More

    ಶೋಭಾಯಾತ್ರೆ, ಮಾರ್ಗ ಬದಲಾವಣೆ

    ಚಿತ್ರದುರ್ಗ: ಶೋಭಾಯಾತ್ರೆ ಹಿನ್ನೆಲೆಯಲ್ಲಿ ನಗರಾದ್ಯಂತ ರಸ್ತೆ ಸಂಚಾರ ಮಾರ್ಗ ಬದಲಿಸಿ ಜಿಲ್ಲಾಧಿಕಾರಿ ಜಿ.ಆರ್.ಜೆ.ದಿವ್ಯಾಪ್ರಭು ಆದೇಶ ಹೊರಡಿಸಿದ್ದಾರೆ.

    ಸುಗಮ ಸಂಚಾರ ದೃಷ್ಟಿಯಿಂದ ಅಂದು ಬೆಳಗ್ಗೆ 6ರಿಂದ ರಾತ್ರಿ 12ರ ವರೆಗೆ ನಗರದ ಮುಖ್ಯರಸ್ತೆ, ಇತರ ಮಾರ್ಗಗಳಲ್ಲಿ ಸಂಚರಿಸಲಿರುವ ವಾಹನಗಳನ್ನು ಬದಲಿ ಮಾರ್ಗದಲ್ಲಿ ಸಂಚರಿಸಲು ಆದೇಶಿಸಿದ್ದಾರೆ.

    ಬಿ.ಡಿ.ರಸ್ತೆ, ಹೊಳಲ್ಕೆರೆ ರಸ್ತೆ ಮಾರ್ಗವಾಗಿ ಶೋಭಾಯಾತ್ರೆ ಸಾಗಲಿದ್ದು, ಜನದಟ್ಟಣೆ ಹೆಚ್ಚಾಗಲಿದೆ. ಹೀಗಾಗಿ ಬದಲಿ ಮಾರ್ಗದಲ್ಲಿ ಸಂಚರಿಸಬೇಕು. ನಗರದ ಚಳ್ಳಕೆರೆ ಗೇಟ್‌ನಿಂದ ಮಹಾತ್ಮಗಾಂಧಿ ವೃತ್ತ, ಹೊಳಲ್ಕೆರೆ ಮಾರ್ಗದ ಕಣಿವೆ ಕ್ರಾಸ್‌ವರೆಗೆ ಎಲ್ಲ ಮಾದರಿಯ ವಾಹನಗಳ ಸಂಚಾರ ನಿಷೇಧಿಸಲಾಗಿದೆ.

    ಬೆಂಗಳೂರು, ಚಳ್ಳಕರೆ, ಹೊಸಪೇಟೆ, ದಾವಣಗೆರೆ, ಶಿವಮೊಗ್ಗ, ಭೀಮಸಮುದ್ರ ಕಡೆಯಿಂದ ಬರುವ ಎಲ್ಲ ವಾಹನಗಳು, ರಾಷ್ಟ್ರೀಯ ಹೆದ್ದಾರಿ 48 ರಸ್ತೆಯ ಮೂಲಕ ಮೆದೇಹಳ್ಳಿ ರಸ್ತೆ, ಜೆಎಂಐಟಿ ವೃತ್ತದ ಮೂಲಕ ನಗರಕ್ಕೆ ಬಂದು ಅದೇ ಮಾರ್ಗದಲ್ಲಿ ವಾಪಸ್ ಸಂಚರಿಸುವಂತೆ ಆದೇಶಿಸಿದ್ದಾರೆ.

    ಮದ್ಯ ಮಾರಾಟ ನಿಷೇಧ: ಶೋಭಾಯಾತ್ರೆ ಸಂಬಂಧ ಅ.8ರ ಬೆಳಗ್ಗೆ 6ರಿಂದ ಮಧ್ಯರಾತ್ರಿ 12ರ ವರೆಗೆ ಚಿತ್ರದುರ್ಗ ನಗರ, ಸುತ್ತಮುತ್ತಲಿನ 10 ಕಿ.ಮೀ. ವ್ಯಾಪ್ತಿಯಲ್ಲಿ ಮದ್ಯ ಮಾರಾಟ ಸಂಪೂರ್ಣ ನಿಷೇಧಿಸಲಾಗಿದೆ ಎಂದು ಡಿಸಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts