More

    ವಿಧಾನಸೌಧದಲ್ಲಿ ಪಾಕ್​ ಪರ ಘೋಷಣೆ ಕೂಗಿದ ಆರೋಪ ಪ್ರಕರಣ: ಮೂವರ ಬಂಧನ

    ಬೆಂಗಳೂರು: ರಾಜ್ಯಸಭೆ ಚುನಾವಣೆ ಸಂದರ್ಭದಲ್ಲಿ ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ಆರೋಪಕ್ಕೆ ಸಂಬಂಧಪಟ್ಟಂತೆ ಮೂವರು ಆರೋಪಿಗಳನ್ನು ಇಂದು (ಮಾರ್ಚ್​ 04) ಬಂಧಿಸಲಾಗಿದೆ.

    ಆರೋಪಿಗಳ ಬಂಧನಕ್ಕೆ ಸಂಬಂಧಿಸಿದಂತೆ ವಿಧಾನಸೌಧ ಪೊಲೀಸ್​ ಠಾಣೆ ಪ್ರತಿಕಾ ಪ್ರಕಟಣೆ ಹೊರಡಿಸಿದೆ. ಫೆ. 27ರಂದು ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆಯ ಫಲಿತಾಂಶದ ಸಂದರ್ಭದಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಎಂಬ ಘೋಷಣೆ ಕೂಗಿದ ಸಂಬಂಧ ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಈ ಹಿನ್ನೆಯಲ್ಲಿ ಎಫ್‌ಎಸ್ಎಲ್ ವರದಿ, ಸಾಂಧರ್ಬಿಕ ಸಾಕ್ಷ್ಯಧಾರಗಳು. ಸಾಕ್ಷಿಗಳ ಹೇಳಿಕೆ ಮತ್ತು ಲಭ್ಯ ಸಾಕ್ಷಾಧಾರಗಳ ಮೇರೆಗೆ 03 ಜನ ಆರೋಪಿಗಳನ್ನು ಬಂಧಿಸಿ, ಅವರುಗಳ ವಿರುದ್ಧ ಕಾನೂನು ಕ್ರಮ ಜರುಗಿಸಲಾಗಿರುತ್ತದೆ ಎಂದು ತಿಳಿಸಲಾಗಿದೆ.

    ಬಂಧಿತ ಮೂವರನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದ ಬಳಿಕ, ಕೋರಮಂಗಲದಲ್ಲಿರುವ 1ನೇ ಎಸಿಎಂಎಂ ಕೋರ್ಟ್​ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದೆ.

    ಏನಿದು ಪ್ರಕರಣ?
    ಫೆ.27ರಂದು ರಾಜ್ಯಸಭೆ ಚುನಾವಣೆ ಫಲಿತಾಂಶ ಪ್ರಕಟಗೊಳ್ಳುತ್ತಿದ್ದಂತೆ ಬಿಜೆಪಿ ಅಭ್ಯರ್ಥಿ ನಾರಾಯಣಸಾ ಭಾಂಡಗೆ ಅವರನ್ನು ಪಕ್ಷದ ಮುಖಂಡರು ಕಾರ್ಯಕರ್ತರು ವಿಜಯೋತ್ಸವ ಘೋಷಣೆ ಹಾಕಿ ಕರೆತಂದರು. ಈ ವೇಳೆ ಜೈ ಶ್ರೀರಾಮ್ ಘೋಷಣೆ ಕೂಡ ಮೊಳಗಿತು. ಈ ಘೋಷಣೆ ಅಲ್ಲಿದ್ದ ಕೆಲವು ಕಾಂಗ್ರೆಸ್ ಕಾರ್ಯಕರ್ತರಿಗೆ ಇರುಸುಮುರಿಸು ಉಂಟುಮಾಡಿತು. ಅವರು ಜೈ ಭೀಮ್ ಜೈ ಬಸವಣ್ಣ ಎಂದು ಕೂಗಿದರೂ ದನಿ ದೊಡ್ಡದಾಗಿರಲಿಲ್ಲ. ಕೆಲ ನಿಮಿಷಗಳ ಬಳಿಕ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಅಭ್ಯರ್ಥಿಗಳು ಮತದಾನ ಕೇಂದ್ರದಿಂದ ಹೊರಬಂದು ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಈ ವೇಳೆ ವಿಧಾನಸೌಧದ ವಿಧಾನಸಭೆ ಮುಂಭಾಗದ ಲಾಂಜ್​ನಲ್ಲಿ ಕಾಯುತ್ತಿದ್ದ ಕಾರ್ಯಕರ್ತರು, ನಾಸೀರ್ ಹುಸೇನ್ ಆಗಮಿಸುತ್ತಿದ್ದಂತೆ ಘೋಷಣೆ ಕೂಗಿದರು. ಈ ವೇಳೆ ನಾಸೀರ್ ಪಕ್ಕದಲ್ಲೇ ಇದ್ದ ಒಬ್ಬ ಕಾರ್ಯಕರ್ತ ಪಾಕಿಸ್ತಾನ ಜಿಂದಾಬಾದ್ ಎಂದು ಎರಡು ಬಾರಿ ಘೋಷಣೆ ಹಾಕಿದ್ದಾನೆ ಎಂದು ಬಿಜೆಪಿ ಮುಖಂಡರು ಆರೋಪಿಸಿದ್ದಾರೆ. ಅಲ್ಲದೆ, ವಿಧಾನಸೌಧದ ಠಾಣೆ ಎದುರು ಅದೇ ದಿನ ರಾತ್ರಿ ಬಿಜೆಪಿ ಭಾರಿ ಪ್ರತಿಭಟನೆ ಸಹ ನಡೆಸಿತು.

    ಲೋಕಸಭಾ ಚುನಾವಣೆ ಬಳಿಕ ಹೊಸ ಸರ್ಕಾರ ಮೊದಲು ಮಾಡಬೇಕಾದ ಕೆಲಸ ಏನೆಂದು ತಿಳಿಸಿದ ಸದ್ಗುರು!

    ಇಲ್ಲಿ ಕೇವಲ ಒಂದು ರೂಪಾಯಿಯಲ್ಲಿ ಮದುವೆ ಮಾಡಿಕೊಡ್ತಾರೆ! ಆದರೆ ಒಂದು ಕಂಡೀಷನ್​

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts