ಕುಂದಾಪುರ: ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ವಾರ್ಷಿಕ ಬಹುಮಾನ ವಿತರಣಾ ಸಮಾರಂಭ ಶಾಲೆ ವಠಾರದಲ್ಲಿ ಬುಧವಾರ ನಡೆಯಿತು.
ಸಂಸ್ಥೆ ಕಾರ್ಯದರ್ಶಿ ಕೆ.ರಾಧಾಕೃಷ್ಣ ಶೆಣೈ ಅಧ್ಯಕ್ಷತೆ ವಹಿಸಿದ್ದರು. ವಕೀಲ ಶಿರಿಯಾರ ಗೋಪಾಲಕೃಷ್ಣ ಶೆಟ್ಟಿ, ಕುಂದಾಪುರ ಮಂಜುನಾಥ ಆಸ್ಪತ್ರೆಯ ನೇತ್ರ ತಜ್ಞ ಡಾ.ಅನ್ವಿತಾ ಶೆಟ್ಟಿ ಶುಭಾಶಂಸನೆಗೈದರು. ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಸಂದೀಪ್ ಗಾಣಿಗ, ಪ್ರಾಥಮಿಕ ವಿಭಾಗ ಮುಖ್ಯಸ್ಥೆ ರೇಷ್ಮಾ ಡಿಸೋಜ, ಪೂರ್ವ ಪ್ರಾಥಮಿಕ ವಿಭಾಗ ಮುಖ್ಯಸ್ಥೆ ಪ್ರಮೀಳಾ ಡಿಸೋಜ ಹಾಗೂ ಸಂಸ್ಥೆ ಖಜಾಂಚಿ ಕೆ.ಲಕ್ಷ್ಮೀನಾರಾಯಣ ಶೆಣೈ ಉಪಸ್ಥಿತರಿದ್ದರು. ಪ್ರೌಢಶಾಲಾ ಮುಖ್ಯ ಶಿಕ್ಷಕ ಕೃಷ್ಣ ಅಡಿಗ ಸ್ವಾಗತಿಸಿದರು. ಮಹಮದ್ ಸುವೇದ್ ಹಾಗೂ ಅಮೂಲ್ಯ ಶೇಟ್ ಅತಿಥಿಗಳನ್ನು ಪರಿಚಯಿಸಿದರು. ಮಂಜುಶ್ರೀ ಕಾರ್ಯಕ್ರಮ ನಿರ್ವಹಿಸಿದರು. ರಕ್ಷಿತ್ ಶೆಟ್ಟಿ ವಂದಿಸಿದರು.