಬಗ್ಗೆ ಮಾತ್ರ ಮಾತನಾಡುವುದಿಲ್ಲ ಎಂದು ಶಾಸಕ ಪ್ರಿಯಾಂಕ್​ ಖರ್ಗೆ ಸುದ್ದಿಗೋಷ್ಠಿಯಲ್ಲಿ ಪ್ರಶ್ನಿಸಿದ್ದಾರೆ.

    ಸುದೀಪ್​ ಅವರ ನಡೆಗೆ ನಮ್ಮ ತಕರಾರಿಲ್ಲ

    ಇನ್ನು ನಟ ಸುದೀಪ್​ ಬಿಜೆಪಿ ಬೆಂಬಲಿಸುತ್ತಿರುವ ಕುರಿತು ಪ್ರತಿಕ್ರಿಯಿಸಿ ಅವರ ನಡೆಗೆ ನಮ್ಮ ತಕರಾರಿಲ್ಲ, ಆದರೆ 40% ಕಮಿಷನ್ ಆರೋಪ ಹೊತ್ತಿರುವ ಸರ್ಕಾರವನ್ನು ಬೆಂಬಲಿಸುವುದು ಸೂಕ್ತವೇ ಎಂದು ಪ್ರಶ್ನಿಸಿದ್ದಾರೆ.

    ನಟನಾಗಿ ಕರ್ನಾಟಕಕ್ಕೆ ಅವರ ಕೊಡುಗೆ ಅಪಾರ ಐಆರಿಗೆ ಬೆಂಬಲ ಕೊಡಬೇಕು ಎನ್ನುವ ವಿಚಾರಕ್ಕೆ ಅವರು ಸ್ವತಂತ್ರರು. ನಾಡು, ನುಡಿ, ನೆಲ, ಜಲದ ಬಗ್ಗೆ ಸದಾ ಮುಂಚೂಣಿಯಲ್ಲಿರುತ್ತಾರೆ. ಈಗಲೂ ಅವರು ಜನರ ಪರವಾಗಿ ನಿಲ್ಲಬೇಕು ಎಂದು ಹೇಳಿದ್ದಾರೆ.

    ಇನ್ನು ಎಸ್​​ಟಿ ಸಮುದಾಯದ ಸ್ವಾಮೀಜಿ ಒಬ್ಬರು ಮೀಸಲಾತಿ ಹೆಚ್ಚಳಕ್ಕೆ ಆಗ್ರಹಿಸಿ ಧರಣಿ ಕೂತ ಸಂದರ್ಭದಲ್ಲಿ ಸುದೀಪ್​ ಅವರು ಬೆಂಬಲ ನೀಡಿದ್ದರೆ ಬೊಮ್ಮಾಯಿ ಮಾಮ ಮೀಸಲಾತಿ ಹೆಚ್ಚಳ ಮಾಡುತ್ತಿದ್ದರು ಎಂದು ವ್ಯಂಗ್ಯವಾಡಿದ್ಧಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts