More

  ಮಾದನಬಾವಿಯಲ್ಲಿ ವಿಜೃಂಭಣೆಯ ಪಲ್ಲಕ್ಕಿ ಉತ್ಸವ

  ನ್ಯಾಮತಿ: ತಾಲೂಕಿನ ಮಾದನಬಾವಿ ಗ್ರಾಮದ ಮಾಧವ ಶ್ರೀ ರಂಗನಾಥಸ್ವಾಮಿ, ಶ್ರೀ ಬೀರಲಿಂಗೇಶ್ವರಸ್ವಾಮಿ, ಮುರಡೇಶ್ವರಸ್ವಾಮಿ ಉತ್ಸವ ಮೂರ್ತಿಗಳ ಭವ್ಯ ಮೆರವಣಿಗೆ ಗುರುವಾರ ವಿಜೃಂಭಣೆಯಿಂದ ನಡೆಯಿತು.

  ಬೆಳಗ್ಗೆ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿದ ಅಲಂಕೃತ ಪಲ್ಲಕ್ಕಿಯನ್ನು ಹೊತ್ತ ಭಕ್ತರು ಡೊಳ್ಳು, ಭಜನೆ, ಕಹಳೆ, ಮಂಗಳ ವಾದ್ಯಗಳೊಂದಿಗೆ ಮಾದನಬಾವಿಯಿಂದ ಬಸವನಹಳ್ಳಿ ಮೂಲಕ ತುಂಗಭದ್ರಾ ನದಿವರೆಗೂ ಪಾದಯಾತ್ರೆ ನಡೆಸಿದರು.

  ತುಂಗಭದ್ರಾ ನದಿಯ ಮಧ್ಯ ಭಾಗದ ನಡುಗಡ್ಡೆಯಲ್ಲಿ ಉತ್ಸವ ಮೂರ್ತಿಗಳಿಗೆ ಭಕ್ತರು ಪಂಚಾಮೃತ ಸಹಿತ ರುದ್ರಾಭಿಷೇಕ, ಬಿಲ್ವಾರ್ಚನೆ, ಮಂಗಳಾರತಿ ನಡೆಸಿದ ಬಳಿಕ ಶ್ರೀಗಡ್ಡೆ ರಾಮೇಶ್ವರ, ಶ್ರೀ ದುರ್ಗಾದೇವಿ, ಶ್ರೀ ಸದ್ಗುರು ಶಿವಯೋಗಿ ಹಾಲಸ್ವಾಮೀಜಿ ಮಠದ ಮೂಲಗದ್ದುಗೆಗೆ ಪೂಜೆ ಸಲ್ಲಿಸಿದರು.

  ಅಲ್ಲಿ ವಿವಿಧ ಧಾರ್ಮಿಕ ಪೂಜಾ ಕೈಂಕರ್ಯಗಳು ನಡೆದ ಬಳಿಕ ಪುನಃ ಅಲಂಕೃತಗೊಂಡ ಪಲ್ಲಕ್ಕಿಯಲ್ಲಿ ಉತ್ಸವ ಮೂರ್ತಿಗಳನ್ನು ಪ್ರತಿಷ್ಠಾಪಿಸಿ ತುಂಗಾಭದ್ರಾ ನದಿಯಿಂದ ಸಕಲ ವಾದ್ಯ ಮೇಳಗಳೊಂದಿಗೆ ಪಲ್ಲಕ್ಕಿ ಹೊತ್ತ ಭಕ್ತರು ಬಸವನಹಳ್ಳಿ ಮೂಲಕ ಮಾದನಬಾವಿ ಶ್ರೀ ವೀರಭದ್ರೇಶ್ವರ ಸ್ವಾಮಿ ದೇಗುಲ ತಲುಪಿದರು. ಅಲ್ಲಿ ಪೂಜೆ ಸಲ್ಲಿಸಿದ ಬಳಿಕ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿ ನಡೆಸಿದರು.

  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಉಮಾಪ್ರಶಾಂತ್ ಉತ್ಸವದ ಹಿನ್ನೆಲೆಯಲ್ಲಿ ಒಂದುವಾರ ಮೊದಲೇ ಶಾಂತಿ ಸಭೆ ನಡೆಸಿದ್ದರು. ಮುಂಜಾಗ್ರತಾ ಕ್ರಮವಾಗಿ ಚನ್ನಗಿರಿ ಡಿವೈಎಸ್‌ಪಿ ಪ್ರಶಾಂತ ಮುನ್ನೋಳಿ, ಪಿಐ ಎನ್.ಎಸ್. ರವಿ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿತ್ತು.

  ಮೆರವಣಿಗೆ ಶಾಂತಿಯುತವಾಗಿ ನಡೆಯಿತು. ಹತ್ತಾರು ಟ್ರಾೃಕ್ಟರ್‌ಗಳಲ್ಲಿ ನೂರಾರು ಮಂದಿ ಮೆರವಣಿಗೆಯಲ್ಲಿ ಸಾಗಿದರು.

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts