More

    ವಿದ್ಯಾರ್ಥಿನಿಯರಿಗೆ ಉಚಿತ ಸ್ಮಾರ್ಟ್​ಫೋನ್​, ಸ್ಕೂಟರ್​: ಪ್ರಿಯಾಂಕ ಗಾಂಧಿ

    ಉತ್ತರ ಪ್ರದೇಶ: ಮುಂಬರುವ ವಿಧಾನಸಭೆ ಚುನಾವಣೆಯಲ್ಲಿ ಮಹಿಳೆಯರಿಗೆ ಶೇ.40 ಟಿಕೆಟ್​ ಕೊಡುವುದಾಗಿ ಘೋಷಿಸಿರುವ ಕಾಂಗ್ರೆಸ್​ನ ಯುವ ನಾಯಕಿ ಪ್ರಿಯಾಂಕ ಗಾಂಧಿ, ಮತ್ತೆರಡು ಮಹತ್ವದ ಭರವಸೆ ನೀಡಿದ್ದಾರೆ.

    ಉತ್ತರ ಪ್ರದೇಶದಲ್ಲಿ ಕಾಂಗ್ರೆಸ್​ ಬಹುಮತ ಪಡೆದರೆ ದ್ವಿತೀಯ ಪಿಯುಸಿ ಉತ್ತೀರ್ಣರಾಗುವ ಎಲ್ಲ ವಿದ್ಯಾರ್ಥಿನಿಯರಿಗೂ ಸ್ಮಾರ್ಟ್​ಫೋನ್​ ಹಾಗೂ ಪದವಿ ಓದುತ್ತಿರುವ ಎಲ್ಲ ವಿದ್ಯಾರ್ಥಿನಿಯರಿಗೂ ಎಲೆಕ್ಟ್ರಿಕ್​ ಸ್ಕೂಟರ್​ ಅನ್ನು ಉಚಿತವಾಗಿ ಕೊಡಲಾಗುತ್ತದೆ ಎಂದು ಪ್ರಿಯಾಂಕ ಗಾಂಧಿ ವಾದ್ರ ಗುರುವಾರ ಘೋಷಣೆ ಮಾಡಿದ್ದಾರೆ. ಕಾಂಗ್ರೆಸ್​ನ ಚುನಾವಣಾ ಪ್ರಣಾಳಿಕೆಯಲ್ಲಿ ಈ ಬಗ್ಗೆ ಅಧಿಕೃತವಾಗಿ ಪ್ರಸ್ತಾಪಿಸಲಾಗುತ್ತದೆ ಎಂದೂ ಟ್ವೀಟ್​ ಮಾಡಿದ್ದಾರೆ.

    ನಿನ್ನೆ ಕೆಲ ವಿದ್ಯಾರ್ಥಿಗಳನ್ನು ಭೇಟಿ ಮಾಡಿ ಚರ್ಚಿಸಿದೆ. ಅವರಿಗೆ ಸ್ಮಾರ್ಟ್​ಫೋನ್​ ಮತ್ತು ವಾಹನ ಸೌಲಭ್ಯದ ಅವಶ್ಯಕತೆ ಇರುವುದು ಗೊತ್ತಾಯಿತು. ಇದು ಅವರ ವಿದ್ಯಾಭ್ಯಾಸದ ಜತೆಗೆ ಸುರಕ್ಷತೆ ದೃಷ್ಟಿಯಿಂದಲೂ ಸಾಕಷ್ಟು ಅನುಕೂಲಕಾರಿ. ಹಾಗಾಗಿ ಅವರಿಗೆ ಸ್ಮಾರ್ಟ್​ಫೋನ್​ ಮತ್ತು ಸ್ಕೂಟರ್​ ಅನ್ನು ಉಚಿತವಾಗಿ ಕೊಡುವ ಬಗ್ಗೆ ಉತ್ತರ ಪ್ರದೇಶ ಕಾಂಗ್ರೆಸ್​ ಘಟಕದ ಪ್ರಸ್ತಾಪಿಸಿದೆ. ಇದಕ್ಕೆ ಘಟಕವು ಒಪ್ಪಿಗೆ ಸೂಚಿಸಿದೆ ಎಂದು ಪ್ರಿಯಾಂಕ ಗಾಂಧಿ ತಿಳಿಸಿದ್ದಾರೆ. ಇನ್ನು ಸ್ಮಾರ್ಟ್​ಫೋನ್​ ಮತ್ತು ಸ್ಕೂಟರ್​ ಕೊಡುವ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಯಾಗುತ್ತಿದ್ದು, ಬಹುತೇಕ ಯುವತಿಯರು ಖುಷಿಯಾಗಿದ್ದಾರೆ.

    ಜಾನುವಾರುಗಳಿಗೆ ಆಸರೆಯಾಗಿದ್ದ ಪೊಲೀಸ್​ ಇನ್​ಸ್ಪೆಕ್ಟರ್ ಮಹಮ್ಮದ್ ರಫೀಕ್ ನಿಧನ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts