More

    ನ್ಯಾಷನಲ್ ಹೆರಾಲ್ಡ್ ಪ್ರಕರಣ; 752 ಕೋಟಿ ರೂ. ಮೌಲ್ಯದ ಆಸ್ತಿ ಮುಟ್ಟುಗೋಲು ಹಾಕಿದ ED

    ನವದೆಹಲಿ: ಮಹತ್ವದ ಬೆಳವಣಿಗೆ ಒಂದರಲ್ಲಿ ನ್ಯಾಷನಲ್​ ಹೆರಾಲ್ಡ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಪತ್ರಿಕೆಯ ಮಾಲೀಕತ್ವದ ಸುಮಾರು 752 ಕೋಟಿ ರೂ ಮೌಲ್ಯದ ಆಸ್ತಿಯನ್ನು ಮಂಗಳವಾರ ಮುಟ್ಟುಗೋಲು ಹಾಕಿಕೊಂಡಿದೆ.

    ನ್ಯಾಷನಲ್ ಹೆರಾಲ್ಡ್ ಪತ್ರಿಕೆಯ ಮಾಲೀಕತ್ವ ಹೊಂದಿರುವ ಕಾಂಗ್ರೆಸ್ ಪಕ್ಷದ ಪ್ರವರ್ತಿತ ಯಂಗ್ ಇಂಡಿಯನ್ ವಿರುದ್ಧ ಅಕ್ರಮ ಹಣ ವರ್ಗಾವಣೆ ತನಿಖೆಯ ಭಾಗವಾಗಿ 751.9 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಪ್ತಿ ಮಾಡಿರುವುದಾಗಿ ಜಾರಿ ನಿರ್ದೇಶನಾಲಯ ತಿಳಿಸಿದೆ.

    ಈ ಕುರಿತು ಪ್ರಕಟಣೆ ಹೊರಡಿಸಿರುವ ಜಾರಿ ನಿರ್ದೇಶನಾಲಯ ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಹಾಗೂ ಯಂಗ್ ಇಂಡಿಯನ್ ಸಂಸ್ಥೆಯ ಒಟ್ಟು 752 ಕೋಟಿ ರೂಪಾಯಿ ಮೌಲ್ಯದ ಸ್ಥಿರಾಸ್ಥಿ ಹಾಗೂ ಹೂಡಿಕೆ ರೂಪದ ಅಕ್ರಮ ಆದಾಯದವನ್ನು ಮನಿ ಲಾಂಡರಿಂಗ್ ಪ್ರಕರಣಧಲ್ಲಿ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಳ್ಳಲು ಇಡಿ ಆದೇಶ ಹೊರಡಿಸಿದೆ. ದೆಹಲಿ, ಮುಂಬೈ, ಲಖನೌ ಸೇರಿದಂತೆ ಇತರ ನಗರಗಳಲ್ಲಿನ ಆಸ್ಥಿಯನ್ನು ಮುಟ್ಟುಗೋಲು ಹಾಕಲಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

    ಇದನ್ನೂ ಓದಿ: ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ಸೋಲಲು ಇದೊಂದೆ ಕಾರಣ: ಶಾಹಿದ್ ಅಫ್ರಿದಿ

    ಕಾಂಗ್ರೆಸ್ಸಿನ ಮುಖವಾಣಿಯಾಗಿರುವ ನ್ಯಾಷನಲ್‌ ಹೆರಾಲ್ಡ್‌ ಪತ್ರಿಕೆಯ ಅಕ್ರಮ ಹಣ ವರ್ಗಾವಣೆ ಕುರಿತು ಇಡಿ ತನಿಖೆ ನಡೆಸುತ್ತಿದೆ. ನ್ಯಾಷನಲ್‌ ಹೆರಾಲ್ಡ್‌ ಕಂಪನಿ ಸಹಸ್ರಾರು ಕೋಟಿ ರೂಪಾಯಿ ಆಸ್ತಿ ಹೊಂದಿದೆ. ಅದರ ಮಾಲೀಕತ್ವವನ್ನು ಸದ್ಯ ಯಂಗ್‌ ಇಂಡಿಯನ್‌ ಸಂಸ್ಥೆ ಹೊಂದಿದೆ. ನ್ಯಾಷನಲ್ ಹೆರಾಲ್ಡ್ ಪ್ರಕರಣ ಬರೋಬ್ಬರಿ 2,000 ಕೋಟಿ ರೂಪಾಯಿ ಹಗರಣವಾಗಿದೆ. ದೆಹಲಿಯ ಐಟಿಒ ಬಳಿ ಬಹಾದ್ದೂರ್‌ ಶಾ ಜಾಫರ್‌ ಮಾರ್ಗದಲ್ಲಿರುವ ‘ಹೆರಾಲ್ಡ್‌ ಹೌಸ್‌’ ಈ ಪತ್ರಿಕೆಯ ಕೇಂದ್ರ ಕಚೇರಿ. 

    ಅಸೋಸಿಯೇಟೆಡ್ ಜರ್ನಲ್ಸ್ ಲಿಮಿಟೆಡ್ ಭಾರತದ ದೆಹಲಿ, ಮಹಾರಾಷ್ಟ್ರದ ಮುಂಬೈ ಮತ್ತು ಉತ್ತರ ಪ್ರದೇಶದ ಲಖನೌ ನಂತಹ ಅನೇಕ ನಗರಗಳಲ್ಲಿ ಸುಮಾರು 661.69 ಕೋಟಿ ರೂಪಾಯಿಗಳಷ್ಟು ಸ್ಥಿರಾಸ್ತಿಗಳ ರೂಪದಲ್ಲಿ ಅಪರಾಧದ ಆದಾಯವನ್ನು ಹೊಂದಿದೆ ಮತ್ತು ಯಂಗ್ ಇಂಡಿಯನ್ ಸಂಸ್ಥೆ ಕೂಡ ಅಪರಾಧದ ಆದಾಯವನ್ನು ಹೊಂದಿದೆ ಎಂದು ತನಿಖೆಯಿಂದ ತಿಳಿದುಬಂದಿದೆ. ಎಜೆಎಲ್‌ನ ಈಕ್ವಿಟಿ ಷೇರುಗಳಲ್ಲಿ ಹೂಡಿಕೆಯ ರೂಪದಲ್ಲಿ 90.21 ಕೋಟಿ ರೂ. ಹೊಂದಿದೆ ಎಂದು ಇಡಿ ಆರೋಪಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts