ಕುಳೂರು ಸರ್ಕಾರಿ ಶಾಲೆಯಲ್ಲಿ ಮೆರವಣಿಗೆ

New Project (8)
Published on

ಕಾಸರಗೋಡು: ಕುಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲಾ ಪ್ರವೇಶೋತ್ಸವ ಪ್ರೀ ಪ್ರೈಮರಿ ವಿಭಾಗದ ದತ್ತು ಸ್ವೀಕಾರದೊಂದಿಗೆ ನಡೆಯಿತು. ಹೊಸದಾಗಿ ಸೇರ್ಪಡೆಗೊಂಡ ಮಕ್ಕಳನ್ನು ಆಕರ್ಷಕ ಮೆರವಣಿಗೆ ಮೂಲಕ ಬರಮಾಡಿಕೊಳ್ಳಲಾಯಿತು.

ಗ್ರಾ.ಪಂ. ಸದಸ್ಯ ಜನಾರ್ದನ ಪೂಜಾರಿ ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಜಯರಾಜ್ ಶೆಟ್ಟಿ ಚಾರ್ಲ ಅಧ್ಯಕ್ಷತೆ ವಹಿಸಿದ್ದರು. ಮೀಂಜ ಗ್ರಾ.ಪಂ. ಸ್ಥಾಯಿ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ. ಇದ್ದರು.

ಉದ್ಯಮಿ ಡಾ.ಸದಾಶಿವ ಕೆ.ಶೆಟ್ಟಿ ಕುಳೂರು ಕನ್ಯಾನ ಅವರನ್ನು ಸನ್ಮಾನಿಸಲಾಯಿತು. ರಾಜ್ಯ ಪ್ರಶಸ್ತಿ ಪಡೆದ ವಿಶಾಲಾಕ್ಷಿ ದೈಗೋಳಿ ಹಾಗೂ ಎಲ್ಲೆಸ್ಸೆಸ್ ಪರೀಕ್ಷೆಯಲ್ಲಿ ಉತ್ತೀರ್ಣರಾದ ಹನ್ವಿಕಾ ಅವರನ್ನು ಅಭಿನಂದಿಸಲಾಯಿತು. ಮಜಿಬೈಲ್ ಸಹಕಾರಿ ಬ್ಯಾಂಕ್ ವತಿಯಿಂದ ಮಕ್ಕಳಿಗೆ ಬ್ಯಾಗ್, ಮುಂಬೈ ಉದ್ಯಮಿ ಮೋಹನ್ ಶೆಟ್ಟಿ ಕೊಡುಗೆಯಾಗಿ ನೀಡಿದ ಸಮವಸ ಹಾಗೂ ಶಾಲಾ ಶಿಕ್ಷಕ ವೃಂದ ನೀಡಿದ ಕಲಿಕೋಪಕರಣಗಳನ್ನು ವಿತರಿಸಲಾಯಿತು. ಹಳೇ ವಿದ್ಯಾರ್ಥಿ ಸಂದ ಅಧ್ಯಕ್ಷ ಮೊಹಮ್ಮದ್ ಕಂಚಿಲ, ಉಪಾಧ್ಯಕ್ಷ ಬಾಲಕೃಷ್ಣ ಶೆಟ್ಟಿ ಪೊಯ್ಯೇಲು ಮೊದಲಾದವರಿದ್ದರ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net