

ಮುಂಬೈ: ಬಾಲಿವುಡ್ನ ಹಿರಿಯ ನಿರ್ಮಾಪಕ ನಿತಿನ್ ಮನ್ಮೋಹನ್(64) ಅವರು ತೀವ್ರ ಹೃದಯಾಘಾತದಿಂದ ಗುರುವಾರ ನಿಧನರಾದರು.
ಬಾಘಿ, ಲಾಡ್ಲಾ ಸೇರಿಂದಂತೆ ಹಲವು ಸೂಪರ್ಹಿಟ್ ಚಿತ್ರಗಳನ್ನು ನಿರ್ಮಿಸಿದ್ದ ನಿತಿನ್ ಅವರು ಬಾಲಿವುಡ್ ನಟ, ದಿ. ಮನ್ಮೋಹನ್ ಅವರ ಮಗ. ಡಿ.24ರಂದು ನಿತಿನ್ ಹೃದಯಾಘಾತಕ್ಕೆ ಒಳಗಾಗಿದ್ದರು. ತಕ್ಷಣ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ನಿನ್ನೆ(ಬುಧವಾರ) ರಾತ್ರಿ ತೀವ್ರ ಹೃದಯಾಘಾತವಾಗಿದ್ದು ಗಂಭೀರ ಸ್ಥಿತಿಯಲ್ಲಿದ್ದ ನಿತಿನ್ ಅವನ್ನ ನವಿ ಮುಂಬೈನ ಕೋಕಿಲಾಬೆನ್ ಧೀರೂಬಾಯಿ ಅಂಬಾನಿ ಆಸ್ಪತ್ರೆಗೆ ಸ್ಥಳಾಂತರಿಲಾಗಿತ್ತು. ತೀವ್ರ ನಿಗಾಘಟಕದಲ್ಲಿ ಚಿಕಿತ್ಸೆ ನೀಡಲಾಯಿತ್ತಾದರೂ ಫಲಿಸದೆ ಗುರುವಾರ ಕೊನೆಯುಸಿರೆಳೆದರು. ನಿತಿನ್ರ ನಿಧನದ ಸುದ್ದಿ ಕೇಳಿ ಕುಟುಂಬಸ್ಥರು ಮತ್ತು ಚಿತ್ರರಂಗ ಕಂಬನಿ ಮಿಡಿದಿದೆ (ಏಜೆನ್ಸೀಸ್)