More

    ಸಮಸ್ಯೆಗಳಿಗೆ ಧ್ವನಿಯಾಗಲು ರೈತಬಣ ಅಸ್ತಿತ್ವ

    ರಾಮನಗರ: ರೈತರ ಸಮಸ್ಯೆಗಳನ್ನು ಬಗೆಹರಿಸುವಲ್ಲಿ ಎಲ್ಲ ಸರ್ಕಾರಗಳೂ ವಿಫಲವಾಗಿವೆ ಎಂದು ರಾಜ್ಯ ರೈತ ಸಂಘ ರೈತ ಬಣದ ರಾಜ್ಯಾಧ್ಯಕ್ಷ ಇ.ಎನ್. ಕೃಷ್ಣ ಆರೋಪಿಸಿದರು.

    ನಗರದಲ್ಲಿ ಸೋಮವಾರ ನಡೆದ ರೈತ ಬಣದ ಜಿಲ್ಲಾ ಮತ್ತು ತಾಲೂಕು ಘಟಕಗಳಿಗೆ ಪದಾಧಿಕಾರಿಗಳನ್ನು ನೇಮಕ ಮಾಡಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.

    ಜಿಲ್ಲೆಯಲ್ಲಿ ಪ್ರಮುಖ ಬೆಳೆ ರೇಷ್ಮೆಗೆ ಸೂಕ್ತ ಬೆಲೆ ಇಲ್ಲ, ಜಿಲ್ಲಾ ಕೇಂದ್ರದಲ್ಲಿ ಅಧಿಕಾರಿಗಳ ಜಿಡ್ಡುತನದ ಫಲವಾಗಿ ರೈತರ ಸಮಸ್ಯೆಗಳು ಬಗೆಹರಿಯುತ್ತಿಲ್ಲ, ಬಿಡದಿಯಲ್ಲಿ ಅಕ್ರಮ ಗಣಿಗಾರಿಕೆ ನಡೆಯುತ್ತಿದ್ದರೂ ಅಧಿಕಾರಿಗಳು ಮತ್ತು ಚುನಾಯಿತ ಪ್ರತಿನಿಧಿಗಳು ಕಣ್ಣುಮುಚ್ಚಿ ಕುಳಿತಿದ್ದಾರೆ. ಇವೆಲ್ಲವುಗಳ ವಿರುದ್ಧ ಧ್ವನಿಯಾಗುವ ನಿಟ್ಟಿನಲ್ಲಿ ರೈತ ಬಣವನ್ನು ಅಸ್ತಿತ್ವಕ್ಕೆ ತರಲಾಗಿದೆ. ಕೃಷಿ ಪಂಪ್​ಸೆಟ್​ಗಳಿಗೆ ಮೀಟರ್ ಅಳವಡಿಸುವ ಬದಲು ರೈತರ ಬೆಳೆಗಳಿಗೆ ಸೂಕ್ತ ಬೆಲೆ ನಿಗದಿ ಮಾಡಲಿ ಎಂದು ಆಗ್ರಹಿಸಿದರು.

    ಡಿ.5 ರಂದು ವಾಟಾಳ್ ನಾಗರಾಜು ನೇತೃತ್ವದಲ್ಲಿ ಕರೆ ನೀಡಿರುವ ಕರ್ನಾಟಕ ಬಂದ್​ಗೆ ರೈತಬಣ ಬೆಂಬಲ ನೀಡಲಿದೆ ಎಂದರು.

    ಸುದ್ದಿಗೋಷ್ಠಿಯಲ್ಲಿ ರಾಜ್ಯ ಘಟಕದ ಉಪಾಧ್ಯಕ್ಷ ಎಂ.ಮಂಜು, ಹೆಮ್ಮಿಗೆ ಚಂದ್ರಶೇಖರ್, ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಾರಾಯಣಸ್ವಾಮಿ, ಉಪಾಧ್ಯಕ್ಷೆ ಲಲಿತಾ ಸಿದ್ದರಾಜು, ಕಾರ್ಯದರ್ಶಿ ಯಶೋದಮ್ಮ, ಮೈಸೂರು ಜಿಲ್ಲಾ ಅಧ್ಯಕ್ಷ ಕೃಷ್ಟರಾಜ ಅರಸು ಮತ್ತಿತರರು ಇದ್ದರು.

    ಜಿಲ್ಲಾ ಘಟಕದ ಪದಾಧಿಕಾರಿಗಳು

    ರಾಜ್ಯ ರೈತ ಸಂಘ ರೈತ ಬಣದ ಜಿಲ್ಲಾಧ್ಯಕ್ಷರಾಗಿ ಪಿ.ಎಂ.ರವಿ, ಉಪಾಧ್ಯಕ್ಷರಾಗಿ ಬಿ.ಎಂ. ಶಿವಲಿಂಗಯ್ಯ, ಕಾರ್ಯದರ್ಶಿಯಾಗಿ ಬಿ.ಶಿವರಾಜು, ಖಜಾಂಚಿ ನಾಗೇಶ್ ಹಾಗೂ ಮಹಿಳಾ ಘಟಕದ ಅಧ್ಯಕ್ಷೆ ಗೀತಾ ನಾರಾಯಣಸ್ವಾಮಿ ನೇಮಕಗೊಂಡಿದ್ದಾರೆ.

    ಪ್ರಾಮಾಣಿಕವಾಗಿ ನನ್ನ ಜವಾಬ್ದಾರಿ ನಿರ್ವಹಿಸುವ ಮೂಲಕ ಸಂಘದ ಆಶಯಗಳನ್ನು ಈಡೇರಿಸುತ್ತೇನೆ. ನಾಲ್ಕು ತಾಲೂಕುಗಳ ಸಮಿತಿಗಳನ್ನು ವಿಶ್ವಾಸಕ್ಕೆ ಪಡೆದು ರೈತ ಬಣದ ಘನತೆ ಹೆಚ್ಚುವಂತೆ ಮಾಡುತ್ತೇನೆ.

    | ಪಿ.ಎಂ.ರವಿ ಜಿಲ್ಲಾಧ್ಯಕ್ಷ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts