ಕಾರ್ಕಳ: ಮಂಗಳೂರು ಸಹ್ಯಾದ್ರಿ ತಾಂತ್ರಿಕ ಕಾಲೇಜುನಲ್ಲಿ ನಡೆದ ದೇವ್‌ಹೋಸ್ಟ್ ತಾಂತ್ರಿಕ ಸ್ಪರ್ಧೆಯಲ್ಲಿ ಬಂಟಕಲ್ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯ ವಿದ್ಯಾರ್ಥಿಗಳು ಬಹುಮಾನ ಪಡೆದರು.
ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಡಾಟಾ ಸೈನ್ಸ್ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ಕಿರಣ್ ಭಟ್, ಸೂರಜ್ ಭಾಗವತ್, ಸಾತ್ವಿಕ್ ಎಸ್.ಭಟ್, ಪ್ರದ್ಯುನ್ಮಾ ಮತ್ತು ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲರ್ನಿಂಗ್ ವಿಭಾಗದ ಅಂಜಲಿ ಅವರು ರೋಬೋಟ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿದ್ದಾರೆ.
ಗಣಕಯಂತ್ರ ವಿಭಾಗದ ಪವನ್ ಗೊಂಡ್, ರಂಜನ್ ಪೂಜಾರಿ, ವಿಜೇತ್ ಮತ್ತು ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಹರ್ಷ ಗುಣಗಾ ತೃತೀಯ ಸ್ಥಾನ ಗಳಿಸಿದ್ದಾರೆ. ಗಣಕಯಂತ್ರ ವಿಭಾಗದ ದ್ವಿತೀಯ ವರ್ಷದ ವಿದ್ಯಾರ್ಥಿಗಳಾದ ತೇಜಸ್ ನಾಯಕ್, ಸ್ವಸ್ತಿಕ್ ಯಶ್ ಆರ್ಟಿಫಿಶಿಯಲ್ ಇಂಟೆಲಿಜೆನ್ಸ್ ಆ್ಯಂಡ್ ಮಷಿನ್ ಲರ್ನಿಂಗ್ ವಿಭಾಗದ ಪೂರ್ಣಾನಂದ ಹ್ಯಾಕ್ ನೈಟ್ 2024 (24 ಗಂಟೆಗಳ ಹ್ಯಾಕೊಥಾನ್) ಎಂಬ ಸ್ಪರ್ಧೆಯಲ್ಲಿ ದ್ವೀತಿಯ ಬಹುಮಾನ ಗಳಿಸಿದ್ದಾರೆ. ವಿದ್ಯಾರ್ಥಿಗಳ ಈ ಸಾಧನೆಗೆ ಸಂಸ್ಥೆಯ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಶಿಕ್ಷಕ ಹಾಗೂ ಶಿಕ್ಷಕೇತರ ಸಿಬ್ಬಂದಿ ವರ್ಗದವರು ಶುಭ ಹಾರೈಸಿದ್ದಾರೆ.