26.8 C
Bangalore
Friday, December 13, 2019

3 ವರ್ಷಗಳ ನಂತರ ಬಾಲಿವುಡ್​ನಲ್ಲಿ ಬರುತ್ತಿದೆ ಪಿಗ್ಗಿ ಚಿತ್ರ: ಟೊರಾಂಟೋ ಚಿತ್ರೋತ್ಸವದಲ್ಲಿ ದ ಸ್ಕೈ ಈಸ್​ ಪಿಂಕ್​ ಪ್ರೀಮಿಯರ್​

Latest News

ಶಬರಿಮಲೆ ವಿಚಾರದಲ್ಲಿ ಸದ್ಯ ಯಾವುದೇ ಆದೇಶವನ್ನು ಹೊರಡಿಸಲು ಸಾಧ್ಯವಿಲ್ಲ: ಸುಪ್ರೀಂಕೋರ್ಟ್​

ನವದೆಹಲಿ: ಪೊಲೀಸ್​ ರಕ್ಷಣೆಯೊಂದಿಗೆ ಶಬರಿಮಲೆ ಅಯ್ಯಪ್ಪನ ಸನ್ನಿಧಿಯನ್ನು ಮಹಿಳೆಯರು ಸುರಕ್ಷಿತವಾಗಿ ಪ್ರವೇಶಿಸಲು ಕೇರಳ ಸರ್ಕಾರಕ್ಕೆ ನಿರ್ದೇಶನ ನೀಡಬೇಕೆಂದು ಇಬ್ಬರು ಮಹಿಳಾ ಕಾರ್ಯಕರ್ತರು ಸಲ್ಲಿಸಿದ್ದ...

ತುಮಕೂರು ಸ್ಮಾರ್ಟ್‌ಸಿಟಿ ಜೆಎಂಡಿ ಎತ್ತಂಗಡಿ!

ತುಮಕೂರು: ಸ್ಮಾರ್ಟ್‌ಸಿಟಿ ಲಿಮಿಟೆಡ್ ಜಂಟಿ ವ್ಯವಸ್ಥಾಪಕ ನಿರ್ದೇಶಕ ವಿ.ಅಜಯ್ ಅವರನ್ನು ಎತ್ತಂಗಡಿ ಮಾಡಲಾಗಿದೆ. 3 ತಿಂಗಳ ಹಿಂದೇ ಸ್ಮಾರ್ಟ್‌ಸಿಟಿ ಎಂಡಿ ಜವಾಬ್ದಾರಿ ಹೊಣೆ ಹೊತ್ತಿದ್ದ ಮಹಾನಗರ...

ಕುಪ್ಪೂರು ಶ್ರೀ ಮರುಳಸಿದ್ದೇಶ್ವರ ಜಾತ್ರೆಗೆ ಸಿಎಂ ಯಡಿಯೂರಪ್ಪ ಚಾಲನೆ

ಚಿಕ್ಕನಾಯಕನಹಳ್ಳಿ: ಸುಕ್ಷೇತ್ರ ಕುಪ್ಪೂರು ಶ್ರೀಮರುಳಸಿದ್ದೇಶ್ವರ ಗದ್ದುಗೆ ಜಾತ್ರೆಗೆ ಸಿಎಂ ಬಿ.ಎಸ್.ಯಡಿಯೂರಪ್ಪ ಗುರುವಾರ ಚಾಲನೆ ನೀಡಿದ್ದು, ನಾಡಿನ ವಿವಿಧೆಡೆಯಿಂದ ಸಾವಿರಾರು ಭಕ್ತರು ಜಾತ್ರೆಗೆ ಬಂದಿದ್ದರು. ಶ್ರೀಮಠದ ಆವರಣದಲ್ಲಿ ಗುರುವಾರ...

ಬಲರಾಮ್ ಕುಣಿಗಲ್ ಬಿಜೆಪಿ ಅಧ್ಯಕ್ಷ

ಕುಣಿಗಲ್: ತಾಲೂಕು ಬಿಜೆಪಿ ನೂತನ ಅಧ್ಯಕ್ಷರಾಗಿ ತಾಲೂಕು ಪಂಚಾಯಿತಿ ಸ್ಥಾಯಿ ಸಮಿತಿ ಅಧ್ಯಕ್ಷ ಕೆ.ಎಸ್.ಬಲರಾಮ್ ಗುರುವಾರ ಅವಿರೋಧ ಆಯ್ಕೆಯಾದರು. ಪಟ್ಟಣದ ದಿಶಾ ಪಾರ್ಟಿ ಹಾಲ್‌ನಲ್ಲಿ ರಾಜ್ಯ ಬಿಜೆಪಿ...

ಭಾರತದ ಪ್ರಗತಿಗೆ ಬೇಕು ವೈಜ್ಞಾನಿಕ ಶಿಕ್ಷಣ: ಡಾ.ಡಿ.ವಿ.ಗೋಪಿನಾಥ್

ದಾವಣಗೆರೆ: ಭಾರತದ ಪ್ರಗತಿಗೆ ವೈಜ್ಞಾನಿಕ ಶಿಕ್ಷಣ ಅತ್ಯವಶ್ಯ ಎಂದು ಮುಂಬೈನ ಭಾಭಾ ಅಣು ಸಂಶೋಧನಾ ಕೇಂದ್ರದ ಜೀವ ವೈದ್ಯಕೀಯ ವಿಭಾಗದ ನಿವೃತ್ತ ನಿರ್ದೇಶಕ ಡಾ.ಡಿ.ವಿ.ಗೋಪಿನಾಥ್ ಹೇಳಿದರು. ಪಾರ್ವತಮ್ಮ...

ಟೊರಾಂಟೋ: ಬಾಲಿವುಡ್​ ನಟಿ ಪ್ರಿಯಾಂಕಾ ಚೋಪ್ರಾ ಮೂರು ವರ್ಷಗಳ ಬಳಿಕ ಮೊದಲ ಬಾರಿಗೆ ದ ಸ್ಕೈ ಈಸ್​​ ಪಿಂಕ್​ ಎಂಬ ಹಿಂದಿ ಚಲನಚಿತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಈ ಚಿತ್ರದ ವಿಶ್ವ ಪ್ರೀಮಿಯರ್​ ಶೋ ಟೊರಾಂಟೋ ಫಿಲಂ ಫೆಸ್ಟಿವಲ್​ನಲ್ಲಿ ಶುಕ್ರವಾರ ನೆರವೇರಿತು. ಕಪ್ಪು ಮತ್ತು ಬಿಳಿ ಬಣ್ಣದ ಮಿಶ್ರಣದ ಗೌನ್​ ಧರಿಸಿ ಕಂಗೊಳಿಸುತ್ತಿದ್ದ ಅವರು ಟೊರಾಂಟೋ ಚಿತ್ರೋತ್ಸವದಲ್ಲಿ ರೆಡ್​ ಕಾರ್ಪೆಟ್​ ಮೇಲೆ ಲಯಬದ್ಧವಾದ ಮಾರ್ಜಾಲ ನಡಿಗೆಯೊಂದಿಗೆ ಬಂದು ಎಲ್ಲರ ಗಮನಸೆಳೆದರು.

ಪ್ರಿಯಾಂಕಾ! ಪ್ರಿಯಾಂಕಾ! ಎಂದು ಅಭಿಮಾನಿಗಳು ನಾಮಜಪಿಸುತ್ತಿರುವಂತೆ ತಮ್ಮ ಗೌನ್​ ಮೇಲೆ ಕಪ್ಪು ಬಣ್ಣದ ಸ್ಯಾಟಿನ್​ ಬೆಲ್ಟ್​ ಕಟ್ಟಿಕೊಂಡು ದಿರಿಸಿನ ನೋಟದ ಸೊಬಗನ್ನು ಹೆಚ್ಚಿಸಿಕೊಂಡಿದ್ದ 37 ವರ್ಷ ವಯಸ್ಸಿನ ನಟಿ, ಅಭಿಮಾನಿಗಳ ನೆಚ್ಚಿನ ಪಿಗ್ಗಿ ತಮ್ಮ ಕಾರಿನಿಂದ ಹೊರಬಂದು ಅಭಿಮಾನಿಗಳತ್ತ ಕೈಬೀಸಿ ಮುಗಳ್ನಕ್ಕರು.

ಪಿಗ್ಗಿ ನಟಿಸಿದ್ದ ವಾಟ್​ ಈಸ್​ ಯುವರ್​ ರಾಶಿ? ಎಂಬ ಬಾಲಿವುಡ್​ ಚಿತ್ರದ ಜಾಗತಿಕ ಪ್ರೀಮಿಯರ್​ ಶೋ ಕೂಡ ಟೊರಾಂಟೋ ಚಲನಚಿತ್ರೋತ್ಸವ ನಡೆಯುವ ರಾಯ್​ ಥಾಮ್ಸನ್​ ಹಾಲ್​ನಲ್ಲಿ ಆಯೋಜನೆಗೊಂಡಿತ್ತು. ಇದಾಗಿ ಒಂದು ದಶಕದ ಬಳಿಕ ಅವರ ನಟನೆಯ ಮತ್ತೊಂದು ಚಿತ್ರ ದ ಸ್ಕೈ ಈಸ್​ ಪಿಂಕ್​ನ ಜಾಗತಿಕ ಪ್ರೀಮಿಯರ್​ ಶೋ ಅದೇ ಹಾಲ್​ನಲ್ಲಿ ನಡೆದದ್ದು ವಿಶೇಷವಾಗಿತ್ತು.

ದ ಸ್ಕೈ ಈಸ್​ ಪಿಂಕ್​ನಲ್ಲಿ ಪ್ರಿಯಾಂಕಾ ಚೋಪ್ರಾ ಜತೆ ಕಾಣಿಸಿಕೊಂಡಿರುವ ಫರ್ಹಾನ್​ ಅಖ್ತರ್​ ಮತ್ತು ರೋಹಿತ್​ ಸರಾಫ್​ ಕೂಡ ಇದ್ದರು. ಇತ್ತೀಚೆಗಷ್ಟೇ ಬಾಲಿವುಡ್​ನಿಂದ ದಿಢೀರ್​ ನಿವೃತ್ತಿ ಘೋಷಿಸಿರುವ ಕಾಶ್ಮೀರದ ನಟಿ ಝೈರಾ ವಾಸಿಂ ಕೂಡ ಇವರೊಂದಿಗೆ ಇದ್ದರು ಎನ್ನಲಾಗಿದೆ.

13ನೇ ವಯಸ್ಸಿನಲ್ಲೇ ರೋಗನಿರೋಧಕ ಶಕ್ತಿ ಕಳೆದುಕೊಳ್ಳುವ ಆರೋಗ್ಯ ಸಮಸ್ಯೆಗೆ ತುತ್ತಾದ ಬಳಿಕ ಪ್ರೇರಣಾದಾಯಕ ಭಾಷಣಗಳನ್ನು ಮಾಡುತ್ತಾ ಪ್ರಖ್ಯಾತಿಯ ಶಿಖರವನ್ನು ಏರಿದ ಐಸಾ ಚೌಧರಿ ಜೀವನಾಧಾರಿತ ಕಥಾಹಂದರ ದ ಸ್ಕೈ ಈಸ್​ ಪಿಂಕ್​ನದ್ದಾಗಿದೆ. ಜತೆಗೆ ಐಸಾ ಚೌಧರಿ ಅವರ ಪಾಲಕರ ಪ್ರೇಮಕಥೆಯ ಹಿನ್ನೆಲೆಯನ್ನೂ ಹೊಂದಿದೆ. ಈ ಚಿತ್ರವನ್ನು ಪ್ರಿಯಾಂಕಾ ಚೋಪ್ರಾ, ರೋನಿ ಸ್ಕ್ರೀವ್​ವಾಲಾ ಮತ್ತು ಸಿದ್ಧಾರ್ಥ ರಾಯ್​ ಕಪೂರ್​ ಒಟ್ಟಾಗಿ ನಿರ್ಮಿಸಿದ್ದಾರೆ. ಈ ಚಿತ್ರ ಅಕ್ಟೋಬರ್​ 11ರಂದು ಬಿಡುಗಡೆಯಾಗಲಿದೆ. (ಏಜೆನ್ಸೀಸ್​)

Stay connected

278,748FansLike
588FollowersFollow
626,000SubscribersSubscribe

ವಿಡಿಯೋ ನ್ಯೂಸ್

VIDEO| ಬರೋಬ್ಬರಿ 20 ಕೆ.ಜಿ. ತೂಕದ ಹೆಬ್ಬಾವು ಸೆರೆಹಿಡಿದ ಮಹಿಳೆ:...

ತಿರುವನಂತಪುರ: ಮಹಿಳೆಯೊಬ್ಬರು ಸುಮಾರು 20 ಕೆ.ಜಿ. ತೂಗುವ ಬೃಹದಾಕಾರದ ಹೆಬ್ಬಾವನ್ನು ಸೆರೆಹಿಡಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್​ ಆಗಿದ್ದು, ಮೆಚ್ಚುಗೆ ಮಹಾಪೂರ ಹರಿದುಬಂದಿದೆ. ವಿಡಿಯೋದಲ್ಲಿರುವ ಮಹಿಳೆಯನ್ನು ಕೊಚ್ಚಿ ಮೂಲದ ವನ್ಯಜೀವಿ ಸಂರಕ್ಷಕಿ...

ಅತ್ಯಾಚಾರ ಪ್ರಕರಣ ಕುರಿತು ರಾಹುಲ್​ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ಗದ್ದಲ:...

ನವದೆಹಲಿ: ಅತ್ಯಾಚಾರ ಪ್ರಕರಣ ಕುರಿತು ಗುರುವಾರ ಜಾರ್ಖಂಡ್​ ಸಮಾವೇಶದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ಹಾಗೂ ವಯನಾಡಿನ ಹಾಲಿ ಸಂಸದ ರಾಹುಲ್​ ಗಾಂಧಿ ನೀಡಿದ್ದ ಹೇಳಿಕೆಗೆ ಸಂಸತ್ತಿನಲ್ಲಿ ತೀವ್ರ ಆಕ್ಷೇಪ ವ್ಯಕ್ತವಾಗಿದೆ....

VIDEO: 8 ಅಡಿ ಉದ್ದದ ಹೆಬ್ಬಾವನ್ನು ರಕ್ಷಿಸಲು 40 ಅಡಿ...

ತ್ರಿಶೂರ್​: ಇಲ್ಲೋರ್ವ ಯುವಕ ಬಾವಿಯಲ್ಲಿ ಬಿದ್ದಿದ್ದ ಹೆಬ್ಬಾವನ್ನು ರಕ್ಷಿಸಲು ಹಗ್ಗದ ಮೂಲಕ ಕೆಳಗೆ ಇಳಿದು ಬಳಿಕ ಅಪಾಯಕ್ಕೆ ಸಿಲುಕಿದ ವಿಡಿಯೋವೊಂದು ವೈರಲ್​ ಆಗಿದೆ. ಈ ಘಟನೆ ನಡೆದಿದ್ದು ಕೇರಳದ ತ್ರಿಶೂಲ್​ನಲ್ಲಿ ಎನ್ನಲಾಗಿದೆ. ವಿಡಿಯೋದಲ್ಲಿ ಇರುವ...

VIDEO| ಲಕ್ಷ್ಯದ ಜೊತೆಯಲಿ ಅನಿರುದ್ಧ್; ಡೈಲಾಗ್​ ಟೀಸರ್​ ಬಿಡುಗಡೆ

ಬೆಂಗಳೂರು: ‘ಜೊತೆ ಜೊತೆಯಲಿ’ ಧಾರಾವಾಹಿ ಮೂಲಕ ಕನ್ನಡಿಗರ ಮನೆಮನ ಗೆದ್ದಿರುವ ನಟ ಅನಿರುದ್ಧ್ ಈಗ ‘ಲಕ್ಷ್ಯ’ಗೆ ಜತೆಯಾಗಿದ್ದಾರೆ. ಅಂದರೆ ‘ಲಕ್ಷ್ಯ’ ಸಿನಿಮಾದ ಡೈಲಾಗ್ ಟೀಸರ್ ಬಿಡುಗಡೆ ಮಾಡುವ ಮೂಲಕ ಅವರು ಚಿತ್ರತಂಡದ ಜತೆ...

VIDEO| ಇಸ್ರೋದಿಂದ ರಿಸ್ಯಾಟ್​-2ಬಿಆರ್​1 ಹೆಸರಿನ ಮತ್ತೊಂದು ಬೇಹುಗಾರಿಕಾ ಉಪಗ್ರಹ ಯಶಸ್ವಿ...

ನವದೆಹಲಿ: ಪಿಎಸ್​ಎಲ್​ವಿ-ಸಿ48 ಉಡಾವಣಾ ವಾಹಕ ಹೊತ್ತ ರಿಸ್ಯಾಟ್​-2ಬಿಆರ್​1 ಹೆಸರಿನ ಉಪಗ್ರಹವನ್ನು ಇಸ್ರೋ ಶ್ರೀಹರಿಕೋಟದಲ್ಲಿರುವ ಸತೀಶ್​ ಧವನ್​ ಉಡಾವಣಾ ಕೇಂದ್ರದಿಂದ ಬುಧವಾರ ಮಧ್ಯಾಹ್ನ ಯಶಸ್ವಿಯಾಗಿ ಉಡಾವಣೆಗೊಳಿಸಿತು. ರಿಸ್ಯಾಟ್​-2ಬಿಆರ್​1 ಉಪ್ರಗಹದ ಜೊತೆಗೆ 9 ಗ್ರಾಹಕ...

VIDEO| ವಿಜಯವಾಣಿ-ದಿಗ್ವಿಜಯ ನ್ಯೂಸ್​ ಸಹಯೋಗದಲ್ಲಿ ಫೋನ್​ ಇನ್​ ಪ್ರೋಗ್ರಾಮ್​: ಮಹಿಳಾ...

ಬೆಂಗಳೂರು: ದಿಶಾ ಅತ್ಯಾಚಾರ ಮತ್ತು ಕೊಲೆ ಹಾಗೂ ಉನ್ನಾವೋ ಅತ್ಯಾಚಾರ ಪ್ರಕರಣಗಳಂತಹ ಪೈಶಾಚಿಕ ಕೃತ್ಯಗಳು ಜನರ ಮನಸ್ಸಿನಲ್ಲಿನ್ನೂ ಮಾಸಿಲ್ಲ. ಈ ಎರಡು ಪ್ರಕರಣಗಳಿಂದ ದೇಶದೆಲ್ಲೆಡೆ ಮಹಿಳಾ ಸುರಕ್ಷಾ ಪ್ರಶ್ನೆಯನ್ನು ಎಬ್ಬಿಸಿದೆ....