More

  ಜಿಲ್ಲಾ ಮಟ್ಟದ ಮೇಲಾಟಗಳ ಕ್ರೀಡಾಕೂಟಕ್ಕೆ ಚಾಲನೆ

  ವಿಜಯಪುರ: ನಗರದ ಡಾ.ಬಿ.ಆರ್. ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ 2023-24 ನೇ ಸಾಲಿಗಾಗಿ ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಹಾಗೂ ಬಿಡಿಈ ಸಂಸ್ಥೆಯ ಪಿಡಿಜೆ ಪದವಿ ಪೂರ್ವ ಕಾಲೇಜುಗಳ ಸಂಯುಕ್ತ ಆಶ್ರಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಜಿಲ್ಲಾ ಮಟ್ಟದ ಪದವಿ ಪೂರ್ವ ಕಾಲೇಜುಗಳ ಮೇಲಾಟಗಳ ಕ್ರೀಡಾಕೂಟವನ್ನು ಪಪೂ ಉಪನಿರ್ದೇಶಕ ಡಾ.ಸಿ.ಕೆ. ಹೊಸಮನಿ ಉದ್ಘಾಟಿಸಿದರು.

  ಯುವಜನ ಸೇವಾ ಹಾಗೂ ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಎಸ್.ಜಿ. ಲೋಣಿ ಕ್ರೀಡಾಕೂಟಗಳ ಕುರಿತು ವಿವರಿಸಿದರು. ಬಿಡಿಈ ಸಂಸ್ಥೆಯ ಅಧ್ಯಕ್ಷ ಕೆ.ಬಿ. ಕುಲಕರ್ಣಿ ಅಧ್ಯಕ್ಷತೆ ವಹಿಸಿದ್ದರು. ಸಂಸ್ಥೆಯ ಉಪಾಧ್ಯಕ್ಷ ಎ.ಡಿ. ದೇಶಪಾಂಡೆ, ಜಂಟಿ ಕಾರ್ಯದರ್ಶಿ ಆರ್.ಪಿ. ಚಿಕ್ಕಲಕಿ, ನಿರ್ದೇಶಕ ಕೆ.ಎಸ್. ಗಲಗಲಿ, ರಾಜ್ಯ ಶಿಕ್ಷಕ ಪ್ರಶಸ್ತಿ ಪುರಸ್ಕೃತ ನಿವೃತ್ತ ದೈಹಿಕ ಶಿಕ್ಷಕ ಆರ್.ಆರ್. ಕುಲಕರ್ಣಿ, ದೈಹಿಕ ಶಿಕ್ಷಣ ಉಪನ್ಯಾಸಕರ ಸಂಘದ ಅಧ್ಯಕ್ಷ ಎಸ್.ಬಿ.ಗೊಗಿ, ಪಿ.ಟಿ. ಕೊಟ್ನಿಸ್ ಮತ್ತಿತರರಿದ್ದರು.

  ನಾಗೇಶ ಡೋಣೂರ ನಾಡಗೀತೆ ಪ್ರಸ್ತುತ ಪಡಿಸಿದರು. ವಿದ್ಯಾರ್ಥಿ-ವಿದ್ಯಾರ್ಥಿನಿಯರು ಭಗವದ್ಗೀತಾ ಪಠಣ ಹಾಗೂ ಸ್ವಾಗತ ಗೀತೆಯನ್ನು ಪ್ರಸ್ತುತಪಡಿಸಿದರು. ಪ್ರಾಚಾರ್ಯೆ ಡಿ.ಕೆ. ಕುಲಕರ್ಣಿ ಸ್ವಾಗತಿಸಿದರು. ಎಸ್.ವಿ. ಕುಲಕರ್ಣಿ ವಂದಿಸಿದರು. ಎಸ್.ಕೆ. ಕನಮಡಿ, ಸಂತೋಷ ಹೆಗಡೆ, ಆರ್.ಆರ್. ರೋಹಿಡೆಕರ ನಿರೂಪಿಸಿದರು.

  ರಾಜ್ಯೋತ್ಸವ ರಸಪ್ರಶ್ನೆ - 21

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts