More

  ಅಂದು ನಟ ದರ್ಶನ್​ ಬಗ್ಗೆ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ ಹೇಳಿದ ಮಾತು ಇಂದು ನಿಜವಾಯ್ತು!

  ಬೆಂಗಳೂರು: ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವುದು ಇಡೀ ರಾಜ್ಯಕ್ಕೆ ಶಾಕಿಂಗ್​ ಸಂಗತಿಯಾಗಿದೆ. ಸ್ಟಾರ್​ ನಟನೊಬ್ಬ ಇಂತಹ ಹೇಯ ಕೃತ್ಯ ಎಸಗಿದ್ದಾನೆ ಎಂಬುದನ್ನು ಅರಗಿಸಿಕೊಳ್ಳಲು ಆಗುತ್ತಿಲ್ಲ. ರೇಣುಕಸ್ವಾಮಿ ಕೊಲೆ ಕೇಸ್​ ಸದ್ಯ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ಆತನ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡವಿದ್ದು, ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ.

  ಸದ್ಯ ದರ್ಶನ್​ ಮತ್ತು ಪವಿತ್ರಾ ಪೊಲೀಸ್​ ಕಸ್ಟಡಿಯಲ್ಲಿದ್ದು, ವಿಚಾರಣೆ ನಡೆಯುತ್ತಿದೆ. ಸಾಕಷ್ಟು ಸಂಗತಿಗಳು ಸಹ ಹೊರಬರುತ್ತಿವೆ. ಅಭಿಮಾನಿಗಳು ಸಹ ಆತಂಕದಲ್ಲಿದ್ದಾರೆ. ಇದರ ನಡುವೆ ನಿರ್ಮಾಪಕ ಉಮಾಪತಿ ಶ್ರೀನಿವಾಸ್​ ಗೌಡ ಅವರ ಹಳೆಯ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ವೈರಲ್​ ಆಗುತ್ತಿದೆ. ದರ್ಶನ್​ ಕುರಿತು ಉಮಾಪತಿ ಹಿಂದೊಮ್ಮೆ ಹೇಳಿದ್ದ ಮಾತು ಇದೀಗ ನಿಜವಾಗಿದೆ.

  ಕಾಟೇರ ಸಿನಿಮಾ ಬಿಡುಗಡೆಯಾಗಿ ಸಕ್ಸಸ್​ ಆದ ಬಳಿಕ ದರ್ಶನ್​ ಮತ್ತು ಉಮಾಪತಿ ನಡುವೆ ವಿವಾದವೊಂದು ಹುಟ್ಟಿಕೊಂಡಿತ್ತು. ಕಾಟೇರ್​ ಕತೆಯನ್ನು ನಾನೇ ಬರಿಸಿದ್ದೇ ಮತ್ತು ಟೈಟಲ್​ ಕೂಡ ನಾನೇ ರಿಜಿಸ್ಟರ್​ ಮಾಡಿಸಿದ್ದೇ ಎಂದು ಉಮಾಪತಿ ಹೇಳಿದ್ದರು. ಕಾಟೇರ ಸಿನಿಮಾದ 50 ದಿನ ಪೂರೈಸಿದ ಹಿನ್ನೆಲೆಯಲ್ಲಿ ಬೆಂಗಳೂರಿನ ಪ್ರಸನ್ನ ಚಿತ್ರಮಂದಿರದಲ್ಲಿ ಕಾರ್ಯಕ್ರಮ ನಡೆಯಿತು. ಈ ವೇಳೆ ಮಾತನಾಡಿದ್ದ ದರ್ಶನ್​, ಉಮಾಪತಿ ಮೇಲೆ ಗರಂ ಆಗಿ ಅಯ್ಯೋ ತಗಡೇ ನಿನಗೆ ರಾಬರ್ಟ್​ ಕತೆ ಕೊಡಿಸಿದ್ದೇ ನಾನು, ಯಾಕೆ ನಮ್ಮತ್ರ ಬಂದು ಗುಮ್ಮುಸ್ಕೋತೀಯಾ ಎಂದು ಟಾಂಗ್​ ನೀಡಿದ್ದರು.

  See also  ಮುಗಿಯುತ್ತಾ ಬಂತು ಪೃಥ್ವಿ, ಮಿಲನಾ ಅಭಿನಯದ 'ಫಾರ್​ ರಿಜಿಸ್ಟ್ರೇಶನ್​'

  ಬಳಿಕ ದರ್ಶನ್​ ಅವರ ತಗಡು ಹೇಳಿಕೆಗೆ ಪ್ರತಿಕ್ರಿಯಿಸಿದ ಉಮಾಪತಿ ಗೌಡ, ಜೀವನದಲ್ಲಿ ಎಲ್ಲರು ನಮ್ಮ ಕೊಂಡಾಡಬೇಕು ಹಾಗೂ ಮರ್ಯಾದೆ ಕೊಡಬೇಕು ಅಂದ್ರೆ ಅಂತಹ ಗೌರವವನ್ನು ನಾವು ಸಂಪಾಸಿದಬೇಕು. ನಾನಿವತ್ತು ತಗಡೇ ಇರಬಹುದು, ಆದರೆ, ಮುಂದೊಂದು ದಿನ ಚಿನ್ನದ ತಗಡು ಆಗಬಹುದು. ಜೀವನ ಇದೇ ರೀತಿ ಇರುವುದಿಲ್ಲ, ಮೇಲಿದ್ದವರು ಕೆಳಗೆ ಬೀಳಲೇ ಬೇಕು ಮತ್ತು ಕೆಳಗಿದ್ದವರು ಮೇಲೆ ಏಳಲೇಬೇಕು. ಎಲ್ಲದಕ್ಕೂ ಕಾಲವೇ ಉತ್ತರ ಕೊಡಲಿದೆ ಎಂದು ಹೇಳಿದ್ದರು.

  ಇದೀಗ ಅದೇ ರೀತಿ ನಟ ದರ್ಶನ್, ಕೊಲೆಯ ಆರೋಪದಲ್ಲಿ ಜೈಲು ಪಾಲಾಗಿದ್ದು, ಜೀವನದಲ್ಲಿ ಹೀನಾಯ ಸ್ಥಿತಿಗೆ ತಲುಪಿದ್ದಾರೆ. ಮೊದಲಿದ್ದ ಗತ್ತು ಇದೀಗ ದರ್ಶನ್​ಗಿಲ್ಲ. ಕೈಕಟ್ಟಿಕೊಂಡು ಹಾಗೂ ತಲೆ ಬಾಗಿಸಿಕೊಂಡು ನಿಲ್ಲಬೇಕಾದ ಸ್ಥಿತಿ ಎದುರಾಗಿದೆ. ಹೀಗಾಗಿ ಉಮಾಪತಿ ಶ್ರೀನಿವಾಸ್ ಅವರ ಹೇಳಿಕೆ ಈಗ ಮತ್ತೊಮ್ಮೆ ಫುಲ್ ವೈರಲ್ ಆಗುತ್ತಿದೆ. ಆದರೆ, ದರ್ಶನ್​ ಬಂಧನದ ಬಗ್ಗೆ ಉಮಾಪತಿ ಅವರು ಯಾವುದೇ ಹೇಳಿಕೆಯನ್ನು ನೀಡಿಲ್ಲ. ಹೇಳಿಕೆ ನೀಡಿ ದ್ವೇಷ ಸಾಧಿಸುವುದು ಬೇಡ ಎಂದು ಮಾಧ್ಯಮಗಳ ಬಳಿ ಹೇಳಿಕೊಂಡಿದ್ದಾರೆ.

  ಏನಿದು ಪ್ರಕರಣ?
  ರೇಣುಕಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್​ ಮತ್ತು ಗೆಳತಿ ಪವಿತ್ರಾ ಗೌಡ ಅರೆಸ್ಟ್​ ಆಗಿರುವ ಸುದ್ದಿ ರಾಜ್ಯದೆಲ್ಲೆಡೆ ಭಾರಿ ಚರ್ಚೆಯಾಗುತ್ತಿದೆ. ಪವಿತ್ರಾ ಗೌಡಗೆ ಅಶ್ಲೀಲ ಸಂದೇಶ ಕಳುಹಿಸಿದಕ್ಕೆ ರೇಣುಕಸ್ವಾಮಿಯ ಕೊಲೆ ನಡೆದಿದೆ ಎನ್ನಲಾಗಿದೆ. ಇದರಲ್ಲಿ ದರ್ಶನ್​ ಕೈವಾಡ ಇದೆ. ದರ್ಶನ್​ ಸೂಚನೆ ಕೊಟ್ಟಿದ್ದಕ್ಕೆ ಹಲ್ಲೆ ಮಾಡಿದೆವು ಎಂದು ಬಂಧಿತ ಆರೋಪಿಗಳು ತಪ್ಪೊಪ್ಪಿಕೊಂಡಿರುವ ಹಿನ್ನೆಲೆಯಲ್ಲಿ ದರ್ಶನ್​ರನ್ನು ಬಂಧಿಸಲಾಗಿದೆ. ಫೆಬ್ರವರಿ 27ರಿಂದ ದರ್ಶನ್​ ಗೆಳತಿ ಪವಿತ್ರಾ ಗೌಡಗೆ ರೇಣುಕಸ್ವಾಮಿ ಅಶ್ಲೀಲವಾಗಿ ಮೆಸೇಜ್ ಶುರು ಮಾಡಿದ್ದರು. ಅಕೌಂಟ್‌ ಬ್ಲಾಕ್‌ ಮಾಡಿದ್ದರೂ ಹೊಸ ಅಕೌಂಟ್‌ನಿಂದ ಮತ್ತದೇ ಮಸೇಜ್ ಕಳುಹಿಸುತ್ತಿದ್ದ. ಕಳೆದ ಶುಕ್ರವಾರ ಮರ್ಮಾಂಗದ ಫೋಟೋ ಕಳುಹಿಸಿ ‘ದರ್ಶನ್​ಗಿಂತ ನಾನೇನು ಕಡಿಮೆ ಬಾ’ ಎಂದು ಹೇಳಿದ್ದ. ಈ ರೀತಿಯ ಟಾರ್ಚರ್‌ ಸಹಿಸಿಕೊಳ್ಳಲಾಗದೇ ಪವಿತ್ರಾ ಅವರು ತಮ್ಮ ಮನೆಗೆಲಸದವ ಪವನ್​ಗೆ ಹೇಳಿದ್ದರು. ಈ ವಿಚಾರ ದರ್ಶನ್​ಗೆ ತಿಳಿದಿದೆ. ರೇಣುಕ ಸ್ವಾಮಿಯನ್ನು ಚಿತ್ರದುರ್ಗದಿಂದ ಅಪಹರಣ ಮಾಡಿ ಕರೆದುಕೊಂಡು ಬಂದು ಶೆಡ್​ನಲ್ಲಿ ಇರಿಸಿಕೊಂಡು ಹಲ್ಲೆ ಮಾಡಿದ್ದ ದರ್ಶನ್ ಮತ್ತು ಗ್ಯಾಂಗ್​, ಹಲ್ಲೆಯಿಂದ ರೇಣುಕಸ್ವಾಮಿ ನಿಧನ ಹೊಂದಿದ ಬಳಿಕ ಆತಂಕಗೊಂಡು, ಶವವನ್ನು ಸಾಗಿಸುವ ದಾರಿ ಹುಡುಕಿದೆ. ಆಗ ಬೇರೆ ಗ್ಯಾಂಗ್ ಒಂದನ್ನು ಕರೆಸಿ ಅವರಿಗೆ ಶವ ಒಪ್ಪಿಸಿ, ಅದನ್ನು ವಿಲೇವಾರಿ ಮಾಡುವಂತೆ ಹೇಳಿ ಅವರಿಗೆ 30 ಲಕ್ಷ ರೂಪಾಯಿ ಹಣ ನೀಡಿದ್ದಾರೆ. ಈ ಹಣವನ್ನು ದರ್ಶನ್ ಅವರೇ ನೀಡಿದ್ದಾರೆ ಎನ್ನಲಾಗುತ್ತಿದೆ.

  See also  'ಆರ್​.ಆರ್​.ಆರ್​' ತರಹ 'ವಿಜಯಾನಂದ' ಸಹ ಬಿಗ್​ ಹಿಟ್​ ಆಗಲಿ: ಆರೋಗ್ಯ ಸಚಿವ ಸುಧಾಕರ್ ಹಾರೈಕೆ

  ಹಣ ಪಡೆದ ಮತ್ತೊಂದು ಗ್ಯಾಂಗ್ ರೇಣುಕಾ ಸ್ವಾಮಿಯ ಶವವನ್ನು ಕಾಮಾಕ್ಷಿಪಾಳ್ಯ ಪೊಲೀಸ್ ಠಾಣಾ ವ್ಯಾಪ್ತಿಯ ಸುಮನಹಳ್ಳಿ ಮೋರಿಗೆ ಬಿಸಾಡಿ ಹೋಗಿದ್ದಾರೆ. ಶವ ದೊರೆತ ಬಳಿಕ ತಾವೇ ಕೊಲೆ ಮಾಡಿರುವುದಾಗಿ ಹೇಳಿ ಠಾಣೆಗೆ ಒಪ್ಪಿಕೊಂಡಿದ್ದಾರೆ. ಕೊಲೆ ಮಾಡಲು ಹಣಕಾಸಿನ ವಿಚಾರವೇ ಕಾರಣ ಎಂದು ಹೇಳಿದ್ದಾರೆ. ಆದರೆ ಒಬ್ಬೊಬ್ಬರನ್ನೂ ಪ್ರತ್ಯೇಕವಾಗಿ ವಿಚಾರಣೆ ಮಾಡಿದಾಗ ಅವರ ಹೇಳಿಕೆಯಲ್ಲಿ ವ್ಯತ್ಯಾಸ ಕಂಡುಬಂದಿದೆ. ಬಳಿಕ ಪೊಲೀಸರು ತಮ್ಮದೇ ಶೈಲಿಯಲ್ಲಿ ವಿಚಾರಣೆ ಮಾಡಿದಾಗ ನಿಜಾಂಶ ಬಯಲಾಗಿದೆ. ಹಣ ಪಡೆದು ಶವ ವಿಲೇವಾರಿ ಜವಾಬ್ದಾರಿ ಹೊತ್ತಿದ್ದ ಗ್ಯಾಂಗ್, ದರ್ಶನ್​ರ ಆಪ್ತನೊಟ್ಟಿಗೆ ಸಂಪರ್ಕದಲ್ಲಿತ್ತಂತೆ. ಶವ ವಿಲೇವಾರಿ ಹಾಗೂ ಕೊಲೆಯ ಆರೋಪ ಹೊರಲೆಂದು ಮುಂಚಿತವಾಗಿಯೇ 30 ಲಕ್ಷ ರೂಪಾಯಿ ಹಣವನ್ನು ದರ್ಶನ್ ಅವರಿಂದ ಈ ಗ್ಯಾಂಗ್ ಪಡೆದಿತ್ತು ಎನ್ನಲಾಗಿದೆ.

  ಯಾರ ಪ್ರಭಾವಕ್ಕೂ ಮಣಿಯದೇ ‘ರೀಲ್​ ಹೀರೋ’​ಗೆ ಬಿಸಿ ಮುಟ್ಟಿಸಿದ್ದೇ ಈ ಇಬ್ಬರು ಖಡಕ್ ಅಧಿಕಾರಿಗಳು! ಇವರೇ ನೋಡಿ ‘ರಿಯಲ್’ ಹೀರೋಸ್​

  ಮುಗ್ಧರಾಗಿದ್ದ ದರ್ಶನ್ ಹೀಗಾಗಲು ಅದೊಂದೆ ಕಾರಣ! ದಚ್ಚು ಮಾಡಿದ ಈ ತಪ್ಪುಗಳಿಂದಲೇ ಹೀನಾಯ ಸ್ಥಿತಿ ಬಂತು

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts