ಕೃಷ್ಣ, ರಾಧೆಯರ ಮೆರವಣಿಗೆ

janmashtami
ಹೆಬ್ರಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಆಚರಿಸಿದ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದಲ್ಲಿ ಕಾರ್ಯದರ್ಶಿ ಸಪ್ನಾ.ಎನ್.ಶೆಟ್ಟಿ ಮಗುವನ್ನು ತೊಟ್ಟಿಲಲ್ಲಿ ಹಾಕಿ ತೂಗಿದರು.
Published on

ಹೆಬ್ರಿ: ಹೆಬ್ರಿ ಎಸ್.ಆರ್ ಸಮೂಹ ಶಿಕ್ಷಣ ಸಂಸ್ಥೆಯಲ್ಲಿ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮವನ್ನು ಸಂಸ್ಥೆ ಅಧ್ಯಕ್ಷ ಎಚ್.ನಾಗರಾಜ್ ಶೆಟ್ಟಿ ಹಾಗೂ ಕಾರ್ಯದರ್ಶಿ ಸಪ್ನಾ ಎನ್.ಶೆಟ್ಟಿ ಉದ್ಘಾಟಿಸಿದರು.

ಕೃಷ್ಣ, ರಾಧೆ ವೇಷಧಾರಿ ಪುಟಾಣಿಗಳ ಮೆರವಣಿಗೆ ನಡೆಯಿತು. ವಿಶೇಷ ಆಕರ್ಷಣೆಯಾಗಿ ಮಗುವನ್ನು ತೊಟ್ಟಿಲಲ್ಲಿ ಹಾಕಿ ತೂಗಿ ಸಂಭ್ರಮಿಸಿದರು. ವಿದ್ಯಾರ್ಥಿಗಳಿಂದ ಕೃಷ್ಣನ ಲೀಲೆ ಬಣ್ಣಿಸುವ ವಿವಿಧ ನೃತ್ಯ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪಂಚಕಜ್ಜಾಯ ವಿತರಣೆ ನಡೆಯಿತು.

ಎಸ್.ಆರ್ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಪ್ರಶಾಂತ್, ಉಪಪ್ರಾಂಶುಪಾಲ ಗುರುಪ್ರಸಾದ್, ಎಸ್.ಆರ್. ಪಬ್ಲಿಕ್ ಸ್ಕೂಲ್ ಪ್ರಾಂಶುಪಾಲೆ ಭಗವತಿ, ಉಪಪ್ರಾಂಶುಪಾಲ ದೀಪಕ್ ಎನ್., ಎಸ್.ಆರ್ ಆಂಗ್ಲ ಮಾಧ್ಯಮ ಪ್ರೌಢಶಾಲೆ ಮುಖ್ಯಶಿಕ್ಷಕ ಗೋಪಾಲ ಆಚಾರ್ಯ, ಸಂಸ್ಥೆಯ ಶಿಕ್ಷಕರು, ಉಪನ್ಯಾಸಕರು, ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಶಿಕ್ಷಕಿ ಹೇಮಾ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net