

ಗಂಗೊಳ್ಳಿ: ಕುಂದಾಪುರದ ಭಂಡಾರ್ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜಿನಲ್ಲಿ ಬಹುಮಾನ ವಿತರಣಾ ಸಮಾರಂಭ ಮಂಗಳವಾರ ನಡೆಯಿತು.
ವಿಶ್ವಸ್ಥ ಮಂಡಳಿ ಹಿರಿಯ ಸದಸ್ಯ ಕೆ.ಶಾಂತಾರಾಮ್ ಪ್ರಭು ಅಧ್ಯಕ್ಷತೆ ವಹಿಸಿದ್ದರು. ಡಾ.ರೇಖಾ ವಿ.ಬನ್ನಾಡಿ ಅಭಿನಂದನಾ ಭಾಷಣ ಮಾಡಿದರು. ರಾಜೇಂದ್ರ ತೋಳಾರ್ ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ ದತ್ತಿನಿಧಿ ಬಹುಮಾನ ವಿತರಿಸಿದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿ ಪ್ರೊ.ಸತ್ಯನಾರಾಯಣ ಹತ್ವಾರ್, ಐಕ್ಯುಎಸಿ ಸಂಯೋಜಕ ಡಾ.ವಿಜಯ್ ಕುಮಾರ್ ಕೆ.ಎಂ. ಉಪಸ್ಥಿತರಿದ್ದರು.
2022-23ನೇ ಸಾಲಿನ ಮಂಗಳೂರು ವಿಶ್ವವಿದ್ಯಾಲಯ ಮಟ್ಟದ ಪದವಿ ಪರೀಕ್ಷೆಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿಶ್ವವಿದ್ಯಾಲಯ ಮಟ್ಟದಲ್ಲಿ ನಡೆದ ಕ್ರೀಡೆ, ಕರಾಟೆ ಇನ್ನಿತರ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಮತ್ತು ಅಂತರ್ ಕಾಲೇಜು ಮಟ್ಟದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು.
ಭಂಡಾರ್ಕಾರ್ಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ.ಶುಭಕರಾಚಾರಿ ಪ್ರಾಸ್ತಾವಿಕ ಮಾತನಾಡಿದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಜಿ.ಎಂ.ಗೊಂಡ ವಂದಿಸಿದರು. ವಿದ್ಯಾರ್ಥಿನಿ ಮಿಥುನಾ ಪ್ರಭು ಕಾರ್ಯಕ್ರಮ ನಿರೂಪಿಸಿದರು.