24.9 C
Bangalore
Wednesday, December 11, 2019

ಚಿತ್ರಾಪುರ ಜೆಟ್ಟಿ ಕಾಮಗಾರಿ ವಿಳಂಬ

Latest News

ವಿಷ್ಣು‌ ಸೇನಾ‌ ಸಮಿತಿಯಿಂದ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಆಯೋಜನೆ

ಬಳ್ಳಾರಿ: ಚಿತ್ರನಟ ವಿಷ್ಣುವರ್ಧನ್ ಅವರ 10ನೇ ಪುಣ್ಯಸ್ಮರಣೆ ಹಿನ್ಮೆಲೆಯಲ್ಲಿ ವಿಷ್ಣು ಸೇನಾ ಸಮಿತಿಯಿಂದ ಡಿ.29ರಂದು ನಗರ ಹಾಗೂ ತಾಲೂಕಿನ ಕಮ್ಮರಚೇಡು ಗ್ರಾಮದಲ್ಲಿ ಸಿಂಹಾದ್ರಿ ಸಸ್ಯಾದ್ರಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಡಿ.29ರಂದು...

ಮೈಸೂರಿನ ಬನುಮಯ್ಯ ಸಂಸ್ಥೆಯ ಶತಮಾನೋತ್ಸವಕ್ಕೆ ಚಾಲನೆ

ಮೈಸೂರು: ಧರ್ಮಪ್ರಕಾಶ ಡಿ.ಬನುಮಯ್ಯ ವಿದ್ಯಾಸಂಸ್ಥೆ ಶತಮಾನೋತ್ಸವ ಸಮಾರಂಭವನ್ನು ಶಾಸಕ ಎಸ್.ಎ.ರಾಮದಾಸ್ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಶಾಂತವೀರ...

ಮೊದಲ ಪತ್ನಿ, ಮೂವರು ಮಕ್ಕಳನ್ನು ಮನೆಯಿಂದ ಹೊರದಬ್ಬಿದ ಪತಿ: ಚಳಿಯಲ್ಲೇ ಇಡೀ ರಾತ್ರಿ ಕಳೆದ ಪತ್ನಿ, ಮಕ್ಕಳು

ಬೆಳಗಾವಿ: ಮೊದಲ ಪತ್ನಿ ಹಾಗೂ ಮೂವರು ಮಕ್ಕಳನ್ನು ವ್ಯಕ್ತಿಯೊಬ್ಬ ಮನೆಯಿಂದ ಹೊರಹಾಕಿರುವ ಅಮಾನವೀಯ ಘಟನೆ ಬೆಳಗಾವಿಯ ವೀರಭದ್ರ ನಗರದಲ್ಲಿ ನಡೆದಿದೆ. ರಾಜಾಸಾಬ್ ಕೊಲ್ಲಾಪುರೆ, ಮೊದಲ...

ಚಿತ್ರದುರ್ಗ: ಆರ್ ಒಗಳ ನಿರ್ವಣೆ ಇನ್ನು ಮುಂದೆ ಇಲಾಖೆ ಹೊಣೆ

ಚಿತ್ರದುರ್ಗ: ಶುದ್ಧ ಕುಡಿವ ನೀರು ಘಟಕಗಳ ಹೊಣೆ ಇನ್ನು ಮುಂದೆ ಕುಡಿವ ನೀರು ‌ಮತ್ತು ನೈರ್ಮಲ್ಯ ಇಲಾಖೆಯದ್ದಾಗಿದೆ ಎಂದು ಜಿಪಂ ಸಿಇಒ ಸಿ.ಸತ್ಯಭಾಮ ಹೇಳಿದರು. ಜಿಪಂ ಮಾಸಿಕ...

ಪೌರತ್ವ ತಿದ್ದುಪಡಿ ಮಸೂದೆ ದೇಶದ ಈಶಾನ್ಯ ಭಾಗದ ಜನರ ಮೇಲಿನ ಕ್ರಿಮಿನಲ್​ ದಾಳಿ: ರಾಹುಲ್​ ಗಾಂಧಿ ಟೀಕೆ

ನವದೆಹಲಿ: ದೇಶಾದ್ಯಂತ ತೀವ್ರ ಚರ್ಚೆ ಹುಟ್ಟು ಹಾಕಿರುವ ಪೌರತ್ವ ತಿದ್ದುಪಡಿ ಮಸೂದೆಯನ್ನು ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಟ್ವೀಟ್​ ಮೂಲಕ ಟೀಕಿಸಿದ್ದು, ದೇಶದ...

ಲೋಕೇಶ್ ಸುರತ್ಕಲ್
ಅರ್ಧ ಶತಮಾನದಿಂದ ಭರವಸೆಯಾಗಿಯೇ ಉಳಿದಿರುವ ಚಿತ್ರಾಪುರ ಮೀನುಗಾರಿಕಾ ಜೆಟ್ಟಿ ಯೋಜನೆಗೆ ಕಳೆದ ವರ್ಷ ಶಿಲಾನ್ಯಾಸ ನೆರವೇರಿದ್ದರೂ ಕಾಮಗಾರಿ ಇನ್ನೂ ಆರಂಭವಾಗಿಲ್ಲ. ಟೆಂಡರ್ ಪ್ರಕ್ರಿಯೆ ವಿರುದ್ಧ ಗುತ್ತಿಗೆದಾರರೊಬ್ಬರು ಕೋರ್ಟ್ ಮೆಟ್ಟಿಲೇರಿರು ವುದು ಈ ವಿಳಂಬಕ್ಕೆ ಕಾರಣ.

ಕಳೆದ ಲೋಕಸಭಾ ಚುನಾವಣೆಗೆ ಮೊದಲು ಕೇಂದ್ರ ಸಚಿವ ನಿತಿನ್ ಗಡ್ಕರಿ ದೆಹಲಿಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಜೆಟ್ಟಿ ಕಾಮಗಾರಿಗೆ ಶಿಲಾನ್ಯಾಸ ನೆರವೇರಿಸಿದ್ದರು. ಇನ್ನೇನು ಕಾಮಗಾರಿ ಆರಂಭವಾಗಿಯೇ ಬಿಟ್ಟಿತು ಎಂದು ಮೀನುಗಾರರೂ ನಿಟ್ಟುಸಿರು ಬಿಟ್ಟಿದ್ದರು.

ಡಿಸೆಂಬರ್ ಸುಮಾರಿಗೆ ಯೋಜನೆಗೆ ಟೆಂಡರ್ ಪ್ರಕ್ರಿಯೆಯೂ ಆರಂಂಭಗೊಂಡಿತ್ತು. ಮೊದಲ ಹಂತದಲ್ಲಿ 44.13 ಕೋಟಿ ರೂ.ವೆಚ್ಚದ ಬ್ರೇಕ್ ವಾಟರ್ ಕಾಮಗಾರಿಗೆ ಒಟ್ಟು ಐವರು ಗುತ್ತಿಗೆದಾರರು ಟೆಂಡರ್ ಸಲ್ಲಿಸಿದ್ದರು. ಈ ಪೈಕಿ ಟೆಕ್ನಿಕಲ್ ಬಿಡ್‌ನಲ್ಲಿ ಇಬ್ಬರು ಗುತ್ತಿಗೆದಾರರು ಅನರ್ಹಗೊಂಡಿದ್ದರು. ಇದರ ವಿರುದ್ಧ ಅವರು ಹೈಕೋರ್ಟ್ ಮೆಟ್ಟಿಲೇರಿ ತಡೆಯಾಜ್ಞೆ ತಂದಿದ್ದಾರೆ. ಇಲ್ಲದಿದ್ದಲ್ಲಿ ಈ ವೇಳೆಗೆ ಬ್ರೇಕ್ ವಾಟರ್ ಕಾಮಗಾರಿ ಆರಂಭವಾಗಲಿತ್ತು. ಅರ್ಧ ಬ್ರೇಕ್ ವಾಟರ್ ಕಾಮಗಾರಿ ಬಳಿಕ ಇತರ ಕಾಮಗಾರಿ ಆರಂಭಿಸಲು ಉದ್ದೇಶಿಸಲಾಗಿತ್ತು. ಈಗ ಇಡೀ ಪ್ರಕ್ರಿಯೆಯೇ ವಿಳಂಬವಾಗಿದೆ ಎಂದು ಅಧಿಕಾರಿಯೊಬ್ಬರು ವಿಜಯವಾಣಿಗೆ ತಿಳಿಸಿದರು. ಉಳಿದ ಗುತ್ತಿಗೆದಾರರ ಪೈಕಿ ಒಬ್ಬರು 84 ಕೋಟಿ ರೂ.ಟೆಂಡರ್ ಸಲ್ಲಿಸಿದ್ದಾರೆ. ಅಷ್ಟು ಜಾಸ್ತಿಗೆ ಟೆಂಡರ್ ನಿಗದಿಪಡಿಸುವುದು ಟೆಂಡರ್ ನಿಯಮ ಪ್ರಕಾರ ಕಷ್ಟ ಎಂಬ ಮಾತಿ ಕೇಳಿಬಂದಿದೆ.

1967ರಲ್ಲಿ ನವಮಂಗಳೂರು ಬಂದರು ನಿರ್ಮಾಣಕ್ಕೆ ಅಂದಿನ ಪ್ರಧಾನಿ ಲಾಲ್ ಬಹಾದೂರ್ ಶಾಸ್ತ್ರಿ ಶಿಲಾನ್ಯಾಸ ನೆರವೇರಿಸಿದ್ದರು. 1975ರಲ್ಲಿ ಬಂದರನ್ನು ಉದ್ಘಾಟಿಸಿದ್ದ ಅಂದಿನ ಪ್ರಧಾನಿ ದಿ.ಇಂದಿರಾ ಗಾಂಧಿ, ಬಂದರಿಗೆ ಜಾಗ ನೀಡಿದ್ದ ಮೀನುಗಾರರ ಅನುಕೂಲತೆಗೆ ಮೀನುಗಾರಿಕಾ ಜೆಟ್ಟಿ ನಿರ್ಮಿಸಿಕೊಡುವ ವಾಗ್ದಾನವಿತ್ತಿದ್ದರು. ಮೊದಲಿಗೆ 45 ಕೋಟಿ ರೂ.ಬಳಿಕ 100 ಕೋಟಿಯಷ್ಟಿದ್ದ ಯೋಜನೆ ವೆಚ್ಚ ಈಗ 196.51 ಕೋಟಿ ರೂ.ಆಗಿದೆ. ಈ ಪೈಕಿ ಕೇಂದ್ರ ಸರ್ಕಾರ ಸಾಗರಮಾಲಾ ಯೋಜನೆ ಮೂಲಕ ಶೇ.50,(98.25 ಕೋಟಿ ರೂ.) ಎನ್‌ಎಂಪಿಟಿ ಶೇ.45 (88.43 ಕೋಟಿ ರೂ.), ರಾಜ್ಯ ಸರ್ಕಾರ ಶೆ.5(9.83 ಕೋಟಿ ರೂ.) ನೀಡಲಿದೆೆ.

 ಟೆಂಡರ್ ಪ್ರಕ್ರಿಯೆ ಬಳಿಕ ಅಕ್ಟೋಬರ್‌ನಲ್ಲಿ ಬ್ರೇಕ್ ವಾಟರ್ ಕಾಮಗಾರಿ ಆರಂಭವಾಗಲಿದೆ. ಜೆಟ್ಟಿ ನಿರ್ಮಾಣವಾಗದೆ ಮೀನುಗಾರರು ಮಳೆಗಾಲದಲ್ಲಿ ಸಂಕಷ್ಟ ಎದುರಿಸುತ್ತಿದ್ದಾರೆ. ಬೇಗನೆ ಕಾಮಗಾರಿ ಆರಂಭಕ್ಕೆ ಸಂಬಂಧಪಟ್ಟವರು ಕ್ರಮ ತೆಗೆದುಕೊಳ್ಳಬೇಕು.
ವಾಸುದೇವ ಬಿ.ಕೆ. ಅಧ್ಯಕ್ಷ, ಮಂಗಳೂರು ವಲಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಸಂಘ 

Stay connected

278,741FansLike
587FollowersFollow
623,000SubscribersSubscribe

ವಿಡಿಯೋ ನ್ಯೂಸ್

VIDEO: ಮರದ ಮೇಲಿದ್ದ ಹಾವನ್ನು ಜಂಪ್​ ಮಾಡಿದ ಹಿಡಿದ ಮುಂಗುಸಿ;...

ಬಳ್ಳಾರಿ: ಹಾವು-ಮುಂಗುಸಿ ಫೈಟ್​ ಹೊಸದಲ್ಲ. ಈಗಾಗಲೇ ಅದೆಷ್ಟೋ ದೃಶ್ಯಗಳನ್ನು ನೋಡಿರುತ್ತೇವೆ. ಆದರೆ ಇಲ್ಲೊಂದು ಮುಂಗುಸಿ ಹಾವನ್ನು ಹಿಡಿದ ಪರಿ ನೋಡಿದರೆ ಒಂದು ಕ್ಷಣ ಮೈ ಜುಂ ಎನ್ನುತ್ತದೆ. ಹಾವಿನ ಮೇಲೆ ಸುಮ್ಮನೆ ಕುಳಿತಿದ್ದ ಮಾರುದ್ದ...

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...