20.4 C
Bengaluru
Monday, January 20, 2020

ಸ್ಪಂದನಾ ಶೀಲ, ಅಭಿವೃದ್ಧಿ ಪರ ಚಿಂತಕರಿಗೆ ಮತ

Latest News

ಸಿಎಎ ಬೆಂಬಲಿಸಿ ರ‌್ಯಾಲಿ

ಬಾದಾಮಿ: ವಿಶ್ವದ ದೊಡ್ಡ ಹಿಂದು ರಾಷ್ಟ್ರವಾದ ಭಾರತದ ಸಂಸ್ಕೃತಿ ಉಳಿಸಿ ಬೆಳೆಸಲು ಕೇಂದ್ರ ಸರ್ಕಾರ ಪೌರತ್ವ ತಿದ್ದ್ದುಪಡಿ ಕಾಯ್ದೆ ಜಾರಿಗೆ ತಂದಿದೆ. ಇದರಿಂದ...

ಕೋಟೆನಗರಿಯಲ್ಲಿ ಆಕರ್ಷಕ ಪಥ ಸಂಚಲನ

ಬಾಗಲಕೋಟೆ: ಸಂಕ್ರಾಂತಿ ಹಬ್ಬದ ಅಂಗವಾಗಿ ಆರ್‌ಎಸ್‌ಎಸ್ ಅಂಗ ಸಂಸ್ಥೆ ರಾಷ್ಟ್ರ ಸೇವಿಕಾ ಸಮಿತಿ ನೇತೃತ್ವದಲ್ಲಿ ಭಾನುವಾರ ಹಮ್ಮಿಕೊಳ್ಳಲಾಗಿದ್ದ ಸ್ವಯಂ ಸೇವಕಿಯರ ಘೋಷ ಸಹಿತ...

ಧರ್ಮದಲ್ಲಿ ರಾಜಕೀಯ ಸಲ್ಲ

ತೇರದಾಳ: ಧರ್ಮ ಶ್ರೇಷ್ಠವಾಗಿದ್ದು, ಧರ್ಮದಲ್ಲಿ ರಾಜಕೀಯ ಬೆರೆಸಬೇಡಿ. ವೀರಶೈವರು ಲಿಂಗವನ್ನು ತ್ರಿಕಾಲಗಳಲ್ಲಿ ಪೂಜೆಗೈಯುತ್ತ ಜೀವನ ಸಾರ್ಥಕ ಮಾಡಿಕೊಳ್ಳಬೇಕು. ಧರ್ಮ ಮತ್ತು ಗುರು ಜೀವನ...

ಕಲಾದಗಿಯಲ್ಲಿ ಆರ್ಥಿಕ ಗಣತಿಗೆ ಅಸಹಕಾರ

ಕಲಾದಗಿ: ಗ್ರಾಮದಲ್ಲಿ ರಾಷ್ಟ್ರೀಯ 7ನೇ ಆರ್ಥಿಕ ಗಣತಿ ಕಾರ್ಯ ಒಂದು ವಾರದಿಂದ ಸ್ಥಗಿತಗೊಂಡಿದ್ದು, ಪ್ರಬಲ ಕೋಮಿನ ನೂರಾರು ಮನೆಯವರು ಆರ್ಥಿಕ ಗಣತಿದಾರರಿಗೆ ಮಾಹಿತಿ...

ವೇಗ ಕಾಣದ ಫಾಸ್ಟ್ಯಾಗ್​ !

ಹೀರಾನಾಯ್ಕ ಟಿ. ವಿಜಯಪುರ: ವಾಹನಗಳಿಗೆ ಕಡ್ಡಾಯವಾಗಿ ಫಾಸ್ಟ್ಯಾಗ್ ​ಅಳವಡಿಸಲು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ ಆದೇಶಿಸಿದೆ. ಆದರೆ, ಸಾಕಷ್ಟು ವಾಹನಗಳಿಗೆ ಫಾಸ್ಟ್ಯಾಗ್  ಅಳವಡಿಸದೆ ಇರುವುದರಿಂದ...

ಚಾಮರಾಜನಗರ: ಸಮಾಜದಲ್ಲಿರುವ ಬಡವ, ಶ್ರೀಮಂತ, ಅನಕ್ಷರಸ್ಥ, ಅಕ್ಷರಸ್ಥ ಸೇರಿದಂತೆ 18 ವರ್ಷ ತುಂಬಿದ ಎಲ್ಲರಿಗೂ ಮತದಾನದ ಮೂಲಕ ತನ್ನ ಕ್ಷೇತ್ರದ ಜನಪ್ರತಿನಿಧಿಯನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶವನ್ನು ಸಂವಿಧಾನ ಕಲ್ಪಿಸಿದ್ದು, ಯೋಗ್ಯರನ್ನು ಆಯ್ಕೆ ಮಾಡುವ ಕಾರ್ಯವನ್ನು ಯಶಸ್ವಿಯಾಗಿ ನಿಭಾಯಿಸಬೇಕಿದೆ.

ಸದ್ಯ ಲೋಕಸಭಾ ಚುನಾವಣೆ ಎದುರುಗೊಂಡಿದ್ದು, ಮತದಾರರು ಆಮಿಷಕ್ಕೆ ಬಲಿಯಾಗಿ ಮತ ಚಲಾಯಿಸದಂತೆ ಜಿಲ್ಲಾ ಸ್ವೀಪ್ ಸಮಿತಿ ಸಾಕಷ್ಟು ಕಾರ್ಯಕ್ರಮಗಳನ್ನು ನಡೆಸಿ ಜಾಗೃತಿ ಬಿತ್ತಿದೆ. ದೇಶವನ್ನು ಸಮರ್ಥವಾಗಿ ಮುನ್ನಡೆಸುವ ಮತ್ತು ಅಭಿವೃದ್ಧಿಗೆ ಆದ್ಯತೆ ನೀಡುವ, ಕ್ಷೇತ್ರದ ಸಮಸ್ಯೆಗಳನ್ನು ಸಂಸತ್ತಿನಲ್ಲಿ ಪ್ರಸ್ತಾಪಿಸಿ ಪರಿಹರಿಸಲು ಪ್ರಯತ್ನಿಸುವ, ಮತದಾರನ ಸಮಸ್ಯೆಗಳಿಗೆ ಸ್ಪಂದಿಸುವ ಸೌಜನ್ಯವಿರುವ ಅಭ್ಯರ್ಥಿಯನ್ನು ಬೆಂಬಲಿಸುವುದಾಗಿ ಸಾರ್ವಜನಿಕರು ಪತ್ರಿಕೆಯೊಂದಿಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಚುನಾವಣೆ ವೇಳೆ ಪೊಳ್ಳು ಭರವಸೆಗಳನ್ನು ನೀಡಿ ಗೆದ್ದು ಮಹಾನಗರಗಳನ್ನು ಸೇರಿಕೊಳ್ಳುವ ಅಭ್ಯರ್ಥಿ ನಮಗೆ ಬೇಡ. ಕ್ಷೇತ್ರದ ಜನರ ಜತೆ ಒಡನಾಟ ಇಟ್ಟುಕೊಂಡು ಅವರ ಕಷ್ಟ ಸುಖಗಳಿಗೆ ಸ್ಪಂದಿಸುವಂತಿರಬೇಕು. ಕಣದಲ್ಲಿರುವ ಅಭ್ಯರ್ಥಿಗಳಲ್ಲಿ ಅಂತಹವರನ್ನು ಹುಡುಕಿ ಮತ ಹಾಕಲಾಗುವುದು ಎಂದು ಹಲವರು ಲೌಡ್ ಸ್ಪೀಕರ್‌ನಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.

ಮೂಲಸೌಕರ್ಯ ಕಲ್ಪಿಸುವ ಅಭ್ಯರ್ಥಿ ಬೇಕು
ಜಿಲ್ಲೆಯಲ್ಲಿಯೇ ಹನೂರು ಕ್ಷೇತ್ರ ಹೆಚ್ಚು ವಿಸ್ತಾರ ಹೊಂದಿದ್ದು, ಸುಮಾರು 400ಕ್ಕೂ ಹೆಚ್ಚು ಗ್ರಾಮಗಳಿವೆ. ಬಹುತೇಕ ಗ್ರಾಮಗಳಲ್ಲಿ ಕುಡಿಯುವ ನೀರು, ವಿದ್ಯುತ್, ರಸ್ತೆ ಸೇರಿದಂತೆ ಮೂಲ ಸೌಕರ್ಯದ ಕೊರತೆ ಇದೆ. ಈ ಬಾರಿಯ ಚುನಾವಣೆಯಲ್ಲಿ ಮೂಲ ಸೌಕರ್ಯವನ್ನು ಕಲ್ಪಿಸುವ ಹಾಗೂ ಜನತೆಗೆ ಉತ್ತಮ ಸೇವೆ ನೀಡುವ ಅಭ್ಯರ್ಥಿಗೆ ಮತ ಚಲಾಯಿಸಲಾಗುವುದು.
ಗೌತಮ್ ಕೂಡಲೂರು

ಹೊಗೆನಕಲ್ ಫಾಲ್ಸ್ ಅಭಿವೃದ್ಧಿಪಡಿಸಿ
ಹನೂರು ಕ್ಷೇತ್ರದ ಬಹುತೇಕ ಗ್ರಾಮಗಳು ಕಾಡಂಚಿನಲ್ಲಿವೆ. ಇಲ್ಲಿನ ಜನರು ಮೂಲ ಸೌಕರ್ಯವಿಲ್ಲದೆ ಹೀನಾಯ ಸ್ಥಿತಿಯಲ್ಲಿ ಜೀವನ ನಡೆಸುತ್ತಿದ್ದಾರೆ. ಈ ಗ್ರಾಮಗಳ ಜನರ ಬದುಕು ಸುಧಾರಣೆ ಆಗಬೇಕಿದೆ. ಅಲ್ಲದೆ, ಪ್ರವಾಸಿ ತಾಣ ಹೊಗೆನಕಲ್ ಫಾಲ್ಸ್ ಅಭಿವೃದ್ಧಿಯಾಗಬೇಕು. ಆದ್ದರಿಂದ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡುವುದಾಗಿ ಭರವಸೆ ನೀಡಿರುವ ಅಭ್ಯರ್ಥಿಗೆ ಮತ ನೀಡಲಾಗುವುದು.
ನೂರುಲ್ಲಾ ಕೌದಳ್ಳಿ

ಜಾತ್ಯತೀತ ಮನಸ್ಸಿನ ಸ್ಪರ್ಧಿಗೆ ಮತ
ಕ್ಷೇತ್ರದ ಜನರ ನಡುವೆ ಸದಾ ಇರುವ ಹಾಗೂ ಜಾತ್ಯತೀತವಾಗಿ ಎಲ್ಲ ಧರ್ಮಗಳು ಮತ್ತು ವರ್ಗಗಳಿಗೆ ಆದ್ಯತೆ ನೀಡುವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಿದೆ. ಇದರ ಜತೆಗೆ ಜಿಲ್ಲೆಯ ಅಭಿವೃದ್ಧಿಗೆ ದುಡಿಯುವ ಗುಣವುಳ್ಳ ಅಭ್ಯರ್ಥಿಯನ್ನು ಬೆಂಬಲಿಸಲು ತೀರ್ಮಾನಿಸಿದ್ದೇನೆ.
ಜೋಗಶೆಟ್ಟಿ ಕಂದಹಳ್ಳಿ

ಕೆರೆ, ಕಟ್ಟೆ ಅಭಿವೃದ್ಧಿ ಮಾಡುವವರಿಗೆ ಮತ
ಯಳಂದೂರು ತಾಲೂಕಿನ ಕೆರೆ, ಕಟ್ಟೆಗಳನ್ನು ಅಭಿವೃದ್ಧಿಪಡಿಸುವ ಹಾಗೂ ಕುಡಿಯುವ ನೀರು ಸೇರಿದಂತೆ ಇತರೆ ಮೂಲ ಸೌಕರ್ಯ ಕಲ್ಪಿಸುವ ಭರವಸೆ ನೀಡಿರುವ ಅಭ್ಯರ್ಥಿಯನ್ನು ಬೆಂಬಲಿಸುತ್ತೇನೆ. ಅವರು ಯಾರೆಂದು ಈಗಾಗಲೇ ಪತ್ತೆ ಹಚ್ಚಿದ್ದೇನೆ. ಅಂತಹವರು ಆಯ್ಕೆ ಆಗಬೇಕಿದೆ.
ಪುಟ್ಟಬಸವಯ್ಯ ಹೊನ್ನೂರು

ಗೆದ್ದು ನಗರ ಸೇರಿಕೊಳ್ಳುವವರು ಬೇಡ
ಕ್ಷೇತ್ರದ ಅಭಿವೃದ್ಧಿ ಬಗ್ಗೆ ತನ್ನದೇ ಆದ ದೃಷ್ಟಿಕೋನವುಳ್ಳ ಅಭ್ಯರ್ಥಿಯನ್ನು ಬೆಂಬಲಿಸುವ ಅಗತ್ಯವಿದೆ. ಗೆದ್ದು ಮಹಾನಗರಗಳನ್ನು ಸೇರಿಕೊಳ್ಳುವವರು ನಮಗೆ ಬೇಡ. ಬರಪೀಡಿತ ಕ್ಷೇತ್ರದ ಅಂತರ್ಜಲ ಅಭಿವೃದ್ಧಿಗೆ ದುಡಿಯುವ ಬದ್ಧತೆ ತೋರಬೇಕು. 10 ಅಭ್ಯರ್ಥಿಗಳಲ್ಲಿ ಅಂತಹ ಒಬ್ಬರಿಗೆ ಮತ ನೀಡಲಾಗುವುದು.
ಭೈರೇಶ್ ಗಾಣಿಗ್ ಮಲ್ಲಯ್ಯನಪುರ

ಪೊಳ್ಳು ಭರವಸೆ ನೀಡುವವರ ಆಯ್ಕೆ ಬೇಡ
ಯುವಕರಿಗೆ ಹೆಚ್ಚಿನ ಉದ್ಯೋಗಾವಕಾಶ ಕಲ್ಪಿಸುವ, ದೇಶದ ಭದ್ರತೆ ಹಾಗೂ ಸಮಗ್ರತೆಗೆ ಒತ್ತು ನೀಡುವ ಪಕ್ಷದ ಅಭ್ಯರ್ಥಿ ಆಯ್ಕೆಯಾಗಬೇಕು. ಅಂತಹ ಅಭ್ಯರ್ಥಿಯನ್ನು ಗುರುತಿಸಿದ್ದು ಅವರಿಗೆ ಮತ ನೀಡಲಾಗುವುದು. ಪೊಳ್ಳು ಭರವಸೆ ನೀಡಿ ವಂಚಿಸುವವರು ಆಯ್ಕೆಯಾಗಬಾರದು.
ಜೀವನಕುಮಾರ್ ಗುಂಡ್ಲುಪೇಟೆ

ಕಾನೂನು ಗೌರವಿಸುವ ಅಭ್ಯರ್ಥಿ ಬೇಕು
ಹಿಂದುಳಿದಿದೆ ಎಂಬ ಹಣೆಪಟ್ಟಿ ಕಟ್ಟಿಕೊಂಡಿರುವ ಈ ಕ್ಷೇತ್ರದ ಅಭಿವೃದ್ಧಿಗೆ ದುಡಿಯುವ ಮನಸ್ಸಿರುವ ಅಭ್ಯರ್ಥಿ ಯಾರೆಂಬುದನ್ನು ಮೊದಲು ತೀರ್ಮಾನಿಸಬೇಕು. ಅಭ್ಯರ್ಥಿಯು ಒಂದು ಜಾತಿ, ಧರ್ಮದ ಪರ ಒಲವು ಉಳ್ಳವನಾಗಿರಬಾರದು. ದೇಶದ ಕಾನೂನುಗಳನ್ನು ಗೌರವಿಸುವ ಅಭ್ಯರ್ಥಿಯನ್ನು ಬೆಂಬಲಿಸುವುದು ಸೂಕ್ತ.
ಅಬ್ರಾರ್ ಅಹಮ್ಮದ್ ಚಾಮರಾಜನಗರ

ಸೋಮಾರಿ ಗೆದ್ದರೆ ಕ್ಷೇತ್ರಕ್ಕೆ ನಷ್ಟ
ಕ್ಷೇತ್ರದಲ್ಲಿ ಎಂತಹ ಕೆಲಸಗಳಾಗಬೇಕು. ಮಾದರಿ ಕ್ಷೇತ್ರ ಮಾಡಲು ಏನು ಮಾಡಬೇಕೆಂಬ ದೃಷ್ಟಿಕೋನ ಹೊಂದಿರುವ ಅಭ್ಯರ್ಥಿಯನ್ನು ಬೆಂಬಲಿಸುವ ಅಗತ್ಯವಿದೆ. ಇಲ್ಲಿ ಪಕ್ಷ ಮುಖ್ಯವಾಗಬಾರದು. ಕ್ಷೇತ್ರದ ಅಭಿವೃದ್ಧಿ ಮಾನದಂಡವಾಗಬೇಕು. ಸೋಮಾರಿ ಅಭ್ಯರ್ಥಿ ಗೆದ್ದರೆ ಕ್ಷೇತ್ರ ಮತ್ತಷ್ಟು ಹಿಂದುಳಿಯಲಿದೆ.
ಬಂಗಾರುಸ್ವಾಮಿ ಹೌಸಿಂಗ್ ಬೋರ್ಡ್ ಕಾಲನಿ

ಕೃಷಿಕರ ಪರ ಒಲವಿನ ಅಭ್ಯರ್ಥಿಗೆ ಮತ
ಹಳ್ಳಿಗಳ ಅಭಿವೃದ್ಧಿಗೆ ಮತ್ತು ಕೃಷಿಕರ ಬದುಕು ಸುಧಾರಣೆಗೆ ಆದ್ಯತೆ ನೀಡುವ ಅಭ್ಯರ್ಥಿಯನ್ನು ಆಯ್ಕೆ ಮಾಡಬೇಕಾದ ಅಗತ್ಯವಿದೆ. ರಸ್ತೆಗಳ ಅಭಿವೃದ್ಧಿ ಜತೆಗೆ ಗ್ರಾಮೀಣ ಪ್ರದೇಶಗಳಿಗೂ ಸೂಕ್ತ ಸೌಲಭ್ಯ ಕಲ್ಪಿಸುವ ಬದ್ಧತೆ ಹೊಂದಿರುವವರನ್ನು ಗುರುತಿಸಿ ಬೆಂಬಲಿಸುತ್ತೇನೆ.
ವಲ್ಲಿಯಾಮ್ಮಳ್ ಕಡಬೂರು

ವಲಸೆ ತಡೆಯುವವರಿಗೆ ಓಟು
ಯುವಕರು ಓದು ಮುಗಿಸಿ ಕೆಲಸ ಅರಸಿ ಬೆಂಗಳೂರು ಮತ್ತು ಮೈಸೂರಿನತ್ತ ಹೋಗುವುದನ್ನು ತಡೆಯಲು ಕಾರ್ಯಕ್ರಮ ರೂಪಿಸುವ ಅಭ್ಯರ್ಥಿಯನ್ನು ಬೆಂಬಲಿಸುವ ಜರೂರಿದೆ. ಜತೆಗೆ ಜಿಲ್ಲೆಯ ಶೈಕ್ಷಣಿಕ ಸ್ಥಿತಿಯನ್ನು ಸುಧಾರಿಸುವ ಮನಸ್ಸು ಹೊಂದಿರುವವರ ಅಗತ್ಯವಿದೆ.
ಶ್ವೇತಾ ಚಾಮರಾಜನಗರ

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...