ವೈದ್ಯೆ ಹತ್ಯೆ ಪ್ರಕರಣ: ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ಪ್ರಿಯಾಂಕಾ ಗಾಂಧಿ ಮನವಿ

Priyanka Gandhi Vadra (1)
Published on: 

ನವದೆಹಲಿ: ಕೋಲ್ಕತ್ತಾದ ಆರ್ ಜಿ ಕಾರ್ ಮೆಡಿಕಲ್ ಕಾಲೇಜ್ ಆಸ್ಪತ್ರೆಯಲ್ಲಿ ಸ್ನಾತಕೋತ್ತರ ಟ್ರೈನಿ ವೈದ್ಯೆ ಹತ್ಯೆ ರಾಷ್ಟ್ರವ್ಯಾಪಿ ಸಂಚಲನ ಮೂಡಿಸಿದೆ. ಈ ಕುರಿತು ಸೋಮವಾರ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯಿಸಿದ್ದಾರೆ. ಈ ಪ್ರಕರಣದ ತನಿಖೆಯನ್ನು ತ್ವರಿತಗೊಳಿಸಿ ಆರೋಪಿಗಳಿಗೆ ಕಠಿಣ ಶಿಕ್ಷೆ ನೀಡಬೇಕು ಎಂದು ಮಮತಾ ಸರ್ಕಾರಕ್ಕೆ ಮನವಿ ಮಾಡಿದರು.

ಮೃತರ ಕುಟುಂಬಕ್ಕೆ ಹಾಗೂ ವೈದ್ಯಕೀಯ ಸಿಬ್ಬಂದಿಗೆ ನ್ಯಾಯ ಸಿಗಲಿ ಎಂದು ಆಶಿಸಿದರು. ಕೆಲಸದ ಸ್ಥಳದಲ್ಲಿ ಮಹಿಳೆಯರ ಸುರಕ್ಷತೆಯೇ ಪ್ರಮುಖ ಸಮಸ್ಯೆಯಾಗಿ ಪರಿಣಮಿಸಿದೆ. ಇದಕ್ಕಾಗಿ ಗಂಭೀರ ಪ್ರಯತ್ನಗಳ ಅಗತ್ಯವಿದೆ ಎಂದು ಪ್ರಿಯಾಂಕಾ ಗಾಂಧಿ ಈ ಸಂದರ್ಭದಲ್ಲಿ ಸ್ಪಷ್ಟಪಡಿಸಿದರು.

ಸರ್ಕಾರಿ ಆಸ್ಪತ್ರೆಯಲ್ಲಿ ಈ ರೀತಿಯ ಘಟನೆ ನಡೆದಿರುವುದು ವ್ಯಾಪಕ ಟೀಕೆಗೆ ಗುರಿಯಾಗಿದೆ. ಆ ನಿಟ್ಟಿನಲ್ಲಿ ದೇಶಾದ್ಯಂತ ವೈದ್ಯಕೀಯ ಸಿಬ್ಬಂದಿ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಕರೆ ನೀಡುವುದು ಅನಿವಾರ್ಯವಾಗಿದೆ. ಈ ಸಂಚಲನ ಮೂಡಿಸಿರುವ ಘಟನೆಯ ಕುರಿತು ಸಿಬಿಐ ತನಿಖೆಗೆ ಬಿಜೆಪಿ ಈಗಾಗಲೇ ಒತ್ತಾಯಿಸಿದೆ.