ಹೊಸ ಭವಿಷ್ಯ, ಹೊಸ ರಾಜಕೀಯ ಪ್ರಾರಂಭಕ್ಕೆ ನನ್ನೊಂದಿಗೆ ಕೈಜೋಡಿಸಿ: ಪ್ರಿಯಾಂಕ ಗಾಂಧಿ ವಾದ್ರಾ

Latest News

ಜನರು ಇದ್ದಂತೆ ಜನಪ್ರತಿನಿಧಿಗಳೂ ಇರುತ್ತಾರೆ ಎಂದ ವಿಧಾನ ಸಭೆ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ

ಬೆಂಗಳೂರು: ರಾಜಕಾರಣಿಗಳ ಕುರಿತು ಬಹಳಷ್ಟು ಮಾತನಾಡುತ್ತಾರೆ. ಆದರೆ ಜನರು ಹೇಗಿರುತ್ತಾರೋ ಅದೇ ಮಾದರಿಯ ಜನಪ್ರತಿನಿಧಿಗಳು ಆಯ್ಕೆಯಾಗುತ್ತಾರೆ ಎಂಬುದನ್ನು ಮರೆಯಬಾರದೆಂದು ವಿಧಾನ ಸಭೆ ಸ್ಪೀಕರ್...

ದಲಿತ ಸಂಘಟನೆಗಳ ಪ್ರತಿಭಟನೆ

ವಿಜಯವಾಣಿ ಸುದ್ದಿಜಾಲ ಮದ್ದೂರುಡಾ.ಅಂಬೇಡ್ಕರ್ ಮತ್ತು ಸಂವಿಧಾನ ವಿರೋಧಿ ಸುತ್ತೋಲೆ ಹೊರಡಿಸಿದ್ದ ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿಯನ್ನು ವಜಾಗೊಳಿಸಿ, ದೇಶದ್ರೋಹ ಪ್ರಕರಣ ದಾಖಲಿಸಬೇಕು. ಪ್ರಕರಣಕ್ಕೆ...

ಭಾರತದಲ್ಲಿ ಆಶ್ರಯ ಕಲ್ಪಿಸುವಂತೆ ಪ್ರಧಾನಿ ನರೇಂದ್ರ ಮೋದಿಯವರ ಬಳಿ ಮನವಿ ಮಾಡಿದ ಪಾಕಿಸ್ತಾನದ ಪ್ರಭಾವಿ ರಾಜಕಾರಣಿ

ಲಂಡನ್: ದೇಶ ಭ್ರಷ್ಟನಾಗಿ ಬ್ರಿಟನ್​ನಲ್ಲಿ ಆಶ್ರಯ ಪಡೆದಿರುವ ಪಾಕ್​ ರಾಜಕಾರಣಿ ಹಾಗೂ ಮುತ್ತಾಹಿದಾ ಕ್ವಾಮಿ ಮೂವ್​ಮೆಂಟ್​(ಎಂಕ್ಯುಎಂ) ಸಂಸ್ಥಾಪಕ ಅಲ್ತಾಫ್ ಹುಸೇನ್ ಭಾರತದಲ್ಲಿ ಆಶ್ರಯ...

ಅನಧಿಕೃತವಾಗಿ ಮದ್ಯ ಮಾರಾಟ ತಡೆಗಟ್ಟಿ

ವಿಜಯವಾಣಿ ಸುದ್ದಿಜಾಲ ಮಂಡ್ಯಕೆ.ಆರ್.ಪೇಟೆ ವಿಧಾನಸಭಾ ಉಪಚುನಾವಣೆ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿನ ಗಡಿಭಾಗದ ಡಾಬಾ, ಬಾರ್ ಹಾಗೂ ರೆಸ್ಟೋರೆಂಟ್‌ಗಳಲ್ಲಿ ಅನಧಿಕೃತವಾಗಿ ಮದ್ಯ ಮಾರಾಟ ಮಾಡುವುದನ್ನು ತಡೆಗಟ್ಟಲು...

ಪ್ರಮುಖ ಪಕ್ಷಗಳ ಅಭ್ಯರ್ಥಿಗಳಿಂದ ನಾಮಪತ್ರ

ವಿಜಯವಾಣಿ ಸುದ್ದಿಜಾಲ ಕೆ.ಆರ್.ಪೇಟೆಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ಕಡೆಯ ದಿನವಾಗಿದ್ದ ಸೋಮವಾರ ಜೆಡಿಎಸ್, ಕಾಂಗ್ರೆಸ್ ಮತ್ತು ಬಿಜೆಪಿ ಅಭ್ಯರ್ಥಿಗಳು ಸಾವಿರಾರು...

ನವದೆಹಲಿ: ಪಶ್ಚಿಮ ಉತ್ತರಪ್ರದೇಶದ ಕಾಂಗ್ರೆಸ್​ ಉಸ್ತುವಾರಿ ಪ್ರಿಯಾಂಕ ಗಾಂಧಿ ವಾದ್ರಾ, ಪಕ್ಷದ ಬೆಂಬಲಿಗರು ಮತ್ತು ಮತದಾರರಿಗೆ ಸಂದೇಶ ರವಾನಿಸಿದ್ದು, ಎಲ್ಲರೂ ಹೊಸ ರೀತಿಯ ರಾಜಕೀಯವನ್ನು ಪ್ರಾರಂಭಿಸೋಣ. ಇದರಲ್ಲಿ ದುರ್ಬಲನು ಕೂಡ ಪಾಲುದಾರನಾಗಿರುತ್ತಾನೆ ಹೇಳಿದ್ದಾರೆ.

ಎಐಸಿಸಿ ಪ್ರಧಾನ ಕಾರ್ಯದರ್ಶಿಯಾದ ಬಳಿಕ ಇದೇ ಮೊದಲ ಬಾರಿಗೆ ಪ್ರಿಯಾಂಕ ಗಾಂಧಿ ವಾದ್ರಾ ಮತ್ತು ಜ್ಯೋತಿರಾದಿತ್ಯ ಸಿಂಧ್ಯ ಇಂದು ಲಖನೌಗೆ ಭೇಟಿ ನೀಡಲಿದ್ದು, ಇವರಿಗೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಕೂಡ ಸಾಥ್‌ ನೀಡಲಿದ್ದಾರೆ.

“ನಾನಿಂದು ಲಖನೌಗೆ ನಿಮ್ಮನ್ನು ಭೇಟಿಯಾಗಲು ಬರುತ್ತಿದ್ದೇನೆ. ನಾವೆಲ್ಲರೂ ಒಟ್ಟಿಗೆ ಸೇರಿ ಹೊಸ ಮಾದರಿಯ ರಾಜಕೀಯವನ್ನು ಪ್ರಾರಂಭಿಸುವ ಭರವಸೆಯನ್ನು ಹೊಂದಿದ್ದೇನೆ. ಈ ರಾಜಕೀಯದಲ್ಲಿ ಎಲ್ಲರೂ ಪಾಲುದಾರರಾಗಿರುತ್ತಾರೆ. ನನ್ನ ಯುವ ಸ್ನೇಹಿತರು, ನನ್ನ ಸೋದರಿಯರು ಮತ್ತು ದುರ್ಬಲರು ಸೇರಿದಂತೆ ಎಲ್ಲರ ಧ್ವನಿಯೂ ಇಲ್ಲಿ ಕೇಳಿಸುತ್ತದೆ,” ಎಂದು ಕಾಂಗ್ರೆಸ್‌ ಶಕ್ತಿ ಆಪ್‌ ಮೂಲಕ ಆಡಿಯೋ ಮೆಸೇಜ್‌ ಮತ್ತು ಮತದಾರರಿಗೆ ಕರೆ ಮಾಡಿ ತಿಳಿಸಿದ್ದಾರೆ.

“ನನ್ನೊಂದಿಗೆ ಬನ್ನಿ. ಎಲ್ಲರೂ ಹೊಸ ಭವಿಷ್ಯ, ಹೊಸ ರಾಜಕೀಯವನ್ನು ರೂಪಿಸೋಣ. ಧನ್ಯವಾದಗಳು,” ಎಂದು ಸಂದೇಶ ಕಳುಹಿಸಿದ್ದಾರೆ.

“ಇನ್ನು ಜ್ಯೋತಿರಾದಿತ್ಯ ಸಿಂಧ್ಯ ಅವರು ಕೂಡ ಸಂದೇಶ ಕಳುಹಿಸಿದ್ದು, ನಾಳೆ ನಾನು ನಿಮ್ಮೊಂದಿಗೆ ಬರುತ್ತಿದ್ದೇನೆ. ಉತ್ತರ ಪ್ರದೇಶದ ಎಲ್ಲ ಯುವಕಜನಾಂಗಕ್ಕೆ ಭವಿಷ್ಯದ ಕುರಿತು ಉತ್ತಮ ಮಾರ್ಗ ಬೇಕಾಗಿದೆ ಮತ್ತು ರಾಜ್ಯಕ್ಕೆ ಬದಲಾವಣೆಯ ಅಗತ್ಯವಿದೆ. ಬನ್ನಿ ನಮ್ಮೊಂದಿಗೆ ಉತ್ತರ ಪ್ರದೇಶದ ಬದಲಾವಣೆಗೆ ಕೈಜೋಡಿಸಿ,” ಎಂದು ಹೇಳಿದ್ದಾರೆ.

ಮೂವರು ನಾಯಕರು ಏರ್‌ಪೋರ್ಟ್‌ನಿಂದ ಪಕ್ಷದ ಕಚೇರಿವರೆಗೆ ತಲುಪವವರೆಗೂ ನಡೆಸುವ ರೋಡ್‌ ಷೋಗಾಗಿ ಕಾಂಗ್ರೆಸ್‌ ಕಾರ್ಯಕರ್ತರು ಎಲ್ಲ ರೀತಿಯ ಸಿದ್ಧತೆಯನ್ನು ಕೈಗೊಂಡಿದ್ದಾರೆ. ಮುಂಬರುವ ಲೋಕಸಭಾ ಚುನಾವಣೆಗೂ ಮುನ್ನವೇ ಕಾಂಗ್ರೆಸ್‌ ಉತ್ತರ ಪ್ರದೇಶದಲ್ಲಿ ಪ್ರಚಾರಕ್ಕೆ ಶುರುಮಾಡಿದೆ. ನಾಳೆಯಿಂದ ಮೂರು ದಿನಗಳ ಕಾಲ ಪ್ರಧಾನ ಕಾರ್ಯದರ್ಶಿಗಳು ಪಕ್ಷದ ಕಾರ್ಯಕರ್ತರೊಂದಿಗೆ ಮಾತುಕತೆ ನಡೆಸಲಿದ್ದಾರೆ. (ಏಜೆನ್ಸೀಸ್)

- Advertisement -

Stay connected

278,597FansLike
570FollowersFollow
609,000SubscribersSubscribe

ವಿಡಿಯೋ ನ್ಯೂಸ್

VIDEO: ಗೋಕಾಕ್​ ಕ್ಷೇತ್ರದಲ್ಲಿ...

ಗೋಕಾಕ್​: ಡಿಸೆಂಬರ್​ 5ಕ್ಕೆ ಉಪಚುನಾವಣೆ ನಡೆಯಲಿದ್ದು ಮೂರು ಪಕ್ಷಗಳ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸುತ್ತಿದ್ದಾರೆ. ಬಹುತೇಕ ಅನರ್ಹರೆಲ್ಲ ತಮ್ಮ ಕ್ಷೇತ್ರಗಳಲ್ಲಿ ಬಿಜೆಪಿಯಿಂದ ಸ್ಪರ್ಧಿಸುತ್ತಿದ್ದಾರೆ. ಆದರೆ ಇವತ್ತು ಕುತೂಹಲ ಮೂಡಿಸಿದ್ದು ಗೋಕಾಕ್​ ಕ್ಷೇತ್ರ. ಇಲ್ಲಿ ಬಿಜೆಪಿಯಿಂದ ರಮೇಶ್​...

ಕೇಂದ್ರ ಪರಿಸರ ಸಚಿವ...

ಬೆಂಗಳೂರು: ದೆಹಲಿಯಲ್ಲಿ ಮಿತಿಮೀರಿದ ವಾಯುಮಾಲಿನ್ಯ ನಿಯಂತ್ರಣಕ್ಕೆ ನಾನಾ ಕ್ರಮಗಳನ್ನು ಸರ್ಕಾರ ತೆಗೆದುಕೊಂಡಿದೆ. ಆದರೂ, ವೈಯಕ್ತಿಕವಾಗಿ ಏನು ಮಾಡಬಹುದು ಎಂಬುದನ್ನು ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ ಜಾವಡೇಕರ್ ತೋರಿಸಿದ್ದಾರೆ. ಅವರು...

ಜಗತ್ತಿನ ಮೊದಲ ಫೋಲ್ಡೆಬಲ್​...

ಬೀಜಿಂಗ್​: ಕಂಪ್ಯೂಟರ್ ಜಗತ್ತಿನಲ್ಲಿ ನಿತ್ಯವೂ ಹೊಸ ಹೊಸ ಉತ್ಪನ್ನಗಳು ಗ್ರಾಹಕರಿಗೆ ಪರಿಚಯಿಸಲ್ಪಡುತ್ತಲೇ ಇವೆ. ವರ್ಷದ ಹಿಂದೆ ಖರೀದಿಸಿದ ಉತ್ಪನ್ನ ಇಂದಿಗೆ ಔಟ್​ಡೇಟೆಡ್​ ಎನ್ನುವ ಮಟ್ಟಿಗೆ ಇದೆ ಈ ಬದಲಾವಣೆಯ ವೇಗ....

VIDEO| ಲೋಕಸಭಾಧ್ಯಕ್ಷ ಓಂ...

ಜೈಪುರ: ಬಾಲಿವುಡ್​ ನಟಿ ರಾಣಿ ಮುಖರ್ಜಿ ಅವರ ಮುಂದಿನ ಚಿತ್ರ ಮರ್ದಾನಿ-2ಗೆ ಬಿಡುಗಡೆ ಮುನ್ನವೇ ವಿರೋಧದ ಕೂಗು ಕೇಳಿಬಂದಿದೆ. ಚಿತ್ರದ ವಿರುದ್ಧ ರಾಜಸ್ಥಾನದ ಕೋಟಾ ನಗರದ ನಿವಾಸಿಗಳು ಲೋಕಸಭಾ ಸ್ಪೀಕರ್​...

VIDEO| ಭಾರಿ ಭದ್ರತೆಯೊಂದಿಗೆ...

ಶಬರಿಮಲೆ: ವಿವಾದದ ನಡುವೆಯೇ ಭಾರಿ ಭದ್ರತೆಯೊಂದಿಗೆ ಅಯ್ಯಪ್ಪ ದೇವಸ್ಥಾನದ ಮುಖ್ಯ ದ್ವಾರವನ್ನು ಶನಿವಾರ ಸಂಜೆ ತೆರೆಯಲಾಯಿತು. ಸುದೀರ್ಘ ಎರಡು ತಿಂಗಳ ಮಂಡಲ-ಮಕರವಿಳಕ್ಕು ಪೂಜೆಗಾಗಿ ದೇವಸ್ಥಾನ ಬಾಗಿಲನ್ನು ಇಂದು ತೆರೆಯಲಾಗಿದೆ. ದೇವಸ್ಥಾನದ ಪ್ರಧಾನ...

VIDEO| ಹಿರಿಯ ಗಾಯಕಿ...

ಬೆಂಗಳೂರು: ಹಿರಿಯ ಗಾಯಕಿ ಲತಾ ಮಂಗೇಶ್ಕರ್ (90) ಅನಾರೋಗ್ಯದಿಂದ ಬಳಲುತ್ತಿದ್ದು ಕಳೆದ ಆರು ದಿನಗಳಿಂದ ಮುಂಬೈನಲ್ಲಿರುವ ಬ್ರೀಚ್​ ಕ್ಯಾಂಡಿ ಆಸ್ಪತ್ರೆಯ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರ ನಡುವೆ ಕಳೆದೆರಡು ದಿನಗಳಿಂದ...

VIDEO: ನೆಟ್ಟಿಗರ ಪ್ರೀತಿಯನ್ನು...

ನವದೆಹಲಿ: ಈ ನಾಲ್ಕು ತಿಂಗಳ ಪುಟಾಣಿ ಕಪ್ಪುಬೆಕ್ಕಿಗೆ ಎರಡು ಮುಖ ! ಅದರ ವಿಲಕ್ಷಣ ರೂಪಕ್ಕೆ ನೆಟ್ಟಿಗರು ಮನಸೋತಿದ್ದಾರೆ. ಎರಡು ಮುಖದ ಬೆಕ್ಕಿನ ಮರಿ ತುಂಬ ಆರೋಗ್ಯಕರವಾಗಿ ಬೆಳೆಯುತ್ತಿದ್ದು ಅದನ್ನು...

VIDEO: ಸುಮ್ಮಸುಮ್ಮನೆ ಟ್ರಾನ್ಸ್​ಫರ್​...

ನವದೆಹಲಿ: ಸರ್ಕಾರಿ ಕೆಲಸದಲ್ಲಿ ಇರುವವರಿಗೆ ವರ್ಗಾವಣೆ ಸಾಮಾನ್ಯ. ಆದರೆ ಕೆಲವು ಸಲ ಮೇಲಧಿಕಾರಿಗಳ ಸರ್ವಾಧಿಕಾರಿ ಧೋರಣೆಯಿಂದ ಅಧೀನ ಅಧಿಕಾರಿಗಳು ಸುಮ್ಮನೆ ವರ್ಗಾವಣೆಯಾಗುತ್ತಾರೆ. ಸಣ್ಣ ತಪ್ಪಿಗೂ ಬೇರೆ ಕಡೆ ವರ್ಗಗೊಳ್ಳಬೇಕಾದ ಪರಿಸ್ಥಿತಿ ಬರುತ್ತದೆ. ಹಾಗೆ ವರ್ಗಾವಣೆಗೊಂಡ...

VIDEO: ಪುನೀತ್ ರಾಜ್​ಕುಮಾರ್​​...

ಬೆಂಗಳೂರು: ಪುನೀತ್​ ರಾಜ್​ಕುಮಾರ್ ಅವರ ಪಿಆರ್​ಕೆ ಸಂಸ್ಥೆಯಲ್ಲಿ ನಿರ್ಮಾಣವಾಗಿರುವ ಮಾಯಾ ಬಜಾರ್​-2016 ಸಿನಿಮಾದ ಟೀಸರ್​ ನಿನ್ನೆ (ನ.15)ರಂದು ಸಂಜೆ 7.30ಕ್ಕೆ ಬಿಡುಗಡೆಯಾಗಿದೆ. 56 ಸೆಕೆಂಡ್​​ಗಳ ಟೀಸರ್​ ಬಿಡುಗಡೆಯಾಗಿದೆ. ನವೆಂಬರ್​ 8, 2016ರಂದು 500 ರೂ.ಹಾಗೂ...

VIDEO| ಆಯುಷ್ಮಾನ್​ ಭವ...

ಬೆಂಗಳೂರು: ಹ್ಯಾಟ್ರಿಕ್​ ಹಿರೋ ಶಿವರಾಜ್​ಕುಮಾರ್​ ಹಾಗೂ ಡಿಂಪಲ್​ ಕ್ವೀನ್​ ರಚಿತಾ ರಾಮ್ ನಟನೆಯ "ಆಯುಷ್ಮಾನ್​ ಭವ" ಚಿತ್ರ ಇಂದು ತೆರೆಕಂಡಿದೆ. ವಿಶೇಷವೆಂದರೆ ಈ ಚಿತ್ರದ ಮೂಲಕ ಸಂಗೀತ ನಿರ್ದೇಶಕ ಗುರುಕಿರಣ್​...