ಜೀವನ ಪಾಠದಿಂದ ಬದಲಾವಣೆ ಸಾಧ್ಯ : ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ : ಶಾಸಕಿ ಭಾಗೀರಥಿ ಮುರುಳ್ಯ ಮಾಹಿತಿ

bahumana
ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆಯನ್ನು ಶಾಸಕಿ ಭಾಗೀರಥಿ ಮುರುಳ್ಯ ಉದ್ಘಾಟಿಸಿದರು. ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು, ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಮುಂತಾದವರಿದ್ದರು.
Published on

ಕಡಬ: ಎಳೆಯ ಮನಸ್ಸುಗಳಲ್ಲಿ ದುಶ್ಚಟಮುಕ್ತ ಸಮಾಜ ನಿರ್ಮಾಣದ ಜಾಗೃತಿ ಮೂಡಿಸಿದಾಗ ಸಕಾರತ್ಮಕ ಪರಿಣಾಮವಾಗುತ್ತದೆ. ಈ ನಿಟ್ಟಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಜನಜಾಗೃತಿ ವೇದಿಕೆ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಅರ್ಥಪೂರ್ಣವಾಗಿದೆ . ವಿದ್ಯಾರ್ಥಿ ಜೀವನದಲ್ಲಿ ಜೀವನ ಪಾಠದ ಶಿಕ್ಷಣ ದೊರೆತಾಗ ಬದಲಾವಣೆ ಸಾಧ್ಯ ಎಂದು ಶಾಸಕಿ ಭಾಗೀರಥಿ ಮುರುಳ್ಯ ಹೇಳಿದರು.

ಶ್ರೀ ರಾಮಕುಂಜೇಶ್ವರ ಪಪೂ ಕಾಲೇಜು ಸಭಾಂಗಣದಲ್ಲಿ ಮಂಗಳವಾರ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಕಡಬ, ಕಡಬ ತಾಲೂಕು ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಟ್ರಸ್ಟ್ ಆಶ್ರಯದಲ್ಲಿ ವಿದ್ಯಾರ್ಥಿ-ವಿದ್ಯಾರ್ಥಿಯನಿರಿಗಾಗಿ ತಾಲೂಕು ಮಟ್ಟದ ಸ್ವಾಸ್ಥ್ಯ ಸಂಕಲ್ಪ ಮಾಸಾಚರಣೆ, ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಕಡಬ ತಾಲೂಕು ಅಧ್ಯಕ್ಷ ಮಹೇಶ್ ಕೆ.ಸವಣೂರು ಅಧ್ಯಕ್ಷತೆ ವಹಿಸಿದ್ದರು. ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಪದ್ಮನಾಭ ಶೆಟ್ಟಿ ಮಾತನಾಡಿದರು. ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ನೆಲ್ಯಾಡಿ ವಲಯ ಅಧ್ಯಕ್ಷ ಜಯಾನಂದ ಬಂಟ್ರಿಯಾಲ್, ಗೋಳಿತ್ತೊಟ್ಟು ವಲಯ ಅಧ್ಯಕ್ಷ ನೋಣಯ್ಯ ಪೂಜಾರಿ ಅಂಬರ್ಜೆ, ಆಲಂಕಾರು ವಲಯ ಅಧ್ಯಕ್ಷ ಇಂದುಶೇಖರ ಶೆಟ್ಟಿ, ಸದಸ್ಯ ಲಕ್ಷ್ಮೀನಾರಾಯಣ ರಾವ್ ಆತೂರು, ರಾಮಕುಂಜ ಗ್ರಾಪಂ ಅಧ್ಯಕ್ಷೆ ಸುಚೇತಾ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಗೋಳಿತ್ತೊಟ್ಟು ವಲಯ ಅಧ್ಯಕ್ಷ ಬಾಲಕೃಷ್ಣ ಅಲೆಕ್ಕಿ, ರಾಮಕುಂಜೇಶ್ವರ ಪ್ರೌಢಶಾಲೆ ಮುಖ್ಯಗುರು ಸತೀಶ್ ಭಟ್ ಉಪಸ್ಥಿತರಿದ್ದರು.

ಪ್ರಾಂಶುಪಾಲ ಚಂದ್ರಶೇಖರ ಕೆ ವಂದಿಸಿದರು. ಕಡಬ ತಾಲೂಕು ಯೋಜನಾಧಿಕಾರಿ ಮೇದಪ್ಪ ಗೌಡ ನಾವೂರು ಸ್ವಾಗತಿಸಿದರು. ಕಡಬ ತಾಲೂಕು ಯುವಜನ ಒಕ್ಕೂಟ ಅಧ್ಯಕ್ಷ ಶಿವಪ್ರಸಾದ್ ಮೈಲೇರಿ ನಿರೂಪಿಸಿದರು.

ಬಹುಮಾನ ವಿತರಣೆ

ಧೂಮಪಾನ-ಮದ್ಯಪಾನ ಮಾದಕ ವ್ಯಸನಮುಕ್ತ ಸಮಾಜ ಎಂಬ ವಿಷಯದ ಮೇಲೆ ನಡೆದ ರಾಜ್ಯಮಟ್ಟದ ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ನಿಲಿಷ್ಕಾ ಕೆ., ನೆಹರೂನಗರ ಪ್ರಥಮ, ಸಾತ್ವಿಕ್ ವಿ.ಜೆ. ಬಂದರಿಮಜಲು ಕಳೆಂಜ ಬೆಳ್ತಂಗಡಿ ದ್ವಿತೀಯ, ಸೃಜನ್ ಆಚಾರ್ಯ ಕೊಳೆಗುಡ್ಡೆ ಹೆಬ್ರಿ ಕಾರ್ಕಳ ತೃತೀಯ ಬಹುಮಾನ ಪಡೆದುಕೊಂಡರು. ರಾಮಕುಂಜ ವಿದ್ಯಾಸಂಸ್ಥೆಯಿಂದ ಸ್ಪರ್ಧೆಯಲ್ಲಿ ಭಾಗವಹಿಸಿದ ಕಾಲೇಜು ವಿಭಾಗದ ಪುನೀತ್ ವಿ.ಎಸ್. ವಳಕಡಮ, ಚರಣ್ ಮುಗುಳಿ ಹಿರೇಬಂಡಾಡಿ, ದಿಶ್ವಾಂತ್ ನಾಗನಕೋಡಿ ಹಿರೇಬಂಡಾಡಿ, ಪ್ರೌಢ ಶಾಲಾ ವಿಭಾಗದ ವಂಶಿ ಪಿ.ಏಣಿತ್ತಡ್ಕ ಅವರಿಗೆ ಅಭಿನಂದನಾ ಪತ್ರ ನೀಡಲಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net