More

    ಸಮರ್ಥವಾಗಿ ಬರ ಪರಿಸ್ಥಿತಿ ನಿರ್ವಹಿಸಿ

    ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ
    ಜಿಲ್ಲೆಯ ನಾಲ್ಕು ತಾಲೂಕುಗಳನ್ನು ಬರಪೀಡಿತ ಎಂದು ಘೋಷಣೆ ಮಾಡಲಾಗಿದ್ದು, ಕುಡಿಯುವ ನೀರಿನ ಸಮಸ್ಯೆ, ಜಾನುವಾರುಗಳಿಗೆ ಮೇವಿನ ಅಭಾವವಾಗದಂತೆ ಎಚ್ಚರಿಕೆ ವಹಿಸಿ, ಬರ ಪರಿಸ್ಥಿತಿಯನ್ನು ಸಮರ್ಥವಾಗಿ ನಿರ್ವಹಿಸಬೇಕು ಎಂದು ಪಶುಸಂಗೋಪನೆ ಮತ್ತು ಮೀನುಗಾರಿಕೆ ಇಲಾಖೆ ಕಾರ್ಯದರ್ಶಿ ಹಾಗೂ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸಲ್ಮಾಕೆ.ಫಾಹಿಂ ಅಧಿಕಾರಿಗಳಿಗೆ ಸೂಚಿಸಿದರು.
    ದೇವನಹಳ್ಳಿ ತಾಪಂ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು. ಪ್ರಸಕ್ತ ಸಾಲಿನಲ್ಲಿ ಜನವರಿ 1 ರಿಂದ ಅಕ್ಟೋಬರ್ 26 ರವರೆಗೆ 716 ಮಿಮೀ ವಾಡಿಕೆ ಮಳೆಗೆ 598 ಮಿ.ಮೀ ಮಳೆಯಾಗಿದ್ದು, ಶೇ.17 ಮಳೆ ಕೊರತೆಯಾಗಿದೆ. ಜಿಲ್ಲೆಯಲ್ಲಿ ರಾಗಿ ಪ್ರಮುಖ ಬೆಳೆಯಾಗಿದ್ದು, ತೆನೆ ಕಚ್ಚುವ ಹಂತದಲ್ಲಿದೆ. ಮಳೆ ಕೊರತೆಯಿಂದ ಇಳುವರಿ ಕಡಿಮೆಯಾಗಿದೆ ಎಂದು ವಿವರಿಸಿದರು.
    ಎಲ್ಲಿಯೂ ಕುಡಿಯುವ ನೀರು ಸಮಸ್ಯೆ ಆಗದಂತೆ ಕ್ರಮವಹಿಸಿ ಅವಶ್ಯವಿದ್ದಲ್ಲಿ ಖಾಸಗಿಯಾಗಿ ಕುಡಿಯುವ ನೀರು ಪೂರೈಕೆ ವ್ಯವಸ್ಥೆ ಮಾಡಿಕೊಳ್ಳಿ ಎಂದ ಅವರು ಜಾನುವಾರುಗಳಿಗೆ ಮೇವು ಕೊರತೆ ಉಂಟಾಗದಂತೆ ಕ್ರಮವಹಿಸಿ, ಮೇವು ಸಂಗ್ರಹ ಕೇಂದ್ರಗಳನ್ನು ತೆರೆದು ರೈತರಿಗೆ ಮಾಹಿತಿ ನೀಡಬೇಕು ಎಂದು ಪಶುಪಾಲನ ಇಲಾಖೆಗೆ ತಾಕೀತು ಮಾಡಿದರು.
    ಪಟಾಕಿ ದಾಳಿಗೆ ಸೂಚನೆ: ಮಾದಕ ವಸ್ತುಗಳ ಮಾರಾಟ ಸೇರಿ ಅಕ್ರಮ ಚಟುವಟಿಕೆಗಳಿಗೆ ಕಡಿವಾಣ ಹಾಕಲು ಹೆಚ್ಚಿನ ಕ್ರಮ ವಹಿಸಿ, ಮಾಲಿನ್ಯಕಾರಕ ಪಟಾಕಿ ಮಾರಾಟ, ಸಾಗಾಟ, ಅಂಗಡಿಗಳ ಮೇಲೆ ದಾಳಿ ನಡೆಸಿ, ಅವರ ವಿರುದ್ಧ ಕ್ರಮ ವಹಿಸಿ ಹಸಿರು ಪಟಾಕಿ ಮಾರಾಟಕ್ಕೆ ಅನುಮತಿ ನೀಡಿ ಎಂದು ಪೊಲೀಸರಿಗೆ ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts