

ಬಂಟ್ವಾಳ: ನರೇಂದ್ರ ಮೋದಿ ಪ್ರಧಾನಿಯಾದ ಮೇಲೆ ಈ ದೇಶದ ಸಂವಿಧಾನವನ್ನು ಮೂಲೆಗೆ ಸರಿಸಿದೆ. ಪ್ರಜಾಪ್ರಭುತ್ವ ಮೌಲ್ಯವನ್ನು ಗಾಳಿಗೆ ತೂರಲಾಗಿದೆ. ಚುನಾವಣೆ ಗೆಲ್ಲಬೇಕೆಂಬುದು ಒಂದೇ ಆಶಯ ಬಿಜೆಪಿಯವರದ್ದಾಗಿದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ಹೇಳಿದರು. ಮತಗಳ್ಳತನ ವಿರುದ್ಧ ಜನಜಾಗೃತಿ ಹೋರಾಟಕ್ಕೆ ಬೆಂಬಲವಾಗಿ ಯುವ ಕಾಂಗ್ರೆಸ್ ಬಂಟ್ವಾಳ ವಿಧಾನಸಭಾ ಸಮಿತಿ, ಬಂಟ್ವಾಳ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಆಶ್ರಯದಲ್ಲಿ ಬಿ.ಸಿ.ರೋಡ್ನಲ್ಲಿ ಆಯೋಜಿಸಲಾದ ಬೃಹತ್ ಪಂಜಿನ ಮೆರವಣಿಗೆಯಲ್ಲಿ ಮಾತನಾಡಿದರು. ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ, ಈ ದೇಶದ ಆರ್ಥಿಕ ಸ್ಥಿತಿಗತಿಯನ್ನು ಗಮನದಲ್ಲಿಟ್ಟುಕೊಂಡು ದೇಶವನ್ನು ಮುನ್ನಡೆಸಿದ ಕೀರ್ತಿ ಮನಮೋಹನ್ ಸಿಂಗ್ ಅವರಿಗೆ ಸಲ್ಲುತ್ತದೆ. ಅವರ ಅಧಿಕಾರಾವಧಿಯಲ್ಲಿ ಬ್ಯಾಂಕ್ಗಳು ದಿವಾಳಿಯಾಗಿಲ್ಲ ಎಂದು ತಿಳಿಸಿದರು. ಬೀಜ ಮತ್ತು ಸಾವಯವ ಪ್ರಾಧಿಕಾರ ಅಧ್ಯಕ್ಷೆ ಲಾವಣ್ಯ ಬಲ್ಲಾಳ್, ಕರಾವಳಿ ಪ್ರಾಧಿಕಾರ ಅಧ್ಯಕ್ಷ ಎಂ.ಎ.ಗಪೂರ್, ಪಕ್ಷದ ಪ್ರಮುಖರಾದ ಬಾಲಕೃಷ್ಣ ಅಂಚನ್, ಚಂದ್ರಶೇಖರ್ ಭಂಡಾರಿ, ಇಬ್ರಾಹಿಂ ನವಾಜ್, ಎಂ.ಎಸ್.ಮಹಮ್ಮದ್, ಚಂದ್ರಪ್ರಕಾಶ್ ಶೆಟ್ಟಿ, ಪಿಯೂಸ್ ಎಲ್.ರೋಡ್ರಿಗಸ್, ಪದ್ಮಶೇಖರ್ ಜೈನ್, ವಾಸು ಪೂಜಾರಿ, ಬೇಬಿ ಕುಂದರ್, ಅಬ್ಬಾಸ್ ಅಲಿ, ಐಡಾ ಸುರೇಶ್, ಸುದೀಪ್ ಕುಮಾರ್ ಶೆಟ್ಟಿ, ಪ್ರಜ್ವಲ್ ಶೆಟ್ಟಿ, ವಿನಯ್ ಕುಮಾರ್ ಸಿಂಧ್ಯಾ, ಚಂದ್ರಶೇಖರ ಪೂಜಾರಿ ಮತ್ತಿತರರು ಭಾಗವಹಿಸಿದ್ದರು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಶೇಖರ್ ಭಂಡಾರಿ ಸ್ವಾಗತಿಸಿದರು. ಬಾಲಕೃಷ್ಣ ಆಳ್ವ ಕೋಡಾಜೆ ಕಾರ್ಯಕ್ರಮ ನಿರೂಪಿಸಿದರು.
ಮಾತು ಮಾತಿಗೂ ಹಿಂದುಗಳು ಎನ್ನುವ ಬಿಜೆಪಿಗರು ಶೋಷಿತ ವರ್ಗದ ಸ್ವಾಮೀಜಿಗಳನ್ನು ಕರೆಸಿ ಪೂಜೆ ಮಾಡಿಸಬೇಕು. ಅವರಿಗೆ ಓಟ್ ಮಾತ್ರ ಬೇಕು. ಸತ್ಯವನ್ನು ಮಾತನಾಡನಾಡಲು ರಾಹುಲ್ ಗಾಂಧಿ ಪ್ರಾಮಾಣಿಕ ಪ್ರಯತ್ನ ಮಾಡುತ್ತಿದ್ದಾರೆ. ನೀವು ಮಾತನಾಡಲು ಭಯಪಡಬೇಡಿ. ಸಂತೋಷ್ ಲಾಡ್ ಕಾರ್ಮಿಕ ಸಚಿವ