ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ

ರಾಯಬಾಗ: ಎಐಸಿಸಿ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದನ್ನು ಖಂಡಿಸಿ ರಾಯಬಾಗ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ ನೇತೃತ್ವದಲ್ಲಿ ಶನಿವಾರ ಪ್ರತಿಭಟನೆ ನಡೆಸಿ, ತಹಸೀಲ್ದಾರ್ ಡಿ.ಎಚ್.ಕೋಮರ ಅವರ ಮೂಲಕ ರಾಷ್ಟ್ರಪತಿಗೆ ಮನವಿ ಸಲ್ಲಿಸಿದರು.

ಕೆಲ ದಿನಗಳ ಹಿಂದೆ ಭೂ ಕಲಹಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೋನಭದ್ರಾದಲ್ಲಿ ಒಂದೇ ಕುಟುಂಬದ ಹತ್ತು ಜನರ ಹತ್ಯೆ ಖಂಡಿಸಿ ಶುಕ್ರವಾರ ಪ್ರಿಯಾಂಕಾ ಗಾಂಧಿ ಅವರು, ಮೃತರ ಕುಟುಂಬದವರಿಗೆ ಸಾಂತ್ವನ ಹೇಳಲು ಹೊರಟಾಗ ರಸ್ತೆಯಲ್ಲಿ ಅವರನ್ನು ಉತ್ತರ ಪ್ರದೇಶದ ಪೊಲೀಸರು ಬಂಧಿಸಿರುವುದು ಕಾನೂನು ಬಾಹಿರವಾಗಿದೆ ಎಂದು ಆರೋಪಿಸಿ, ಉತ್ತರ ಪ್ರದೇಶ ಸರ್ಕಾರದ ಧೋರಣೆ ಖಂಡಿಸಿದರು. ಕೂಡಲೇ ರಾಷ್ಟ್ರಪತಿಗಳು ಮಧ್ಯಪ್ರವೇಶಿಸಿ ಉತ್ತರ ಪ್ರದೇಶ ಸರ್ಕಾರ ಮತ್ತು ಪೊಲೀಸರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ರಾಯಬಾಗ ಬ್ಲಾಕ್ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಈರಗೌಡ ಪಾಟೀಲ, ಮಹಾವೀರ ಮೊಹಿತೆ, ಅಪ್ಪಾಸಾಬ ಕುಲಗುಡೆ, ದಿಲೀಪ ಜಮಾದಾರ, ನಾಮದೇವ ಕಾಂಬಳೆ, ಕುಂತಿನಾಥ ಮಗದುಮ್ಮ, ಧೂಳಗೌಡ ಪಾಟೀಲ, ವಿಠ್ಠಲ ಬಂಡಗಾರ, ಮಾರುತಿ ನಾಯಿಕ, ಜಿನೇಶ್ವರ ಮಗದುಮ್ಮ, ಸುಭಾಸ ಕೋಟಿವಾಲೆ, ರಾಜು ಶಿರಗಾಂವೆ, ಶ್ರವಣ ಕಾಂಬಳೆ, ಸಿದ್ರಾಮ ಪೂಜಾರಿ, ಹಾಜಿ ಮುಲ್ಲಾ ಇತರರು ಇದ್ದರು.

Leave a Reply

Your email address will not be published. Required fields are marked *