More

    ದಲಿತಪರ ಸಂಘಟನೆಗಳ ಪ್ರತಿಭಟನೆ

    ಮದ್ದೂರು: ಸಂವಿಧಾನ ಜಾಗೃತಿ ಜಾಥಾದಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸಿಲ್ಲ ಎಂದು ಆರೋಪಿಸಿ ದಲಿತಪರ ಸಂಘಟನೆಗಳು ಮದ್ದೂರಿನಲ್ಲಿ ಪ್ರತಿಭಟನೆ ನಡೆಸಿದವು.

    ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಸಂವಿಧಾನ ಜಾಗೃತಿ ಜಾಥಾ ಪಟ್ಟಣದಲ್ಲಿ ಸಂಚರಿಸುತ್ತಿದ್ದು, ತಾಲೂಕು ಮಟ್ಟದ ಅಧಿಕಾರಿಗಳು ಭಾಗವಹಿಸದೆ ಸಂವಿಧಾನ ರಥಕ್ಕೆ ಅವಮಾನ ಮಾಡಿದ್ದಾರೆ. ಸಂವಿಧಾನ ರಥವನ್ನು ಗೌರವದಿಂದ ಸ್ವಾಗತಿಸಿ ಮೆರವಣಿಗೆ ಮಾಡಿ ಜನಸಾಮಾನ್ಯರಲ್ಲಿ ಅರಿವು ಮೂಡಿಸುವಂತೆ ಸರ್ಕಾರ ಹಲವು ಸುತ್ತೋಲೆ ಮತ್ತು ಆದೇಶ ಹೊರಡಿಸಿದೆ. ಆದರೆ ಅಧಿಕಾರಿಗಳು ಇದ್ಯಾವುದನ್ನೂ ಲೆಕ್ಕಿಸದೆ ಸಂವಿಧಾನ ರಥಕ್ಕೆ ಅವಮಾನ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಕೆ.ಎಸ್.ಸೋಮಶೇಖರ್, ತಾಲೂಕು ಪಂಚಾಯಿತಿ ಇಒ ವರ್ಗಾವಣೆಯಾಗಿದ್ದಾರೆ. ಮಂಡ್ಯದಲ್ಲಿ ಸಂಸದರ ದಿಶಾ ಸಭೆ ನಡೆಯುತ್ತಿರುವುದರಿಂದ ಮಾಹಿತಿ ನೀಡಲು ಅಧಿಕಾರಿಗಳು ಸಭೆಗೆ ಹೋಗಿದ್ದಾರೆ. ಸಕಾರಣವಿಲ್ಲದೆ ಜಾಥಾಕ್ಕೆ ಗೈರಾಗಿರುವ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಯಲಾಯಿತು. ನಿವೃತ್ತ ಪೊಲೀಸ್ ಅಧಿಕಾರಿ ಮಹದೇವಯ್ಯ, ಡಿಎಸ್‌ಎಸ್ ಮುಖಂಡರಾದ ಮದ್ದೂರು ಶಿವು, ತರಿಕೆರೆ ಕಾಲನಿ ರಮಾನಂದ, ಅಗರಲಿಂಗನದೊಡ್ಡಿ ಶಂಕರ್, ಸೋಮನಹಳ್ಳಿ ಅಂಬರೀಶ್, ಭಾನುಪ್ರಕಾಶ್, ಮರಂಕಯ್ಯ, ಕುಮಾರ್, ವಿಜಯ್ ಕುಮಾರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts