More

  ಅಬಕಾರಿ ಹಗರಣ: ದೆಹಲಿ ಸಿಎಂ ಕ್ರೇಜಿವಾಲ್​ಗೆ 9ನೇ ಬಾರಿ ಸಮನ್ಸ್​ ನೀಡಿದ ಇ.ಡಿ

  ನವದೆಹಲಿ: ದೆಹಲಿ ಅಬಕಾರಿ ನೀತಿ ಹಗರಣದಲ್ಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್​ ಅವರಿಗೆ ಭಾನುವಾರ ಜಾರಿ ನಿರ್ದೇಶನಾಲಯವು ಸತತ 9ನೇ ಬಾರಿಗೆ ಸಮನ್ಸ್ ನೀಡಿದೆ. ದೆಹಲಿ ಅಬಕಾರಿ ನೀತಿ ವೇಳೆ ಹಗರಣ ನಡೆದಿದೆ ಎನ್ನಲಾದ ಪ್ರಕರಣದಲ್ಲಿ ಇ.ಡಿ ದೂರು ದಾಖಲಿಸಿದ ಬಳಿಕ ಇತ್ತೀಚೆಗೆ ಅಷ್ಟೇ ಜಾಮೀನು ಪಡೆದುಕೊಂಡು ತುಸು ನಿರಾಳರಾಗಿದ್ದ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಮತ್ತೆ ಸಂಕಷ್ಟ ಎದುರಾಗಿದೆ.

  ಇದನ್ನೂ ಓದಿ: ಐಪಿಎಲ್​ ಆರಂಭಕ್ಕೂ ಮುನ್ನ ಮುಂಬೈ ಇಂಡಿಯನ್ಸ್​ಗೆ ಮತ್ತೊಂದು ಆಘಾತ; ಸ್ಟಾರ್​ ವೇಗಿ ಅಲಭ್ಯ

  ದೆಹಲಿ ಜಲ ಮಂಡಳಿ ಗುತ್ತಿಗೆ ಮಂಜೂರು ಮಾಡುವಾಗ ಅಕ್ರಮ ನಡೆದಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯವು ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಸಮನ್ಸ್‌ ಜಾರಿಗೊಳಿಸಿದೆ. ಜಲಮಂಡಳಿ ಪ್ರಕರಣದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರು ಮಾರ್ಚ್‌ 18ರಂದು ವಿಚಾರಣೆಗೆ ಹಾಜರಾಗಬೇಕಿದೆ. ಇನ್ನು, ಅಬಕಾರಿ ನೀತಿ ಪ್ರಕರಣದಲ್ಲಿ ಮಾರ್ಚ್‌ 21ರಂದು ವಿಚಾರಣೆಗೆ ಹಾಜರಾಗಬೇಕು ಎಂಬುದಾಗಿ ಇ.ಡಿ ಅಧಿಕಾರಿಗಳು ಸೂಚಿಸಿದ್ದಾರೆ. ಇದೇ ಪ್ರಕರಣದಲ್ಲಿ ಈಗಾಗಲೇ ಇ.ಡಿ ಎಂಟು ಬಾರಿ ಸಮನ್ಸ್‌ ನೀಡಿದ್ದರೂ ಕೇಜ್ರಿವಾಲ್‌ ಅವರು ವಿಚಾರಣೆಗೆ ಹಾಜರಾಗಿಲ್ಲ.

  ಕೇಜ್ರಿವಾಲ್ ವಿರುದ್ಧದ ದೂರುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ನೀಡುವಂತೆ ಶನಿವಾರ ನ್ಯಾಯಾಲಯವು ಜಾರಿ ನಿರ್ದೇಶನಾಲಯಕ್ಕೆ ಸೂಚಿಸಿದೆ.

  ಎಎಪಿ ಆಕ್ರೋಶ: ದೆಹಲಿ ಸಿಎಂ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಲಮಂಡಳಿ ಪ್ರಕರಣದಲ್ಲಿ ಸಮನ್ಸ್‌ ನೀಡುತ್ತಲೇ ಎಎಪಿ ಕಿಡಿಕಾಡಿದೆ. ದೆಹಲಿ ಜಲಮಂಡಳಿ ತನಿಖೆ ವಿಚಾರದಲ್ಲಿ ಅರವಿಂದ್‌ ಕೇಜ್ರಿವಾಲ್‌ ಅವರಿಗೆ ಜಾರಿ ನಿರ್ದೇನಾಲಯ ಸಮನ್ಸ್‌ ನೀಡಿದೆ. ಜಲಮಂಡಳಿ ಪ್ರಕರಣದಲ್ಲಿ ಇ.ಡಿ ಕೇಸ್‌ ದಾಖಲಿಸಿರುವುದೇ ನಮಗೆ ಗೊತ್ತಿಲ್ಲ. ಮತ್ತೊಂದು ನಕಲಿ ಪ್ರಕರಣಕ್ಕೆ ಸಂಬಂಧಿಸಿದಂತೆ ಇ.ಡಿ ಸಮನ್ಸ್‌ ನೀಡಿದೆ ಎಂದು ಎಎಪಿ ನಾಯಕಿ ಆತಿಶಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

  ಇಂತಹದ್ದೇ ಹಗರಣದಲ್ಲಿ ಬಿಆರ್​ಎಸ್​ ನಾಯಕಿ ಅರೆಸ್ಟ್​: ದೆಹಲಿ ಅಬಕಾರಿ ನೀತಿ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ಎಂಎಲ್‌ಸಿ ಹಾಗೂ ಕೆ ಚಂದ್ರಶೇಖರ್‌ ರಾವ್‌ (ಕೆಸಿಆರ್) ಪುತ್ರಿ ಕೆ. ಕವಿತಾ ಅವರನ್ನು ಜಾರಿ ನಿರ್ದೇಶನಾಲಯ ಶುಕ್ರವಾರ ಬಂಧಿಸಿತ್ತು. ಈ ಪ್ರಕರಣದಲ್ಲಿ ಕವಿತಾ ಅವರನ್ನು ಈ ಹಿಂದೆ ವಿಚಾರಣೆಗೊಳಪಡಿಸಿದ್ದರೂ, ಈ ವರ್ಷ ಅವರು ಎರಡು ಸಮನ್ಸ್‌ಗಳಿಗೆ ಹಾಜರಾಗಿರಲಿಲ್ಲ. ಹೀಗಾಗಿ, ಹೈದರಾಬಾದ್‌ನಲ್ಲಿರುವ ಕವಿತಾ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ ದಾಳಿ ನಡೆಸಿತ್ತು.

  ಹಾಸ್ಟೆಲ್​ನಲ್ಲಿ ನಮಾಜ್‌ ಮಾಡಿದ ವಿದೇಶಿ ವಿದ್ಯಾರ್ಥಿಗಳ ಮೇಲೆ ದಾಳಿ: ಐವರಿಗೆ ಗಾಯ

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts