More

    ಸಮಾಜಮುಖಿ ಮನೋಭಾವದಿಂದ ದೇಶದ ಪ್ರಗತಿ

    ಶಿವಮೊಗ್ಗ: ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳು ಸಮಾಜಮುಖಿ ಸೇವಾ ಮನೋಭಾವ ಬೆಳೆಸಿಕೊಂಡು ದೇಶದ ಬೆಳವಣಿಗೆಯಲ್ಲಿ ಮಹತ್ತರ ಪಾತ್ರ ವಹಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಪಿ.ನಾಗರಾಜ್ ಹೇಳಿದರು.

    ಜಿಲ್ಲಾ ಸ್ಕೌಟ್ ಭವನದಲ್ಲಿ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶಿವಮೊಗ್ಗ ಜಿಲ್ಲಾ ಮತ್ತು ಸ್ಥಳೀಯ ಸಂಸ್ಥೆ ಹಾಗೂ ಮಲ್ನಾಡ್ ಓಪನ್ ಗ್ರೂಪ್ ಆಶ್ರಯದಲ್ಲಿ ಬುಧವಾರ ಏರ್ಪಡಿಸಿದ್ದ ಜಂಬೂರೀ ಆನ್ ದಿ ಏರ್ ಮತ್ತು ಜಂಬೂರೀ ಆನ್ ದಿ ಇಂಟರ್ನೆಟ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
    ಸ್ಕೌಟ್ಸ್ ಮತ್ತು ಗೈಡ್ಸ್‌ನಲ್ಲಿ ವಿದ್ಯಾರ್ಥಿಗಳು ತೊಡಗಿಸಿಕೊಳ್ಳುವಂತೆ ಪಾಲಕರು ಹಾಗೂ ಶಿಕ್ಷಕರು ಪ್ರೇರೆಪಿಸಬೇಕು. ಉತ್ತಮ ವ್ಯಕ್ತಿತ್ವ, ನಾಯಕತ್ವ ಗುಣ ಸೇರಿದಂತೆ ಸಮಾಜದ ಪ್ರಗತಿಗೆ ಇದು ಸಹಕಾರಿಯಾಗಲಿದೆ ಎಂದರು.
    ಜಿಲ್ಲಾ ಸ್ಕೌಟ್ ಆಯುಕ್ತ ಕೆ.ಪಿ.ಬಿಂದುಕುಮಾರ್ ಮಾತನಾಡಿ, ಸಂವಹನ ಕ್ಷೇತ್ರದಲ್ಲಿ ತಾಂತ್ರಿಕ ಪರಿಣಿತಿ, ಹ್ಯಾಮ್ ರೇಡಿಯೋ ಆಪರೇಟರ್ಸ್‌ಗಳೊಂದಿಗೆ ಚರ್ಚೆ, ಉಪಗ್ರಹದ ಮೂಲಕ ಸಂವಹನ, ಪ್ರಕೃತಿ ವಿಕೋಪ ಸಂದರ್ಭದಲ್ಲಿ ಸೇವೆ ಮುಂತಾದ ಉತ್ತಮ ಅಂಶ ಒಳಗೊಂಡ ಹ್ಯಾಮ್ ರೇಡಿಯೋದ ಸದಸ್ಯರಾಗಬೇಕು ಎಂದು ವಿದ್ಯಾರ್ಥಿಗಳಿಗೆ ತಿಳಿಸಿದರು.
    ಹ್ಯಾಮ್ ರೇಡಿಯೋ ಆಪರೇಟರ್ ಹಾಗೂ ಸ್ಥಳೀಯ ಸಂಸ್ಥೆ ಕಾರ್ಯದರ್ಶಿ ರಾಜೇಶ್ ವಿ.ಅವಲಕ್ಕಿ, ಜಿಲ್ಲಾ ಸ್ಕೌಟ್ ಮುಖ್ಯ ಆಯುಕ್ತ ಎಚ್.ಡಿ.ರಮೇಶ್ ಶಾಸ್ತ್ರಿ, ಸಹಾಯಕ ರಾಜ್ಯ ಸಂಘಟನಾ ಆಯುಕ್ತೆ ಭಾರತಿ ಡಯಾಸ್, ಸಹಾಯಕ ಜಿಲ್ಲಾ ಆಯುಕ್ತ ಶ್ರೀನಿವಾಸ್, ಹ್ಯಾಮ್ ಆಪರೇಟರ್ ಮತ್ತು ಸ್ಥಳೀಯ ಸಂಸ್ಥೆಯ ಸಹ ಕಾರ್ಯದರ್ಶಿ ಘನಶ್ಯಾಮ್ ಗಿರಿಮಾಜಿ, ಕೇಂದ್ರ ಸ್ಥಾನಿಕ ಆಯುಕ್ತ ಜಿ.ವಿಜಯ್‌ಕುಮಾರ್, ಮಲ್ಲಿಕಾರ್ಜುನ ಕಾನೂರ್ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts