More

    ಲಾಭ-ನಷ್ಟ ನೋಡದೆ ಬಸ್ ಸೇವೆ ಆರಂಭಿಸಿ

    ಗೋಕಾಕ: ಲಾಭ-ನಷ್ಟ ಗಮನಿಸದೆ ವಿದ್ಯಾರ್ಥಿಗಳು ಮತ್ತು ಸಾರ್ವಜನಿಕರ ಹಿತದೃಷ್ಟಿಯಿಂದ ಬಸ್ ಸೇವೆಯನ್ನು ಪುನರ್ ಆರಂಭಿಸಬೇಕು ಎಂದು ಶಾಸಕ ಬಾಲಚಂದ್ರ ಜಾರಕಿಹೊಳಿ ಸಾರಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ಸಾರಿಗೆ ಇಲಾಖೆಯ ಹಿಂದುಳಿದ ಪ್ರದೇಶಾಭಿವೃದ್ಧಿ ಯೋಜನೆಯಡಿ 85 ಲಕ್ಷ ರೂ. ವೆಚ್ಚದಲ್ಲಿ ತಾಲೂಕಿನ ಕೌಜಲಗಿ ಗ್ರಾಮದಲ್ಲಿ ನಿರ್ಮಿಸಲಾದ ಬಸ್ ನಿಲ್ದಾಣವನ್ನು ಉದ್ಘಾಟಿಸಿ ಮಾತನಾಡಿದ ಅವರು, ಪ್ರಯಾಣಿಕರ ಅನುಕೂಲಕ್ಕಾಗಿ ಸುಸಜ್ಜಿತ ಬಸ್ ನಿಲ್ದಾಣವನ್ನು ನಿರ್ಮಿಸಲಾಗಿದೆ. ಗ್ರಾಪಂನಿಂದ ಬಸ್ ನಿಲ್ದಾಣ ನಿರ್ಮಾಣಕ್ಕೆ 36 ಗುಂಟೆ ನಿವೇಶನವನ್ನು ನೀಡಲಾಗಿದೆ ಎಂದು ಹೇಳಿದರು.

    ಶಾಲಾ ಕೊಠಡಿಗಳ ಉದ್ಘಾಟನೆ: ಕೌಜಲಗಿ ಗ್ರಾಮದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯ 2 ಕೊಠಡಿ, ಸರ್ಕಾರಿ ಬಾಲಕಿಯರ ಪ್ರಾಥಮಿಕ ಶಾಲೆಯ 2 ಕೊಠಡಿ ಹಾಗೂ 45 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣವಾಗಿರುವ ಸರ್ಕಾರಿ ಮಾಧ್ಯಮಿಕ ಶಾಲೆಯ 3 ಕೊಠಡಿಗಳನ್ನು ಇದೇ ಸಂದರ್ಭದಲ್ಲಿ ಶಾಸಕ ಬಾಲಚಂದ್ರ ಜಾರಕಿಹೊಳಿ ಉದ್ಘಾಟಿಸಿದರು.

    ಅರ್ಬನ್ ಬ್ಯಾಂಕ್ ಅಧ್ಯಕ್ಷ ಡಾ.ರಾಜೇಂದ್ರ ಸಣ್ಣಕ್ಕಿ, ಪ್ರಭಾ ಶುಗರ್ ನಿರ್ದೇಶಕ ಮಹಾದೇವಪ್ಪ ಭೋವಿ, ಜಿಪಂ ಮಾಜಿ ಸದಸ್ಯ ಪರಮೇಶ್ವರ ಹೊಸಮನಿ, ತಾಪಂ ಸದಸ್ಯರಾದ ಶಾಂತಪ್ಪ ಹಿರೇಮೇತ್ರಿ, ಲಕ್ಷ್ಮಣ ಮಸಗುಪ್ಪಿ, ಯುವ ಮುಖಂಡ ರವಿ ಪರುಶೆಟ್ಟಿ, ಅರ್ಬನ್ ಬ್ಯಾಂಕ್ ಮಾಜಿ ಅಧ್ಯಕ್ಷ ಶಿವಾನಂದ ಲೋಕಣ್ಣವರ, ಗ್ರಾಪಂ ಮಾಜಿ ಅಧ್ಯಕ್ಷ ಮಕ್ತುಮಸಾಬ್ ಖಾಜಿ, ಹೊಳೆಪ್ಪ ಲೋಕಣ್ಣವರ, ಅಶೋಕ ಉದ್ದಪ್ಪನವರ, ರಾಯಪ್ಪ ಬಳೋಲದಾರ, ಪಿಕೆಪಿಎಸ್ ಅಧ್ಯಕ್ಷ ಜಿ.ಎಸ್. ಲೋಕಣ್ಣವರ, ಪಿಕೆಪಿಎಸ್ ಮಾಜಿ ಅಧ್ಯಕ್ಷ ಮಹೇಶ ಪಟ್ಟಣಶೆಟ್ಟಿ, ಚಿಕ್ಕೋಡಿ ಡಿಟಿಒ ರಾಜಶೇಖರ ವಾಜಂತ್ರಿ, ಘಟಕ ವ್ಯವಸ್ಥಾಪಕ ಪ್ರಭುಲಿಂಗ ಮಡಿವಾಳರ, ಚಿಕ್ಕೋಡಿ ಎಇ ಶಿವಕುಮಾರ, ವಿಠ್ಠಲ ಹಳ್ಳೂರ, ಎಸ್.ಎ. ಮುಲ್ಲಾ, ಸುಭಾಸ ವಲ್ಯಾಪುರ, ಮಾಲತೇಶ ಸಣ್ಣಕ್ಕಿ, ಎ.ಎಂ. ಮೋಡಿ, ವೆಂಕಟೇಶ ದಳವಾಯಿ, ಫಕೀರಪ್ಪ ಪೂಜಣ್ಣವರ ಇತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts