ಪ್ರಿಯಾಂಕ್ ಖರ್ಗೆ ಸ್ವಯಂ ಕ್ವಾರಂಟೈನ್

priyank kharge (1)
Published on

ಬೆಂಗಳೂರು: ನೆರೆಮನೆಯ ನಿವಾಸಿಗೆ ಕರೊನಾ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮಾಜಿ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನ ನಿವಾಸದಲ್ಲಿ ಸ್ವಯಂ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.

ಬೆಂಗಳೂರಿನ ನನ್ನ ನಿವಾಸದ ಪಕ್ಕದ ಮನೆಯವರಿಗೆ ಕೊರೋನಾ ಸೋಂಕು ದೃಢಪಟ್ಟಿರುವುದ ರಿಂದ ನಾನು ಕೂಡ ಪ್ರತ್ಯೇಕ ವಾಸಕ್ಕೆ ಒಳಪಡುವ ಅನಿವಾರ್ಯತೆ ಎದುರಾಗಿದೆ. ಈ ಸಮಯದಲ್ಲಿ ನಾನು ಯಾರನ್ನೂ ಖುದ್ದಾಗಿ ಭೇಟಿ ಮಾಡಲು ಸಾಧ್ಯವಾಗುವುದಿಲ್ಲ. ಆದ್ದರಿಂದ, ತಮ್ಮ ಸುರಕ್ಷತೆಯ ದೃಷ್ಟಿಯಿಂದ ನನ್ನನ್ನು ನಿವಾಸದ ಬಳಿ ಭೇಟಿ ಮಾಡಲು ಬರಬೇಡಿ ಎಂದು ಅವರು ಕೇಳಿಕೊಂಡಿದ್ದಾರೆ.

ಯಾವುದೇ ಸಮಸ್ಯೆ ಅಥವಾ ಸಲಹೆಗಳಿದ್ದರೆ, ನನ್ನನ್ನು ಭೇಟಿ ಮಾಡುವ ಬದಲು ನೇರವಾಗಿ ನನಗೆ ಕರೆ ಮಾಡಿ ರ್ಚಚಿಸಬೇಕು ಎಂದು ಫೇಸ್​ಬುಕ್ ಖಾತೆಯಲ್ಲಿ ಅವರು ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net