

ಬೆಂಗಳೂರು: ಬೀದರ್ ಜಿಲ್ಲೆ ಭಾಲ್ಕಿ ಮೂಲದ ಗುತ್ತಿಗೆದಾರ ಸಚಿನ್ ಪಾಂಚಾಳ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತನ ಹೆಸರು ಕೇಳಿ ಬರುತ್ತಿದ್ದು, ವಿಪಕ್ಷ ಬಿಜೆಪಿ ಪ್ರಿಯಾಂಕ್ ಖರ್ಗೆ ಅವರಿಗೆ ರಾಜೀನಾಮೆ ನೀಡುವಂತೆ ಆಗ್ರಹಿಸಿದೆ. ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿರುವ ಪ್ರಿಯಾಂಕ್ ಖರ್ಗೆ (Priyank Kharge) ಎಷ್ಟೇ ಚೀರಾಡಲಿ, ಬಟ್ಟೆ ಹರಿದುಕೊಳ್ಳಲಿ ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.
ಬೆಂಗಳೂರಿನಲ್ಲಿ ಈ ಬಗ್ಗೆ ಮಾತನಾಡಿದ ಸಚಿವ ಪ್ರಿಯಾಂಕ್ ಖರ್ಗೆ (Priyank Kharge), ಗುತ್ತಿಗೆದಾರ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾನು ಈಗಾಗಲೇ ಗೃಹಸಚಿವರು ಹಾಗೂ ಮುಖ್ಯಮಂತ್ರಿಗಳಿಗೆ ಪತ್ರ ಬರೆದು ಸಿಐಡಿ ತನಿಖೆಗೆ ಆಗ್ರಹಿಸಿದ್ದೇನೆ. ಸಿಎಂ ಭೇಟಿ ಮಾಡಿ ಮಾಹಿತಿ ನೀಡಿದ್ದೇನೆ, ಗೃಹ ಸಚಿವರನ್ನೂ ಕೂಡ ಭೇಟಿ ಮಾಡಿದ್ದೇನೆ.
ಬಿಜೆಪಿಯವರು ಬಹಳ ದೊಡ್ಡ ಹಗರಣ ಆಗಿದೆ ಎಂದು ಬಿಂಬಿಸುತ್ತಿದ್ದಾರೆ. ಕಲಬುರಗಿಯಲ್ಲಿ ಕಲಬುರಗಿಗೆ ಮುತ್ತಿಗೆ ಹಾಕಲಿ ಯಾರು ಬೇಡ ಎಂದಿದ್ದಾರೆ. ನನ್ನ ವಿರುದ್ದ ಏನಾದರೂ ದಾಖಲಾತಿ ಇದ್ದರೆ ತಂದು ಕೊಡಿ. ಅದರ ಬದಲು ಕಲಬುರಗಿಯಲ್ಲಿ ಯಾಕೆ ಮುತ್ತಿಗೆ ಹಾಕ್ತೀರಾ ನಿಮಗೆ ನಬಾಚಿಕೆ ಆಗಲ್ವಾ ಎಂದು ವಾಗ್ದಾಳಿ ನಡೆಸಿದ್ದಾರೆ.
ನನ್ನ ಆಪ್ತ ಮಾಡಿರಬಹುದು ಎಂದು ಈ ನಾಟಕವಾ ಮಾಧ್ಯಮದವರು ಬಿಜೆಪಿಯವರನ್ನು ಯಾಕೆ ಸೀರಿಯಸ್ ಆಗಿ ತೆಗೆದುಕೊಳ್ಳುತ್ತಿದ್ದೀರಿ. ರಾಜು ಕಪನೂರ್ ನನ್ನ ಆತ್ಮೀಯ ಎಂದು ನಾನು ಎಲ್ಲಿಯೂ ಹೇಳಿಲ್ಲ. ರಾಜು ಕಪನೂರ್ ಬಿಜೆಪಿ ಅಭ್ಯರ್ಥಿ ಜತೆಗಿರುವ ಫೋಟೋ ನನ್ನ ಬಳಿಕ ಇದೆ. ರಾಜೂ ಕಪನೂರ್ ಬಿಜೆಪಿ ಎಸ್ಸಿ ಮೋರ್ಚಾ ಅಧ್ಯಕ್ಷರಾಗಿದ್ದರು ಎಂದು ಆರೋಪಿಸಿ ಫೋಟೋ ಒಂದನ್ನು ಬಿಡುಗಡೆ ಮಾಡಿದ್ದಾರೆ.
ರಾಜು ಕಪನೂರು ಪರಿಚಯ ಇಲ್ಲ ಅಂತ ನಾವು ಹೇಳಿಲ್ಲ. ನಟಿಯರ ಡ್ರಗ್ ಕೇಸ್‌ನಲ್ಲಿ ವಿಪಕ್ಷ ನಾಯಕ ಅಶೋಕ್ ಜೊತೆ ನಟಿಯರ ಫೋಟೋ ಇತ್ತು. ಹಾಗಾದ್ರೆ ಅದಕ್ಕೆ ಅಶೋಕ್ ಸಂಬಂಧ ಹೇಳೋಕೆ ಆಗುತ್ತಾ. ಫೋಕ್ಸೋ ಕೇಸ್‌ನಲ್ಲಿ ಯಡಿಯೂರಪ್ಪ ಯಾಕೆ ರಾಜೀನಾಮೆ ಕೊಟ್ಟಿಲ್ಲ. ಅಕ್ರಮ ಹಣ ದುರ್ಬಳಕೆ ಪ್ರಕರಣದಲ್ಲಿ ವಿಜಯೇಂದ್ರ ಯಾಕೆ ರಾಜೀನಾಮೆ ಕೊಟ್ಟಿಲ್ಲ. ಮೊದಲು ನಿಮ್ಮ ನಾಯಕರಿಗೆ ನೋಟಿಸ್ ಕೊಡಿ ಎಂದು ಬಿಜೆಪಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ (Priyank Kharge) ವಾಗ್ದಾಳಿ ನಡೆಸಿದ್ದಾರೆ.