ಹರಿಹರ: ರಾಜ್ಯದ ದಲಿತ ಸಮುದಾಯಗಳಲ್ಲಿ ಜಾಗೃತಿಯ ದೀಪ ಹಚ್ಚಿದ ಕೀರ್ತಿ ಪ್ರೊ.ಬಿ. ಕೃಷ್ಣಪ್ಪರಿಗೆ ಸಲ್ಲುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಕೆ. ನಾಗರಾಜ್ ಹೇಳಿದರು.
ಇಲ್ಲಿನ ಬೈಪಾಸ್ ಬಳಿಯ ಮೈತ್ರಿವನದಲ್ಲಿರುವ ದಲಿತ ಸಂಘರ್ಷ ಸಮಿತಿ ಸ್ಥಾಪಕ ಪ್ರೊ.ಬಿ. ಕೃಷ್ಣಪ್ಪರ ಸಮಾಧಿ ಸ್ಥಳದಲ್ಲಿ ದಸಂಸ ತಾಲೂಕು ಘಟಕದಿಂದ ಶುಕ್ರವಾರ ಆಯೋಜಿಸಿದ್ದ ಪ್ರೊ.ಬಿ. ಕೃಷ್ಣಪ್ಪರ 85ನೇ ಜಯಂತಿಗೆ ಚಾಲನೆ ನೀಡಿ ಮಾತನಾಡಿದರು.
ಡಾ.ಬಿ.ಆರ್. ಅಂಬೇಡ್ಕರ್‌ರವರು ಸಂವಿಧಾನ ರಚಿಸಿ ದೇಶದಲ್ಲಿ ಸಾಮಾಜಿಕ ಸಮಾನತೆಗೆ ದಾರಿ ಮಾಡಿಕೊಟ್ಟರು. ಆ ಸಂವಿಧಾನದಿಂದ ಪ್ರೇರಣೆಗೊಂಡ ಕೃಷ್ಣಪ್ಪನವರು ಕಾಲೇಜಿನಲ್ಲಿ ಅಧ್ಯಾಪಕರ ವೃತ್ತಿ ನಿರ್ವಹಿಸುತ್ತ ರಾಜ್ಯಾದ್ಯಂತ ಸಂಚರಿಸಿ ದಲಿತ ಸಮುದಾಯಗಳಲ್ಲಿ ಜಾಗೃತಿ ದೀಪ ಹಚ್ಚಿದರು ಎಂದರು.
ತಹಸೀಲ್ದಾರ್ ಪೃಥ್ವಿ ಸಾನಿಕಂ ಮಾತನಾಡಿ, ಡಾ.ಬಿ.ಆರ್. ಅಂಬೇಡ್ಕರ್ ರವರು ವಿವಿಧ ವಿಷಯಗಳಲ್ಲಿ ಉನ್ನತ ಶಿಕ್ಷಣ ಪಡೆದಿದ್ದರಿಂದ ದೇಶದಲ್ಲಿ ದಲಿತರ ದುಸ್ಥಿತಿ ಅರಿವು ಮೂಡಿತು. ಹೀಗಾಗಿ, ಶಿಕ್ಷಣವೇ ಎಲ್ಲ್ಲ ಸಮುದಾಯಗಳ ಅಭಿವೃದ್ಧಿಗೆ ಆಧಾರವಾಗಿದ್ದು, ವಿಶೇಷವಾಗಿ ತಳ ಸಮುದಾಯದ ಜನರು ಸಂಕಷ್ಟಗಳಿಗೆ ಎದೆಗುಂದದೆ ಶಿಕ್ಷಣವಂತರಾಗಬೇಕೆಂದರು.
ದಸಂಸ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ) ತಾಲೂಕು ಸಂಚಾಲಕ ಪಿ.ಜೆ. ಮಹಾಂತೇಶ್ ಮಾತನಾಡಿ, ಕನ್ನಡ ನಾಡಿನ ಮೂಲೆ, ಮೂಲೆಗೆ ಸಂಚರಿಸಿ ದಲಿತರಲ್ಲಿ ಜಾಗೃತಿ ಮೂಡಿಸಿದ ಕೃಷ್ಣಪ್ಪನವರು ಹರಿಹರದವರೆಂಬುದೆ ಹೆಮ್ಮೆಯ ವಿಷಯ.
ಚಂದ್ರಗುತ್ತಿ ಬೆತ್ತಲೆ ಸೇವೆ ಹಾಗೂ ಧರ್ಮದ ಆಸರೆಯಲ್ಲಿ ನಡೆಯುತ್ತಿದ್ದ ಹತ್ತಾರು ಮೌಢ್ಯತೆಗಳ ವಿರುದ್ಧ ಜನಜಾಗೃತಿ ಮೂಡಿಸಿದರು ಎಂದರು.
ಕೃಷ್ಣಪ್ಪರ ಹೋರಾಟದ ಮಜಲುಗಳ ಅಧ್ಯಯನ ನಡೆಯಬೇಕೆಂಬ ಹಿನ್ನೆಲೆಯಲ್ಲಿ ದಾವಣಗೆರೆ ವಿಶ್ವವಿದ್ಯಾನಿಲಯದಲ್ಲಿ ಅವರ ಹೆಸರಲ್ಲಿ ಒಂದು ಅಧ್ಯಯನ ಪೀಠ ಆರಂಭಿಸಬೇಕೆಂಬ ಕೂಗಿಗೆ ವಿವಿ ಅಥವಾ ಸರ್ಕಾರ ಈವರೆಗೆ ಸ್ಪಂದಿಸದಿರುವುದು ಬೇಸರ ಮೂಡಿಸಿದೆ ಎಂದರು.
ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ನಾಸಿರುದ್ದೀನ್, ಗ್ರಾಮ ಲೆಕ್ಕಾಧಿಕಾರಿ ಎಚ್.ಜಿ. ಹೇಮಂತ್ ಕುಮಾರ್, ಹೊಸಪಾಳ್ಯ ಗ್ರಾಪಂ ಸದಸ್ಯ ಪರಶುರಾಮ, ದಸಂಸ ಪದಾಧಿಕಾರಿಗಳಾದ ಚೌಡಪ್ಪ ಭಾನುವಳ್ಳಿ, ವಿ.ಎನ್. ಲಕ್ಷ್ಮಪ್ಪ, ಹನುಮಂತಪ್ಪ ಮುಂಡಗೋಡು, ಲಕ್ಷ್ಮಪ್ಪ, ರಾಜಪ್ಪ, ಕುಮಾರ್, ಕರಿಯ, ದುರ್ಗಮ್ಮ, ಹಳದಮ್ಮ, ಮೈಲಮ್ಮ, ಭಾಗ್ಯಮ್ಮ, ಮಲ್ಲಮ್ಮ, ನೀಲಮ್ಮ ಇತರರಿದ್ದರು.
ದಲಿತರಲ್ಲಿ ಜಾಗೃತಿ ಮೂಡಿಸಿದ ಪ್ರೊ.ಬಿ. ಕೃಷ್ಣಪ್ಪ
ವೆಜ್ ಪ್ರಿಯರಿಗಾಗಿ ಸ್ಟ್ರೀಟ್ ಸ್ಟೈಲ್ ಮೊಮೊಸ್; ಮನೆಯಲ್ಲೆ ಮಾಡಲು ಇಲ್ಲಿದೆ ಸಿಂಪಲ್ ವಿಧಾನ Recipe
ಸ್ಟ್ರೀಟ್ ಫುಡ್ ಯಾರಿಗೆ ಇಷ್ಟ ಇರುವುದಿಲ್ಲ ಹೇಳಿ, ಸಂಜೆಯಾದರೆ ಸಾಕು ಸ್ಟ್ರೀಟ್ ಫುಡ್ ತಿನ್ನಬೇಕು ಎನ್ನಿಸುತ್ತದೆ.…
ಹೀಲ್ಸ್ ಧರಿಸುವುದು ಎಷ್ಟು ಅಪಾಯಕಾರಿ ಗೊತ್ತೆ?; ತಪ್ಪದೆ ಈ ಮಾಹಿತಿ ತಿಳಿದುಕೊಳ್ಳಿ | Health Tips
ಹೈಹೀಲ್ಸ್ ಬೂಟುಗಳನ್ನು ಧರಿಸುವುದು ಪರಿಪೂರ್ಣ ಭಂಗಿಯನ್ನು ನೀಡುತ್ತದೆ, ಎತ್ತರವಾಗಿ ಕಾಣುತ್ತದೆ ಮತ್ತು ಸ್ಟೈಲಿಶ್ ಆಗಿ ಕಾಣುತ್ತದೆ.…
ಶೀತದಲ್ಲಿಯೂ ಉತ್ತಮ ನಿದ್ರೆಗೆ ಈ ಟ್ರಿಕ್ಸ್ ಫಾಲೋ ಮಾಡಿ; ನಿಮಗಾಗಿ ಹೆಲ್ತಿ ಟಿಪ್ಸ್ | Health Tips
ಕೆಲವರಿಗೆ ಚಳಿಗಾಲದಲ್ಲಿ ಹೆಚ್ಚು ನಿದ್ದೆ ಬಂದರೆ ಇನ್ನು ಕೆಲವರು ಕಣ್ಣುಗಳಿಂದ ನಿದ್ದೆ ಕಳೆದುಕೊಳ್ಳುತ್ತಾರೆ. ನಿದ್ರೆಯ ಮಾದರಿಯಲ್ಲಿ…