More

    ಪಾಕಿಸ್ತಾನಪರ ಘೋಷಣೆ ಖಂಡಿಸಿ ಪ್ರತಿಭಟನೆ

    ಕೋಲಾರ: ವಿಧಾನಸೌಧದಲ್ಲಿ ನಾಸೀರ್ ಹುಸೇನ್ ಬೆಂಬಲಿಗರು ಪಾಕಿಸ್ತಾನ ಪರ ಜಿಂದಾಬಾಂದ್ ಘೋಷಣೆ ಹಾಕಿರುವುದನ್ನು ಖಂಡಿಸಿ, ಬಿಜೆಪಿ ಕಾರ್ಯಕರ್ತರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

    ನಗರದ ಬಸ್ ನಿಲ್ದಾಣದ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು ರಾಜ್ಯಸಭಾ ಸದಸ್ಯ ನಾಸೀರ್ ಹುಸೇನ್ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು. ಪ್ರತಿಭಟನೆ ನಡೆಸುತ್ತಿದ್ದ ಬಿಜೆಪಿ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿ, ಬಿಡುಗಡೆಗೊಳಿಸಿದರು.
    ಬಿಜೆಪಿ ರಾಜ್ಯ ಕಾರ್ಯಕಾರಿ ಸಮಿತಿ ಸದಸ್ಯೆ ಅರಭಿಕೊತ್ತನೂರು ಮಮತಾ ಗೌಡ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ಶಾಂತಿ ಕದಡುವ ಪ್ರಯತ್ನಗಳು ಸಾಕಷ್ಟು ನಡೆಯುತ್ತಿವೆ. ಆದರೂ ಸಹ ಸರ್ಕಾರವು ತಪ್ಪಿತಸ್ತರ ವಿರುದ್ಧ ಕ್ರಮಕೈಗೊಳ್ಳದೆ ರಕ್ಷಣೆ ಮಾಡಲು ಮುಂದಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
    ವಿಧಾನಸೌಧದಲ್ಲಿ ಮಂಗಳವಾರ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗುತ್ತಿದ್ದಂತೆ ನಾಸೀರ್ ಹುಸೇನ್ ಬೆಂಬಲಿಗರು ವಿಜಯೋತ್ಸವ ಆಚರಣೆ ಮಾಡಿದರು. ಆ ಸಂದರ್ಭದಲ್ಲಿ ವಿಧಾನಸೌಧದಲ್ಲೆ ಪಾಕಿಸ್ತಾನ ಪರ ಕೆಲ ಬೆಂಬಲಿಗರು ಜಿಂದಾಬಾದ್ ಘೋಷಣೆ ಹಾಕಿದ್ದಾರೆ. ಯಾರು ಘೋಷಣೆ ಕೂಗಿದರು ಎಂಬುದು ಪೊಲೀಸರಿಗೆ ಮಾಹಿತಿಯಿದ್ದರೂ ಸಹ ಒತ್ತಡಗಳಿಗೆ ಮಣಿದು ಮೌನಕ್ಕೆ ಶರಣರಾಗಿದ್ದಾರೆ ಎಂದು ದೂರಿದರು.
    ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಅರಾಜಕಥೆ ಸೃಷಿಸಿದೆ. ಕಾನೂನು ಸುವ್ಯವ್ಯಸ್ಥೆ ಹದಗೆಟ್ಟಿದೆ, ಚುನಾವಣೆ ಅಂದಮೇಲೆ ಸೋಲು-ಗೆಲುವು ಇದ್ದದ್ದೆ. ಆದರೆ ದೇಶದ್ರೋಹದ ಕೂಗು ಸಹಿಸಲ್ಲ, ಇಂತಹ ಸರ್ಕಾರವನ್ನು ಅಧಿಕಾರದಿಂದ ವಜಾಗೊಳಿಸಬೇಕು ಎಂದು ಒತ್ತಾಯಿಸಿದರು.
    ಗ್ರಾಮಾಂತರ ಘಟಕದ ಅಧ್ಯಕ್ಷ ಸಿ.ಡಿ.ರಾಮಚಂದ್ರ ಮಾತನಾಡಿ, ನಾಸೀರ್ ಹುಸೇನ್ ರಾಜ್ಯ ಸಭಾ ಚುನಾವಣೆಯಲ್ಲಿ ಗೆದ್ದು ಹೊರಗೆ ಬರುವಾಗ ಜಿಂದಾಬಾದ್ ನಾಸೀರ್ ಹುಸೇನ್ ಜಿಂದಾಬಾದ್, ಜಿಂದಾಬಾದ್, ಜಿಂದಾಬಾದ್. ಪಾಕಿಸ್ತಾನ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು, ನಾಸೀರ್ ಹುಸೇನ್ ನಿರಾಕರಿಸಿ, ಪ್ರಶ್ನೆ ಮಾಡಿದ ಮಾಧ್ಯಮ ಸಿಬ್ಬಂದಿ ಮೇಲೆಯೇ ದರ್ಪ ತೋರಿದ್ದಾರೆ. ಅವರಿಗೆ ರಾಜ್ಯ, ದೇಶದ ಪರ ಕಾಳಜಿ ಇದೆಯೇ ಎಂದು ಪ್ರಶ್ನಿಸಿದರು.
    ನಾಸಿರ್ ಹುಸೇನ್ ಕೂಡಲೇ ರಾಜ್ಯಸಭಾ ಸದಸ್ಯತ್ವಕ್ಕೆ ರಾಜಿನಾಮೆ ನೀಡಬೇಕು. ದೇಶ ದ್ರೋಹಿ ಘೊಷಣೆ ಕೂಗಿರುವ ಕಾಂಗ್ರೆಸ್ ಕಾರ್ಯಕರ್ತರನ್ನು ಗಡಿಪಾರು ಮಾಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಉಗ್ರ ಹೋರಾಟ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು.
    ಕಾಂಗ್ರೆಸ್‌ನಿಂದ ತಪ್ಪಿತಸ್ಥರ ರಕ್ಷಣೆ
    ಕೇಂದ್ರದಲ್ಲಿ ಎರಡು ಬಾರಿ ಅಧಿಕಾರ ಕಳೆದುಕೊಂಡರು ಕಾಂಗ್ರೆಸ್ ಇನ್ನೂ ಬುದ್ಧಿ ಬಂದಿಲ್ಲ. ರಾಜ್ಯ ಸರ್ಕಾರವು ಒಂದಲ್ಲ ಒಂದು ರೀತಿಯ ವಿವಾದಗಳನ್ನು ಮೈ ಮೇಲೆ ಎಳೆದುಕೊಳ್ಳುತ್ತಿದೆ. ಶಾಂತಿ ಕಾಪಾಡಬೇಕಾದವರು ಶಕ್ತಿ ಸೌಧದಲ್ಲಿ ಈ ರೀತಿ ಘೋಷಣೆ ಕೂಗಿರುವುದು ನೋಡಿದರೆ ಸಮಾಜ ತಲೆ ತಗ್ಗಿಸುವಂತಾಗಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳುವುದು ಬಿಟ್ಟು ಸರ್ಕಾರ ರಕ್ಷಣೆಗೆ ನಿಂತಿದೆ. ತಪ್ಪಿತಸ್ಥರ ವಿರುದ್ಧ ಕ್ರಮಕೈಗೊಳ್ಳಬೇಕು ಎಂದು ಬಿಜೆಪಿ ಲೋಕಸಭಾ ಕ್ಷೇತ್ರದ ಸಂಚಾಲಕ ಮಾಗೇರಿ ನಾರಾಯಣಸ್ವಾಮಿ ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಬಿಜೆಪಿ ಪ್ರಧಾನ ಕಾರ್ಯದರ್ಶಿ ಕೃಷ್ಣಮೂರ್ತಿ, ಕುಯುಡಿಎ ಮಾಜಿ ಅಧ್ಯಕ್ಷ ವಿಜಯ್‌ಕುಮಾರ್, ಯುವ ಮೋರ್ಚಾ ಅಧ್ಯಕ್ಷ ಬಾಲಾಜಿ, ನಗರಾಧ್ಯಕ್ಷ ಸಮಾ ಬಾಬು, ಮುಖಂಡರಾದ ಕೆಂಬೋಡಿ ನಾರಾಯಣಸ್ವಾಮಿ, ರಾಜೇಶ್‌ಸಿಂಗ್, ವಾಸು, ತಿಮ್ಮರಾಯಪ್ಪ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts