ಪ್ರಿಯದರ್ಶಿನಿ ಸೊಸೈಟಿಗೆ ರೂ.19.14 ಲಕ್ಷ ಲಾಭ: ಎಚ್.ವಸಂತ ಬೆರ್ನಾಡ್ ಮಾಹಿತಿ

Mul_Priyadarshini

ಹಳೆಯಂಗಡಿ: ಗ್ರಾಮೀಣ ಜನರ ಹಿತದೃಷ್ಟಿಯಿಂದ ಪ್ರಾರಂಭಗೊಂಡ ಸಂಸ್ಥೆಯು ನಿರ್ದೇಶಕರ ಮತ್ತು ಸದಸ್ಯರ ಸಹಕಾರದಿಂದ ಅತೀ ಕಡಿಮೆ ಅವಧಿಯಲ್ಲಿ ಹಲವು ಶಾಖೆಗಳ ವಿಸ್ತರಣೆ ಹಾಗೂ 19.14 ಲಕ್ಷ ರೂ ಲಾಭಾಂಶ ಪಡೆದು ಈ ಬಾರಿ ಶೇ.6 ಡಿವಿಡೆಂಡ್ ನೀಡಲಿದೆ ಎಂದು ಪ್ರಿಯದರ್ಶಿನಿ ಕೋ -ಆಪರೇಟಿವ್ ಸೊಸೈಟಿ ಅಧ್ಯಕ್ಷ ಎಚ್.ವಸಂತ ಬೆರ್ನಾಡ್ ಹೇಳಿದರು.

ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ 2023-24ನೇ ಸಾಲಿನ ವಿಶಿಷ್ಟ ಸಾಧನಾ ಪ್ರಶಸ್ತಿ ಪಡೆದ ಹಳೆಯಂಗಡಿಯಲ್ಲಿ ಪ್ರಧಾನ ಕಚೇರಿ ಹೊಂದಿರುವ ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿಯ 2023-24ನೇ ಸಾಲಿನ ಮಹಾಸಭೆ ಅಧ್ಯಕ್ಷತೆ ವಹಿಸಿ ಅವರು ವಾತನಾಡಿದರು.

ಸೊಸೈಟಿ ಉಪಾಧ್ಯಕ್ಷೆ ಪ್ರತಿಭಾ ಕುಳಾಯಿ, ನಿರ್ದೇಶಕರಾದ ಡಾ.ಗಣೇಶ್ ಅಮೀನ್ ಸಂಕವಾರ್, ಧನಂಜಯ ಮಟ್ಟು, ಗೌತಮ್ ಜೈನ್, ಶರತ್ ಶೆಟ್ಟಿ ಪಂಚವಟಿ, ಉವಾನಾಥ್ ಜೆ.ಶೆಟ್ಟಿಗಾರ್, ಜೈಕಷ್ಣ ಕೋಟ್ಯಾನ್, ಗಣೇಶ್ ಪ್ರಸಾದ್ ದೇವಾಡಿಗ, ಧನ್‌ರಾಜ್ ಕೋಟ್ಯಾನ್, ಮಿರ್ಜಾ ಅಹಮದ್, ಶೆರಿಲ್ ಅಯೋನ ಐಮನ್, ಹರೀಶ್ ಎನ್.ಪುತ್ರನ್, ನವೀನ್ ಸಾಲ್ಯಾನ್ ಪಂಜ, ಸಂದೀಪ್, ವಿಜಯ್ ಕುವಾರ್ ಸನಿಲ್, ತನುಜಾ ಶೆಟ್ಟಿ ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸದಸ್ಯರ, ಅವಲಂಬಿತರ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಮತ್ತು ಉತ್ತಮ ರೀತಿಯ ವ್ಯವಹಾರ ನಡೆಸಿದ ಸ್ವ-ಸಹಾಯ ಗುಂಪುಗಳನ್ನು ಅಭಿನಂದಿಸಲಾಯಿತು ಹಾಗೂ ಸೊಸೈಟಿ ಸದಸ್ಯರಾದ ಪ್ರಸ್ತುತ ಮೂಲ್ಕಿ ತಾಲೂಕು ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷರಾಗಿ ನೇಮಕಗೊಂಡ ಅಲ್ವಿನ್ ಕ್ಲೆಮೆಂಟ್ ಕುಟಿನ್ಹೊ ಮತ್ತು ಕ್ರೀಡಾ ಕ್ಷೇತ್ರದಲ್ಲಿ ರಾಷ್ಟ್ರಮಟ್ಟದ ಸಾಧನೆಗೈದ ಸೊಸೈಟಿ ಸದಸ್ಯರಾದ ಸುಷ್ಮಾ ತಾರಾನಾಥ್ ಅವರನ್ನು ಗೌರವಿಸಲಾಯಿತು.

ಮುಖ್ಯ ಕಾರ್ಯನಿರ್ವಣಾಧಿಕಾರಿ ಸುದರ್ಶನ್ ಸ್ವಾಗತಿಸಿದರು. ಸಾಧಕರ ಅಭಿನಂದನಾ ಕಾರ್ಯಕ್ರಮವನ್ನು ಪಡುಬಿದ್ರಿ ಶಾಖಾ ಪ್ರಬಂಧಕಿ ಪ್ರಜ್ಞಾ ಚಿರಾಗ್ ಮತ್ತು ಕಿನ್ನಿಗೋಳಿ ಶಾಖಾ ಪ್ರಬಂಧಕ ಮೋಹನ್ ದಾಸ್ ನಿರ್ವಹಿಸಿದರು. ಹಳೆಯಂಗಡಿ ಶಾಖಾ ಪ್ರಬಂಧಕಿ ಅಕ್ಷತಾ ಶೆಟ್ಟಿ ಎಂ. ನಿರೂಪಿಸಿದರು. ಪ್ರಧಾನ ಕಚೇರಿ ಪ್ರಥಮ ದರ್ಜೆ ಗುವಾಸ್ತೆ ಲೋಲಾಕ್ಷಿ ವಂದಿಸಿದರು.

ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 3 ಶಾಖೆಯನ್ನು ಹೊಂದಿದ ಸಂಸ್ಥೆಯಲ್ಲಿ 15 ಸಿಬ್ಬಂದಿ ಇದ್ದು, 1903 ಸದಸ್ಯರನ್ನು ಹೊಂದಿದೆ. ತನ್ನ ಮೂರು ವರ್ಷದ ಅವಧಿಯಲ್ಲಿ ಉತ್ತಮ ಸಾಧನೆ ವಾಡಿದೆ. ವಾರ್ಚ್ ಅಂತ್ಯಕ್ಕೆ ರೂ. 21.22 ಕೋಟಿ ಠೇವಣಿ, ರೂ. 85.76 ಲಕ್ಷ ಪಾಲು ಬಂಡವಾಳ, ರೂ. 18.21 ಕೋಟಿ ಸಾಲ ನೀಡಿದ್ದು, ಆಡಿಟ್ ವರ್ಗಿಕರಣದಲ್ಲಿ ‘ಎ’ ಗ್ರೇಡ್ ಪಡೆದು ದಕ್ಷಿಣ ಕನ್ನಡ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನೀಡಿದ ವಿಶಿಷ್ಟ ಸಾಧನಾ ಪ್ರಶಸ್ತಿ ಪಡೆದುಕೊಂಡಿದೆ.

ಎಚ್.ವಸಂತ ಬೆರ್ನಾಡ್, ಪ್ರಿಯದರ್ಶಿನಿ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ
Share This Article

ಆಯಾ ವಯಸ್ಸಿಗೆ ಅನುಗುಣವಾಗಿ ಯಾರು ಎಷ್ಟು ಗಂಟೆ ನಿದ್ದೆ ಮಾಡಬೇಕು? ಇಲ್ಲಿದೆ ಸಂಪೂರ್ಣ ಪಟ್ಟಿ… Sleep

Sleep : ದೈಹಿಕ ಮತ್ತು ಮಾನಸಿಕ ಆರೋಗ್ಯವನ್ನು ಕಾಪಾಡಿಕೊಳ್ಳಲು ವ್ಯಕ್ತಿಗೆ ಸಾಕಷ್ಟು ನಿದ್ರೆ ಬೇಕೇ ಬೇಕು.…

7 ಗಂಟೆಗಳಿಗಿಂತ ಕಡಿಮೆ ನಿದ್ರೆ ಮಾಡಿದ್ರೆ ದೇಹ, ಮನಸ್ಸಿನ ಮೇಲೆ ಪರಿಣಾಮ!  ಸಂಶೋಧನೆಯಿಂದ ಬಹಿರಂಗ.. Sleeping  

Sleeping : ಆರೋಗ್ಯವಾಗಿರಲು ನಿದ್ರೆ ಬಹಳ ಮುಖ್ಯ. ನಿದ್ರೆಯ ಕೊರತೆಯು ದೇಹದಲ್ಲಿ ಅನೇಕ ರೋಗಗಳನ್ನು ಉಂಟುಮಾಡುತ್ತದೆ.…

Beauty Tips: ಲಿಪ್‌ಸ್ಟಿಕ್ ಹೆಚ್ಚು ಬಳಸುತ್ತೀರಾ? ಹುಷಾರಾಗಿರಿ.. ಇಲ್ಲಿದೆ ನೋಡಿ ಬೆಚ್ಚಿ ಬೀಳಿಸೋ ವರದಿ

Beauty Tips : ಹುಡುಗಿಯರು ಬಳಸುವ ಸೌಂದರ್ಯವರ್ಧಕಗಳಲ್ಲಿ ಲಿಪ್‌ಸ್ಟಿಕ್ ಕೂಡ ಒಂದು. ತುಟಿಗಳು ಸುಂದರವಾಗಿ ಮತ್ತು…