ಘೋಷಣೆ ಕೂಗಿದವರ ಶಿಕ್ಷಿಸಿ

blank

ಬೆಳಗಾವಿ: ವಿಧಾನಸಭಾ ಚುನಾವಣೆ ಲಿತಾಂಶ ದಿನ ಆರ್‌ಪಿಡಿ ವೃತ್ತದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಬಿಜೆಪಿ ರಾಜ್ಯ ವಕ್ತಾರ ಎಂ.ಬಿ. ಝಿರಲಿ ಒತ್ತಾಯಿಸಿದರು.

blank

ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಾಮಾಜಿಕ ಜಾಲತಾಣದಲ್ಲಿ ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ ವಿಡಿಯೋ ಹರಿದಾಡುತ್ತಿದೆ. ಘೋಷಣೆ ಕೂಗಿದ ಕಿಡಿಗೇಡಿಗಳ ವಿರುದ್ಧ ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು. ಬೆಳಗಾವಿ ಜಿಲ್ಲೆಯಲ್ಲಿ ಬಿಜೆಪಿ ಅಭ್ಯರ್ಥಿಗಳ ಸೋಲಿಗೆ ಎಲ್ಲ ನಾಯಕರು ಹೊಣೆ ಹೊತ್ತುಕೊಂಡಿದ್ದಾರೆ. ಈ ಕುರಿತು ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ. ಬೆಳಗಾವಿ ಉತ್ತರ ಕ್ಷೇತ್ರದಲ್ಲಿ ಕಾರ್ಯಕರ್ತರು ಬಹಳಷ್ಟು ಶ್ರಮವಹಿಸಿ ಕೆಲಸ ಮಾಡಿದ್ದಾರೆ. ನಾಯಕರಿಂದ ಬಿಜೆಪಿಗೆ ಸೋಲಾಗಿದೆ ಎನ್ನುವುದು ಹಾಗೂ ಲಿಂಗಾಯತರನ್ನು ಕಡೆಗಣಿಸಿದ್ದಾರೆಂಬ ಕಾರಣಕ್ಕೆ ಬಿಜೆಪಿಗೆ ಸೋಲಾಗಿದೆ ಎನ್ನುವುದು ಸುಳ್ಳು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಕಾಂಗ್ರೆಸ್ ಹಾಗೂ ಬಿಜೆಪಿ ಶಾಸಕರಿಗೆ ಅಭಿನಂದನೆಗಳು. ರಾಜ್ಯದ ಅಭಿವೃದ್ಧಿಗೆ ಕೇಂದ್ರ ಸರ್ಕಾರ ಯಾವುದೇ ತಾರತಮ್ಯ ಮಾಡುವುದಿಲ್ಲ. ಚುನಾವಣೆಯಲ್ಲಿ ಸಹಕರಿಸಿದ ಎಲ್ಲ ಬಿಜೆಪಿ ಕಾರ್ಯಕರ್ತರ ಸೇವೆ ಶ್ಲಾಘನೀಯವಾಗಿದೆ ಎಂದರು.

ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಸೋಲಿನಿಂದ ಲೋಕಸಭಾ ಚುನಾವಣೆ ನಿರ್ಧರಿಸಲು ಸಾಧ್ಯವಿಲ್ಲ. ವಿಧಾನಸಭಾ ಚುನಾವಣೆಯಲ್ಲಿ ಸೋಲಾಗಿರುವುದನ್ನು ಒಪ್ಪಿಕೊಂಡಿದ್ದೇವೆ. ಈ ಕುರಿತು ರಾಜ್ಯಮಟ್ಟದಲ್ಲಿ ಆತ್ಮಾವಲೋಕನ ಮಾಡಿಕೊಳ್ಳುತ್ತೇವೆ ಎಂದರು. ಬೆಳಗಾವಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಅನಿಲ ಬೆನಕೆ, ಗ್ರಾಮೀಣ ಜಿಲ್ಲಾಧ್ಯಕ್ಷ ಸಂಜಯ ಪಾಟೀಲ, ಸಂಸದೆ ಮಂಗಲ ಅಂಗಡಿ, ಸಿದ್ದನಗೌಡ ಪಾಟೀಲ, ಶರತ್ ಪಾಟೀಲ ಸುದ್ದಿಗೋಷ್ಠಿಯಲ್ಲಿದ್ದರು.

Share This Article
blank

ನಿಮ್ಮ ಬೆಳಿಗ್ಗೆಯನ್ನು ಹೀಗೆ ಆರಂಭಿಸಿ.. ಈ ಅಭ್ಯಾಸಗಳು ನಿಮ್ಮ ಜೀವನವನ್ನು ಬದಲಾಯಿಸುತ್ತವೆ..! healthy morning

healthy morning: ನಾವು ನಮ್ಮ ಬೆಳಿಗ್ಗೆಯನ್ನು ಹೇಗೆ ಪ್ರಾರಂಭಿಸುತ್ತೇವೆ ಎಂಬುದು ದಿನವಿಡೀ ನಮ್ಮ ಆಲೋಚನೆಗಳು ಮತ್ತು…

ತುಪ್ಪ ತಿನ್ನೋದರಿಂದ ದಪ್ಪಾ ಆಗ್ತಾರಾ? ಯಾವ ಸಮಯದಲ್ಲಿ ಸೇವಿಸುವುದು ಬೆಸ್ಟ್​, ಇಲ್ಲಿದೆ ಉತ್ತರ | Ghee

Ghee Benefits: ತುಪ್ಪ ಬಹುತೇಕರಿಗೆ ಇಷ್ಟ. ತಾವು ಸೇವಿಸುವ ಆಹಾರದಲ್ಲಿ ತುಪ್ಪವಿದ್ದರೆ ವಿಶೇಷ ರುಚಿ ಎಂದು…

blank